22ರಂದು ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆ: ಪೂರ್ವ ಸಿದ್ಧತೆ

Team Udayavani, Nov 17, 2019, 11:37 AM IST

ಕಲಬುರಗಿ: ಇದೇ ನವೆಂಬರ್ 22 ರಂದು ಕಲಬುರಗಿ ವಿಮಾನ ನಿಲ್ದಾಣವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟನೆ ಮಾಡಲಿದ್ದು, ಇದಕ್ಕಾಗಿ ಪೂರ್ವ ಸಿದ್ಧತೆಗಳು ನಡೆದಿವೆ.

22ರಂದು ಮಧ್ಯಾಹ್ನ 1.35 ಕ್ಕೆ ಬೆಂಗಳೂರು ಕೆಂಪೆಗೌಡ ವಿಮಾನ ನಿಲ್ದಾಣದಿಂದ ಸ್ಟಾರ್ ಏರ್ ಸಂಸ್ಥೆಯ ವಿಮಾನದ ಮೂಲಕ ಕಲಬುರಗಗೆ ಆಗಮಿಸಿ ಉದ್ಘಾಟನೆ ನೆರವೇರಿಸುವರು.

ಉದ್ಘಾಟನೆ ಸಮಾರಂಭ ಐತಿಹಾಸಿಕವಾಗಿ ನೆರವೇರಿಸುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಉದ್ಯಮಿಗಳು, ಗಣ್ಯರು, ಜನಪ್ರತಿನಿಧಿಗಳು ಸೇರಿದಂತೆ 5000 ಜನರಿಗೆ ಆಸನದ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಗಿದೆ. ಉದ್ಘಾಟನೆ ನಂತರ ಸಮಾರಂಭ ಉದ್ದೇಶಿಸಿ ಮುಖ್ಯಮಂತ್ರಿಗಳು ಭಾಷಣ ಮಾಡಲಿದ್ದಾರೆ.

ಕೇಂದ್ರದ ವಿಮಾನಯಾನ ಸಚಿವರು, ಡಿಸಿಎಂ ಗೋವಿಂದ ಕಾರಜೋಳ, ಬೃಹತ್‌ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸೇರಿದಂತೆ ಇತರ ರು ಪಾಲ್ಗೊಳ್ಳುವರು.

ವಿಮಾನ ನಿಲ್ದಾಣ ಉದ್ಘಾಟನೆಯ ಸಿದ್ದತೆಗಳನ್ನು ಕಲಬುರಗಿ ಜಿಲ್ಲಾಧಿಕಾರಿ ಬಿ ಶರತ್,  ಡಿಸಿಪಿ ಹಾಗೂ ವಿಮಾನಯಾನ ಅಧಿಕಾರಿಗಳು ರವಿವಾರ ಬೆಳಿಗ್ಗೆ ವಿಮಾನ ನಿಲ್ದಾಣ ತೆರಳಿ ಪರಿಶೀಲನೆ ನಡೆಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ