ಒಂದೇ ಕಾಮಗಾರಿ: ಎರಡು ಅನುದಾನ ಬಳಕೆ!


Team Udayavani, Nov 26, 2020, 4:22 PM IST

ಒಂದೇ ಕಾಮಗಾರಿ: ಎರಡು ಅನುದಾನ ಬಳಕೆ!

ಕಲಬುರಗಿ: ರೇಷ್ಮೆ ಹಾಗೂ ತೋಟಗಾರಿಕೆ ಇಲಾಖೆಯ ಹನಿ ನೀರಾವರಿ ಫ‌ಲಾನುಭವಿಗಳ ಆಯ್ಕೆ ಹಾಗೂ ಕಾಮಗಾರಿ ಕೈಗೊಳ್ಳುವಲ್ಲಿ ನಡೆದಿರುವ ಭ್ರಷ್ಟಾಚಾರದಲ್ಲಿ ಅಧಿಕಾರಿಗಳು ಭಾಗಿಯಾಗಿರುವ ವಿಷಯ ಕುರಿತು ಬುಧವಾರ ನಡೆದ ಕೆಡಿಪಿ ಸಭೆಯಲ್ಲಿ ಕಾವೇರಿದ ಚರ್ಚೆ ನಡೆಯಿತು.

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಸುವರ್ಣಾ ಮಲಾಜಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯಿಂದ ಒಂದೇ ಕಾಮಗಾರಿಗಾಗಿ ಎರಡು ಇಲಾಖೆಗಳಿಂದ ಅನುದಾನ ಪಡೆದು, ಕೆಲಸ ಕೂಡಾ ಮಾಡದೇ ಇರುವಪ್ರಕರಣವನ್ನು ಬೆಳಕಿಗೆ ತರಲಾಯಿತು. ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿಸಮಿತಿ ಅಧ್ಯಕ್ಷ ಗುರುಶಾಂತಗೌಡ ಪಾಟೀಲ ಪ್ರಕರಣಪ್ರಸ್ತಾಪಿಸಿ, ಅಧಿಕಾರಿಗಳು ಭ್ರಷ್ಟಾಚಾರ ಎಸಗಿ ಸರ್ಕಾರಕ್ಕೆ ವಂಚಿಸಿರುವ ಕುರಿತು ದಾಖಲೆ ಸಮೇತ ಸಭೆಗೆ ವಿವರಿಸಿದರು.

ತೋಟಗಾರಿಕೆ ಇಲಾಖೆ ಉಪನಿರ್ದೇಶಕರುಫ‌ಲಾನುಭವಿಗಳ ಆಯ್ಕೆಯಲ್ಲಿ ಲೋಪವಾಗಿರುವುದನ್ನು ಒಪ್ಪಿಕೊಂಡರು. ಅಲ್ಲದೇ ಈ ಕುರಿತು ತನಿಖಾ ವರದಿ ನಿರೂಪಿಸಿದೆ ಎಂದರು. ತದನಂತರ ಗೋಲ್‌ ಮಾಲ್‌ದಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಅನುದಾನ ದುರ್ಬಳಕೆಮಾಡಿಕೊಂಡಿರುವುದನ್ನು ವಸೂಲಾತಿ ಮಾಡಬೇಕು. ಈ ಕುರಿತು ಮೇಲಾಧಿಕಾರಿಗಳಿಗೆ ಶಿಸ್ತು ಕ್ರಮದ ವರದಿ ಸಲ್ಲಿಸುವಂತೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಹಾಗೂ ಸಿಇಒ ಅಧಿಕಾರಿಗಳಿಗೆ ಸೂಚಿಸಿದರು.

ಜಮೀನು ದುರಸ್ತಿಗೆ ಪ್ರಸ್ತಾವನೆ: ಪ್ರವಾಹದ ನೀರಿನಿಂದ ಕೆರೆ ಒಡೆದು ಫಲವತ್ತಾದ ಜಮೀನು ಹಾಳಾಗಿದೆ. ಜಮೀನಿನ ದುರಸ್ತಿಗಾಗಿ ಸರಕಾರಕ್ಕೆ ಅನುದಾನ ಕಲ್ಪಿಸುವುದಕ್ಕಾಗಿ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಯಿತು. ಪ್ರವಾಹ ನೀರಿನಿಂದ ಜಮೀನಿನಲ್ಲಿ ಕೆಲವೆಡೆ 8ರಿಂದ 10 ಅಡಿ ಫಲವತ್ತಾದ ಮಣ್ಣು ಕೊಚ್ಚಿಹೋಗಿದೆ. ಎನ್‌ ಡಿಆರ್‌ಎಫ್‌ ನಿಧಿಯಿಂದ ಈ ನಷ್ಟ ಭರಿಸಲು ಹಣ ಸಾಕಾಗುವುದಿಲ್ಲ. ಆದ್ದರಿಂದ ಸರ್ಕಾರಕ್ಕೆ ಅಗತ್ಯ  ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಸ್ಥಾಯಿ ಸಮಿತಿ ಸದಸ್ಯರು ಸಭೆ ಗಮನ ಸೆಳೆದರು. ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಸುವರ್ಣಾ ಹಣಮಂತ ಮಲಾಜಿ ಮಾತನಾಡಿ, ಕೂಡಲೇ ಸರ್ಕಾರಕ್ಕೆ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಪ್ರವಾಹದಿಂದಾಗಿ 10 ಕೆರೆಗಳು ಸಂಪೂರ್ಣ ಹಾನಿಯಾಗಿದ್ದು, 100 ಕೆರೆಗಳು ಭಾಗಶಃ ಹಾನಿಯಾಗಿವೆ. ಇದಕ್ಕಾಗಿ 95 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಜೋಳ ಮತ್ತಿತರ ಹಿಂಗಾರು ಬೆಳೆಗಳಿಗೆ ಅನುಕೂಲವಾಗಲು ತಿಂಗಳ ಕಾಲ ರೈತರು ಬಳಸುವ ಪಂಪ್‌ ಸೆಟ್‌ಗಳಿಗೆ ಸಮರ್ಪಕ ವಿದ್ಯುತ್‌ ಪೂರೈಸುವಂತೆ ಗುಲಬರ್ಗಾ ವಿದ್ಯುತ್ಛಕ್ತಿ ಸರಬರಾಜು ನಿಗಮ ನಿಯಮಿತದ ಕಾರ್ಯನಿರ್ವಾಹಕ ಇಂಜಿನಿಯರ್‌ಗೆ ಸೂಚಿಸಿದರು.

ಜೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್‌ ಮಾತನಾಡಿ, ದಿನಕ್ಕೆ ಏಳು ಗಂಟೆ ವಿದ್ಯುಚ ಕ್ತಿ ಪೂರೈಸಲಾಗುವುದು. ಜಿಲ್ಲೆಯಲ್ಲಿ ಈ ವರ್ಷ ಉತ್ತಮ ಮಳೆ ಆಗಿರುವ ಹಿನ್ನೆಲೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೀರಾವರಿ ಬೇಸಾಯ ಕೈಗೊಂಡಿದ್ದಾರೆ. ಹೀಗಾಗಿ ಕೇವಲ ಏಳು ಗಂಟೆಯಷ್ಟೆ ವಿದ್ಯುತ್‌ ಪೂರೈಸಲು ಸಾಧ್ಯ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತ್‌ ಉಪಾಧ್ಯಕ್ಷ ಶೋಭಾಸಿದ್ದು ಸಿರಸಗಿ ಮಾತನಾಡಿ, ಅಫಜಲಪುರ ತಾಲೂಕಿನ ಪ್ರವಾಹ ಸಂದರ್ಭದಲ್ಲಿ ಬಿದ್ದಿರುವ ವಿದ್ಯುತ್‌ ಕಂಬಗಳನ್ನು ಸರಿಪಡಿಸಬೇಕು. ಜನರು ಕರೆ ಮಾಡಿ ಕೇಳುತ್ತಿದ್ದಾರೆ ಎಂದು ತಿಳಿಸಿದರು. ಇದಕ್ಕೆ ಉತ್ತರಿಸಿದ ಜೆಸ್ಕಾಂ ಇಂಜಿನಿಯರ್‌ ಅವರು, ಅಫಜಲಪುರತಾಲೂಕಿನ ಬಿದ್ದಿದ ವಿದ್ಯುತ್‌ ಕಂಬಗಳನ್ನು ಶೇ. 72 ಕಾರ್ಯ ಮುಗಿದಿದೆ. ಸದ್ಯದಲ್ಲಿ ಎಲ್ಲ ಕಂಬಗಳನ್ನು ನೆಡಲಾಗುವುದು ಎಂದರು.

ಜಿ.ಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಗೌತಮ ವಿ. ಪಾಟೀಲ ಮಾತನಾಡಿ,ಚಿಂಚೋಳಿ ತಾಲೂಕಿನ ಪಂಪ್‌ಸೆಟ್‌ಗಳಿಗೆ ಟ್ರಾನ್ಸ್‌ ಫಾರ್ಮರ್‌ ಸಮಸ್ಯೆಗಳ ಬಗ್ಗೆ ಸಭೆ ಗಮನಕ್ಕೆ ತಂದರು. ರೈತರು ತಮ್ಮ ಖರ್ಚಿನಲ್ಲಿ ಸೇಡಂಗೆ ವಾಹನಗಳಲ್ಲಿಹೋಗಿ ಟ್ರಾನ್ಸ್‌ ಫಾರ್ಮರ್‌ ತರಬೇಕಾಗಿದೆ ವಿಷಾದ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಇಂಜಿನಿಯರ್‌ ಚಿಂಚೋಳಿಯ ವಿದ್ಯುತ್‌ ಸಬ್‌ ಸ್ಟೇಶನ್‌ನಲ್ಲೇ ರೈತರಿಗೆ ಟ್ರಾನ್ಸ್‌ಫಾರ್ಮರ್‌ ಪೂರೈಕೆ ಮಾಡುವಂತೆ ತಿಳಿಸಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಪಿ. ರಾಜಾ ಮಾತನಾಡಿ, ಜಿಲ್ಲೆಯಲ್ಲಿ 126 ಶಾಲೆಗಳಲ್ಲಿವಿದ್ಯುತ್‌ ಪೂರೈಕೆಯಾಗಿಲ್ಲ. ಈ ಬಗ್ಗೆ ಕಳೆದಸಭೆಯಲ್ಲಿ ಪ್ರಸ್ತಾಪಿಸಲಾಗಿತ್ತು. ಮುಂಬರುವ ಗ್ರಾಮ ಪಂಚಾಯತ್‌ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲೆಗಳಿಗೆ ವಿದ್ಯುತ್‌ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.

ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ದಿಲೀಪ ಆರ್‌. ಪಾಟೀಲ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಗುರುಶಾಂತಗೌಡ ಶಾಲಿವಾಹನ, ಜಿಲ್ಲಾ ಪಂಚಾಯತ್‌ ಮುಖ್ಯ ಯೋಜನಾಧಿಕಾರಿ ಕಿಶೋರ ಕುಮಾರ ದುಬ್ಬೆ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.

ಜಿಲ್ಲೆಯಲ್ಲಿ ಒಟ್ಟು 2,92,089 ಮಂದಿಗೆ ಕೋವಿಡ್‌ ತಪಾಸಣೆ ಮಾಡಲಾಗಿದೆ. ಇದರಲ್ಲಿ ಪಾಸಿಟಿವ್‌ 20,341, ಸಾವು 319, ಮನೆಯಲ್ಲಿ ವಾಸ 190, ಪದವಿ ಕಾಲೇಜು ಮಕ್ಕಳು ಹಾಗೂ ಸಿಬ್ಬಂದಿ ಸೇರಿ ಇಲ್ಲಿಯವರೆಗೆ 6,646 ಮಂದಿಗೆ ತಪಾಸಣೆ ಮಾಡಲಾಗಿದೆ. 11 ಮಂದಿಗೆ ಪಾಸಿಟಿವ್‌ ಬಂದಿದೆ. ಡಾ| ರಾಜಶೇಖರ ಎಸ್‌. ಮಾಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.