ಮೂರು ಲಕ್ಷ ಯುವಕರಿಗೆ ತರಬೇತಿ: ಶ್ರೀ ರವಿಶಂಕರ ಗುರೂಜಿ

ಉದ್ಯೋಗಕ್ಕಾಗಿ ಯುವಕರನ್ನು ಜಪಾನ್‌ಗೆ ಕಳಿಸುವ ವ್ಯವಸ್ಥೆ

Team Udayavani, Feb 3, 2020, 10:39 AM IST

3-Febrauary-1

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಯುವಕರಿಗೆ ಉದ್ಯೋಗದ ತರಬೇತಿ ನೀಡಿ ಜಪಾನ್‌ಗೆ ಕಳಿಸುವ ವ್ಯವಸ್ಥೆಯನ್ನು ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಮತ್ತು ದಿ ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥೆಗಳು ಜೊತೆಗೂಡಿ ಮಾಡಲಿದೆ ಎಂದು ದಿ ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥಾಪಕ ಶ್ರೀ ರವಿಶಂಕರ ಗುರೂಜಿ ಹೇಳಿದರು.

ನಗರದ ಶರಣಬಸವೇಶ್ವರ ಶತಮಾನೋತ್ಸವ ಸಭಾಂಗಣದಲ್ಲಿ ರವಿವಾರ ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಂಸ್ಥಾಪನಾ ದಿನ, ಉದ್ಯಮಿಗಳಿಗೆ ಪ್ರಶಸ್ತಿ ಪ್ರದಾನ ಮಾಡುವ ಸಮಾರಂಭದಲ್ಲಿ ಅವರು ಮಾತನಾಡಿದರು.

ಜಪಾನಿನಲ್ಲಿ ಮೂರು ಲಕ್ಷ ಭಾರತೀಯ ಯುವಕರಿಗೆ ಉದ್ಯೋಗ ನೀಡುವಂತೆ ಕೇಂದ್ರ ಸರ್ಕಾರ ಅಲ್ಲಿನ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಆದರೆ, ನಮ್ಮ ಯುವಕರು ತೆರಳುಲು ಮನಸ್ಸು ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಮ್ಮ ಯುವಕರಿಗೆ ನಮ್ಮೂರಲ್ಲೇ ನಮಗೆ ಕೆಲಸ ಸಿಗಬೇಕೆಂದು ಜನರು ಬಯಸುತ್ತಾರೆ. ಹೀಗಾಗಿ ವಿದೇಶಗಳಲ್ಲಿ ಕೆಲಸಕ್ಕೆ ಹೋಗಲು ಹಿಂಜರಿಯುತ್ತಾರೆ. ಕೀಳರಿಮೆ ಭಾವನೆಯಿಂದ ಹೊರ ಬಂದರೆ, ಆರ್ಥಿಕ ಸ್ಥಿತಿ ಸುಧಾರಿಸಿಕೊಳ್ಳಲು ಸಾಧ್ಯ. ಆದ್ದರಿಂದ ಜಪಾನಿಗೆ ಮೂರು ಲಕ್ಷ ಯುವಕರನ್ನು ಕಳಿಸುವ ಕಾರ್ಯ ನಡೆದಿದೆ. ಜಪಾನ್‌ನಲ್ಲಿ ಅಗತ್ಯವಿರುವ ಎಲ್ಲ ತರಬೇತಿ ನೀಡಿ, ಕಲ್ಯಾಣ ಕರ್ನಾಟಕ ಭಾಗದ ಯುವಕರಿಗೆ ಉದ್ಯೋಗ ಕೊಡಿಸುವ ಯೋಚನೆ ಹೊಂದಲಾಗಿದೆ. ಈಗಾಗಲೇ ಕಲ್ಯಾಣ ಕರ್ನಾಟಕದಲ್ಲಿ ಅಭಿವೃದ್ಧಿ ಪರ್ವ ಶುರುವಾಗಿದೆ. ಉದ್ಯಮ ಸ್ಥಾಪನೆಗೆ ಕಲಬುರಗಿ ಜಿಲ್ಲೆ ಪೂರಕವಾಗಿದೆ. ಈ ಭಾಗದ ಯುವಕರಿಗೆ ಉದ್ಯೋಗ ಸಿವಂತಾಗಬೇಕೆಂದು ನುಡಿದರು.

ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಮರನಾಥ ಪಾಟೀಲ ಮಾತನಾಡಿ, ಎಚ್‌ಕೆಸಿಸಿಐ ಈ ಭಾಗದಲ್ಲಿ ಅಭಿವೃದ್ಧಿಗೆ ತನ್ನದೇ ಆದ ಶ್ರಮವಹಿಸುತ್ತಿದೆ.ಉತ್ತಮ ಕಾರ್ಯ ನಿರ್ವಹಿಸುವ ಮೂಲಕ ಉದ್ಯಮಿದಾರರ ಬೆನ್ನೆಲುಬಾಗಿ ಕೆಲಸ ಮಾಡುತ್ತಿದೆ ಎಂದರು.

ಸಂಸದ ಡಾ| ಉಮೇಶ ಜಾಧವ ಮಾತನಾಡಿದರು. ಶರಣಬಸವೇಶ್ವರ ಮಹಾ ದಾಸೋಹದ ಪೀಠಾಧಿಪತಿ ಡಾ| ಶರಣಬಸವಪ್ಪ ಅಪ್ಪ, ಖಾಜಾ ಬಂದಾ ನವಾಜ್‌ ದರ್ಗಾದ ಪೀಠಾಧೀಪತಿ ಡಾ| ಸೈಯದ್‌ ಶಹಾ ಖುಸ್ರೋ ಹುಸೇನಿ ಸಾನ್ನಿಧ್ಯ ವಹಿಸಿದ್ದರು. ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮಡು, ರಾಜಕುಮಾರ ಪಾಟೀಲ ತೇಲ್ಕೂರ, ಹಿರಿಯ ಉದ್ಯಮಿ ಡಾ| ಎಸ್‌.ಎಸ್‌. ಪಾಟೀಲ ಕಡಗಂಚಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಶರಣು ಪಪ್ಪಾ, ಶಶಿಕಾಂತ ಪಾಟೀಲ, ರವಿಕುಮಾರ ಸರಸಂಬಿ, ಆನಂದ ದಂಡೋತಿ, ಆರ್‌.ಕೆ. ಜಗದೀಶ ಕಡಗಂಚಿ, ಶಿವರಾಜ ಇಂಗಿನ್‌, ಚನ್ನಬಸಯ್ಯ ನಂದಿಕೋಲಮಠ, ಮಹೇಶ ರಂಗದಾಳ, ಗೋಪಾಲ ಬುಚನಳ್ಳಿ ಹಾಜರಿದ್ದರು.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.