ಇಬ್ಬರು ಹೆಣ್ಣು ಮಕ್ಕಳಿಗೆ ವಿಷ ಕುಡಿಸಿ, ರೈಲಿಗೆ ತಲೆಕೊಟ್ಟ ತಂದೆ!
Team Udayavani, Jan 3, 2020, 2:54 PM IST
ಕಲಬುರಗಿ: ಇಬ್ಬರು ಹೆಣ್ಣು ಮಕ್ಕಳಿಗೆ ವಿಷ ಕುಡಿಸಿ ಹತ್ಯೆ ಮಾಡಿದ ತಂದೆಯೋರ್ವ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ.
ಮಿರಿಯಾಣ ಪೊಲೀಸ್ ಠಾಣೆ ವ್ಯಾಪ್ತಿಯ ಭೈರಂಪಳ್ಳಿ ತಾಂಡಾದ ಸಂಜು ಆಲಿಯಾಸ್ ಕುಮ್ಶೆಟ್ಟಿ (35) ಎಂಬಾತ ಗುರುವಾರ ರಾತ್ರಿ ತನ್ನ ಮಕ್ಕಳಾದ ರೋಹಿತಾ (4), ಪರ್ವಿತಾ (2) ವಿಷ ಕುಡಿಸಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ತೆಲಂಗಾಣದ ತಾಂಡೂರು ಬಳಿ ಆರೋಪಿ ಸಂಜು ರೈಲು ಹಳಿಗೆ ತಲೆ ಕೊಟ್ಟಿದ್ದಾನೆ. ಈ ಮೂಲಕ ತನ್ನ ಮಕ್ಕಳಿಗೆ ವಿಷವುಣಿಸಿ ಕೊಲೆಗೈಯ್ದ ತಂದೆ ಆತ್ಮಹತ್ಯೆಗೆ ಶರಣಾಗಿದ್ದೇನೆ.
ಸಂಜು (35) ಡಿಪ್ಲೋಮಾ ಪೂರೈಸಿದ್ದ ಹೈದರಾಬಾದ್ ನಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚಿಗೆ ತಾಂಡಾಕ್ಕೆ ಬಂದಿದ್ದ. ಮದ್ಯವ್ಯಸನಿಯಾಗಿರುವ ಈತ ಮತ್ತು ಪತ್ನಿ ಮಧ್ಯೆ ಹೊಂದಾಣಿಕೆ ಇರಲಿಲ್ಲ. ಇದೇ ಕಾರಣ ಮಕ್ಕಳನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಎಸ್ಪಿ ಯಾಡಾ ಮಾರ್ಟಿನ ಮಾರ್ಬನ್ಯಾಂಗ್ ಹಾಗೂ ಪೊಲೀಸರು ತಾಂಡಾಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!