ಕಲಬುರಗಿ: ಕೆಕೆಆರ್ ಡಿಬಿ ಅಧ್ಯಕ್ಷರಾದವರಿಗೆ ಸೋಲಿನ ಕಳಂಕ ಮುಂದುವರಿಕೆ


Team Udayavani, May 13, 2023, 1:38 PM IST

ಕಲಬುರಗಿ: ಕೆಕೆಆರ್ ಡಿಬಿ ಅಧ್ಯಕ್ಷರಾದವರಿಗೆ ಸೋಲಿನ ಕಳಂಕ ಮುಂದುವರಿಕೆ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ ಡಿಬಿ) ಅಧ್ಯಕ್ಷರಾದವರು ಚುನಾವಣೆಯಲ್ಲಿ ಸೋಲುತ್ತಾರೆ ಎಂಬ ಕಳಂಕ ಮತ್ತೆ ಸಾಬೀತಾಗಿದೆ.

ಪ್ರಸಕ್ತ 2018-23 ರ ಅವಧಿಯಲ್ಲಿ ಕೆಕೆಆರ್ ಡಿಬಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಕಲಬುರಗಿ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದತ್ತಾತ್ರೇಯ ಪಾಟೀಲ್ ರೇವೂರ ಹಾಗೂ ಹುಮನಾಬಾದ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಪಾಟೀಲ್ ಹುಮನಾಬಾದ್ ಸೋಲುವ ಮೂಲಕ ಸೋಲಿನ ನಂಟು ನಿರೂಪಿಸಿದೆ.

2018 ರಲ್ಲಿ ಜೆಡಿಎಸ್- ಕಾಂಗ್ರೆಸ್ ಸರ್ಕಾರ ರಚನೆಯಾಗಿ ಎಚ್. ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಖಾತೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಜತೆಗೆ ಕೆಕೆಆರ್ ಡಿಬಿ ಅಧ್ಯಕ್ಷರಾಗಿದ್ದರು.‌ ಒಂದು ಸಭೆ ನಡೆಸಿದ ನಂತರ ಜೆಡಿಎಸ್- ಕಾಂಗ್ರೆಸ್ ಸರ್ಕಾರ ಪತನಗೊಂಡಿತು.‌ ಈಗ ಹುಮನಾಬಾದ್ ಕ್ಷೇತ್ರದಲ್ಲಿ ರಾಜಶೇಖರ ಪಾಟೀಲ್ ಹುಮನಾಬಾದ್ ಸೋಲು ಅನುಭವಿಸಿದ್ದು, ಇಲ್ಲಿ ಬಿಜೆಪಿಯ ಅಭ್ಯರ್ಥಿ ಸಿದ್ದು ಪಾಟೀಲ್ ಗೆಲುವು ಸಾಧಿಸಿದ್ದಾರೆ.‌

ಇದನ್ನೂ ಓದಿ:ಕಾರ್ಕಳ: ಮುನಿಯಾಲು- ಮುತಾಲಿಕ್ ಹೋರಾಟದ ನಡುವೆ ಮತ್ತೆ ಕಮಲ ಅರಳಿಸಿದ ಸುನಿಲ್ ಕುಮಾರ್

ಜೆಡಿಎಸ್- ಕಾಂಗ್ರೆಸ್ ಸರ್ಕಾರ ಪತನ ನಂತರ ಬಿಜೆಪಿ ಸರ್ಕಾರ ರಚನೆಯಾದ ಮೇಲೆ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದ ದತ್ತಾತ್ರೇಯ ಪಾಟೀಲ್ ರೇವೂರ  ಅವರನ್ನು ಕೆಕೆಆರ್ ಡಿಬಿ ಗೆ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿತ್ತು.‌ ಇಂದಿನ ದಿನದವರೆಗೂ ಇವರೇ ಅಧ್ಯಕ್ಷರಾಗಿದ್ದರು.  ಆದರೆ ಈಗ ಸೋತಿದ್ದು, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಅಲ್ಲಮಪ್ರಭು ಪಾಟೀಲ್ ಗೆಲುವು ಸಾಧಿಸಿದ್ದಾರೆ. ‌

ಅದಲ್ಲದೇ ಈ ಮುಂಚಿನ ಅಂದರೆ 2008-13ರ ಅವಧಿಯಲ್ಲಿ ಪ್ರಥಮ ಅವಧಿಗೆ ಆಗ ಪೌರಾಡಳಿತ ಸಚಿವರಾಗಿದ್ದ ಖಮರುಲ್ ಇಸ್ಲಾಂ ಕೆಕೆಆರ್ ಡಿಬಿ ಅಧ್ಯಕ್ಷರಾಗಿ, ತದನಂತರ ವೈದ್ಯಕೀಯ ಶಿಕ್ಷಣ ಸಚಿವ ಡಾ.‌ಶರಣಪ್ರಕಾಶ ಪಾಟೀಲ್ ಹಾಗೂ ಕೊನೆ‌ ಅವಧಿಯಲ್ಲಿ ಉನ್ನತ ಶಿಕ್ಷಣ ಶಿಕ್ಷಣ ಸಚಿವರಾಗಿದ್ದ ಬಸವರಾಜ ರಾಯರೆಡ್ಡಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು. ಖಮರುಲ್ 2018ರ ಚುನಾವಣೆ ಹೊತ್ತಿಗೆ ಕೊನೆಯುಸಿರೆಳೆದರೆ ಡಾ. ಶರಣಪ್ರಕಾಶ ಪಾಟೀಲ್ 2018ರ ಚುನಾವಣೆಯಲ್ಲಿ ಸೇಡಂ ಕ್ಷೇತ್ರದಲ್ಲಿ ಹಾಗೂ ಬಸವರಾಜ ರಾಯರೆಡ್ಡಿ ಯಲಬುರ್ಗಾ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದರು. ಈಗ ಡಾ. ಶರಣಪ್ರಕಾಶ ಪಾಟೀಲ್ ಹಾಗೂ ಬಸವರಾಜ ರಾಯರೆಡ್ಡಿ ಗೆಲುವು ಸಾಧಿಸಿದ್ದಾರೆ.

ಕೆಕೆಆರ್ ಡಿಬಿ ಅಧ್ಯಕ್ಷರಾದವರಿಗೆ ನಂಟು ಎಂಬುದಾಗಿ ಉದಯವಾಣಿಯಲ್ಲಿ  ಕಳೆದ ಮೇ 1ರಂದು ವಿಶೇಷ ವರದಿ ಪ್ರಕಟಿಸಲಾಗಿತ್ತು.‌ಈ ವಿಶೇಷ ವರದಿ ಭಾರಿ ಸದ್ದು  ಮಾಡಿತ್ತು. ಹೀಗಾಗಿ ಕಳಂಕ ಮುಂದುವರೆಯುತ್ತದೆಯೋ ಇಲ್ಲವೇ ಮುರಿಯುತ್ತದೆ ಎಂಬುದರ ಕುರಿತು ತೀವ್ರ ಕುತೂಹಲ ಮೂಡಿಸಿತ್ತು.‌

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.