ಕಲಬುರಗಿ ಗುಬ್ಬಿ ಕಾಲೋನಿಯಲ್ಲಿ ಸರಣಿ ಕಳ್ಳತನ

Team Udayavani, Jan 10, 2020, 10:55 AM IST

10-January-2

ಕಲಬುರಗಿ: ನಗರದ ಗುಬ್ಬಿ ಕಾಲೋನಿಯಲ್ಲಿ ಸರಣಿ ಮನೆಗಳ್ಳತನ ಪ್ರಕರಣಗಳು ನಡೆದಿದ್ದು, ಒಂದೇ ಮನೆಯಲ್ಲಿ 1.40 ಕೋಟಿ ರೂ. ಮೌಲ್ಯದ ನಗ-ನಾಣ್ಯ ದೋಚಿ ಖದೀಮರು ಪರಾರಿಯಾಗಿದ್ದಾರೆ.

ಮತ್ತೊಂದು ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಕಳ್ಳರ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಲೋಕೋಪಯೋಗಿ ಇಲಾಖೆ ನಿವೃತ್ತ ಮುಖ್ಯ ಕಾರ್ಯ ನಿರ್ವಾಹಕ ಅಭಿಯಂತರ ಮಾರುತಿ ಗೋಖಲೆ ಅವರ ಮನೆಯಲ್ಲಿ 1.40 ಕೋಟಿ ರೂ. ಮೌಲ್ಯದ ಹಣ ಮತ್ತು ಚಿನ್ನಾಭರಣ ಕಳ್ಳತನವಾಗಿದೆ. ಇವರ ಎದುರಿನ ಮನೆಯಲ್ಲಿದ್ದ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ರೇವಣಸಿದ್ದಪ್ಪ ಮನೆಯಲ್ಲಿ 10 ಲಕ್ಷ ರೂ. ಬಾಳುವ ಚಿನ್ನಾಭರಣ ದೋಚಲಾಗಿದೆ. ಹಿಂಬದಿ ಮನೆಯ ವೈದ್ಯರಾದ ಡಾ| ವೀಣಾ ಪಾಟೀಲ ಮನೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದೆ.

ಖದೀಮರ ಕೈಚಳಕ: ಇಬ್ಬರು ನಿವೃತ್ತ ಅಧಿಕಾರಿಗಳ ಮನೆ ಗುರಿಯಾಗಿಸಿಕೊಂಡೇ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ಎರಡೂ ಮನೆಗಳಲ್ಲಿ ಯಾರೂ ಇಲ್ಲದ ಸಮಯದಲ್ಲೇ
ಖದೀಮರು ಮನೆಗಳಿಗೆ ನುಗ್ಗಿ ಕೈಗೆ ಸಿಕ್ಕಿದ್ದನ್ನು ದೋಚಿ ಪರಾರಿಯಾಗಿದ್ದಾರೆ.

ಮಾರುತಿ ಗೋಖಲೆ ಜ.6ರಂದು ತಮ್ಮ ಕುಟುಂಬದೊಂದಿಗೆ ಬೆಂಗಳೂರಿಗೆ ಹೋಗಿದ್ದರು. ಇದೇ ಸಮಯ ಸಾಧಿಸಿ ಕಳ್ಳರು ಮನೆಯ ಬೀಗ ಮುರಿದು ಸುಮಾರು 1.40 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಕಳವಾದ ನಗದು ಮತ್ತು ಚಿನ್ನಾಭರಣದ
ಮೌಲ್ಯದ ಬಗ್ಗೆ ಮನೆಯವರಾಗಲಿ, ಪೊಲೀಸರಾಗಲಿ ಇನ್ನೂ ಖಚಿತ ಪಡಿಸಿಲ್ಲ. ನಿವೃತ್ತ ಬಿಇಒ ರೇವಣಸಿದ್ದಪ್ಪ ಅವರ ಮನೆಯ ಹಿಂದಿನ ಕಿಟಕಿಯ ಗ್ರಿಲ್ಸ್‌ಗಳನ್ನು ಮುರಿದು ಮನೆಯೊಳಗೆ ಖದೀಮರು ನುಗ್ಗಿದ್ದಾರೆ.

ಇವರ ಮನೆಯಲ್ಲಿ ಸುಮಾರು 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಲ್ಲದೇ, ಪ್ರಿಡ್ಜ್ದಲ್ಲಿದ್ದ ಹಣ್ಣು-ಹಂಪಲು ಅಲ್ಲಿಯೇ ಬೀಸಾಕಿ ಹೋಗಿದ್ದಾರೆ. ಮಕ್ಕಳನ್ನು ನೋಡಲು ಪತ್ನಿಯೊಂದಿಗೆ ಬೆಂಗಳೂರಿಗೆ ಹೋಗಿದ್ದೆವು. ಬರುವಷ್ಟರಲ್ಲಿ ಮನೆಯಲ್ಲಿ ನಗದು, ಆಭರಣ, ಬೆಳ್ಳಿಯ ದೇವರ ಮೂರ್ತಿ ದೋಚಲಾಗಿದೆ ಎಂದು ರೆವಣಸಿದ್ದಪ್ಪ ಹರಸೂರ ಮಾಹಿತಿ ನೀಡಿದ್ದಾರೆ.

ಡಾ| ವೀಣಾ ಮನೆಯಲ್ಲಿ ದೃಶ್ಯ ಸೆರೆ: ಎರಡೂ ಮನೆಗಳಿಗೆ ನುಗ್ಗುವ ಮೊದಲು ಡಾ| ವೀಣಾ ಪಾಟೀಲ ಅವರ ಮನೆಗೆ ಕಳ್ಳರು ನುಗ್ಗಿದ್ದಾರೆ. ಓರ್ವ ಕಳ್ಳ ಮುಸುಕು ಹಾಕಿಕೊಂಡಿದ್ದರೆ,
ಮತ್ತೂಬ್ಬ ಕಳ್ಳ ಹಾಗೆಯೇ ಬಂದಿದ್ದು, ಮನೆಯ ಒಳ ನುಗ್ಗಲು ಹಾದಿ ಹುಡುಕಾಟ ನಡೆಸುತ್ತಿರುವ ದೃಶ್ಯ ಡಾ| ವೀಣಾ ಪಾಟೀಲ ಮನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೇ, ಕಿಟಕಿ ಬಂದೋಬಸ್ತ್ ಇರೋದು ಖಾತ್ರಿಯಾಗಿ, ಮನೆಯ ಮೇಲಿನವರೆಗೂ ನೋಡಿಕೊಂಡು ಹೋಗುವುದು ಮತ್ತು ಮನೆಯೊಳಗೆ ಹೋಗಲು ಅವಕಾಶ ಸಿಗದೇ ಇದ್ದಾಗ ಗೋಡೆ ಹಾರಿ ಗೋಖಲೆ ಮನೆಯೊಳಗೆ ನುಗ್ಗಿದ್ದು ಸಿಸಿಟಿವಿಯಲ್ಲಿ ದಾಖಲಾಗಿದೆ. ನಗರ ಪೊಲೀಸ್‌ ಆಯುಕ್ತ ಎಂ.ಎನ್‌. ನಾಗರಾಜ, ಉಪ ಆಯುಕ್ತ ಕಿಶೋರಬಾಬು ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ಎಂ.ಬಿ.ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಯಲ್ಲಿ ಯಾರೂ ಇಲ್ಲದೇ
ಇರುವಾಗ ಕಳ್ಳತನಗಳು ನಡೆದಿದೆ.
ಸಿಸಿಟಿವಿ ದೃಶ್ಯಗಳನ್ನು ಆಧರಿಸಿ
ಆರೋಪಿಗಳ ಬಂಧನಕ್ಕೆ ಜಾಲ
ಬೀಸಲಾಗಿದೆ. ಶೀಘ್ರವೇ ಆರೋಪಿಗಳನ್ನು
ಬಂಧಿಸಲಾಗುವುದು.
ಎಂ.ಎನ್‌. ನಾಗರಾಜ,
ನಗರ ಪೊಲೀಸ್‌ ಆಯುಕ್ತರು

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.