ಖಜೂರಿ ಕೊಲೆ-ದರೋಡೆ ಪ್ರಕರಣ: ಮೂವರ ಬಂಧನ

Team Udayavani, Jul 27, 2017, 3:05 PM IST

27-GUB-1.jpg

ಕಲಬುರಗಿ: ಜಿಲ್ಲೆಯ ಗಡಿ ಗ್ರಾಮ ಆಳಂದ ತಾಲೂಕಿನ ಖಜೂರಿಯಲ್ಲಿ ಮನೆಯೊಂದಕ್ಕೆ ನುಗ್ಗಿ ವೃದ್ಧೆಯನ್ನು ಕೊಚ್ಚಿ ಹಾಗೂ ಮನೆಯಲ್ಲಿದ್ದ ಐವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ್ದ ಅಂತಾರಾಜ್ಯ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ಏಪ್ರಿಲ್‌ 28ರಂದು ಖಜೂರಿ ಗ್ರಾಮದ ಸಿದ್ಧರಾಮ ಬಂಡೆ ಅವರ ಮನೆಗೆ ನುಗ್ಗಿದ ದರೋಡೆಕೋರರು ಸೋನುಬಾಯಿ ಎನ್ನುವ ವೃದ್ಧೆಗೆ ಚಾಕು ಹಾಗೂ ರಾಡುಗಳಿಂದ ಹೊಡೆದು ಕೊಲೆ ಮಾಡಿ, ಮನೆಯಲ್ಲಿದ್ದ ಸುಜಾತಾ, ಶ್ರೀದೇವಿ, ಸಿದ್ಧರಾಮ ಬಂಡೆ ಹಾಗೂ ಇಬ್ಬರು ಮಕ್ಕಳನ್ನು ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿ 13 ತೊಲಿ ಬಂಗಾರ ದರೋಡೆ ಮಾಡಿದ್ದರು. ಇದಾದ ಒಂದು ವಾರದ ನಂತರ ಇದೇ ಮನೆ ಮತ್ತೂಮ್ಮೆ ಕಳ್ಳತನವಾಗಿತ್ತು. ಹೀಗಾಗಿ ಪೊಲೀಸ್‌ರಿಗೆ ಈ ಪ್ರಕರಣ ಸವಾಲಾಗಿತ್ತು. ಈಗ ಪತ್ತೆ ಹಚ್ಚಲಾಗಿದೆ. ಈಗಾಗಲೇ ಕಲಬುರಗಿ ಅಲ್ಲದೇ ನೆರೆಯ
ಮಹಾರಾಷ್ಟ್ರದಲ್ಲೂ ಕೊಲೆ, ಸುಲಿಗೆ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿ ಒಮ್ಮೆಯೂ ಬಂಧನಕ್ಕೆ ಒಳಗಾಗದ ಕುಖ್ಯಾತ ಕಲಬುರಗಿ  ತಾಲೂಕಿನ ಮೇಳಕುಂದಾ (ಬಿ) ಗ್ರಾಮದ ಸಮ್ಯಾ ಅಲಿಯಾಸ್‌ ಶಮೀರ ರೇಲಪೂತ ಅಲಿಯಾಸ್‌ ಬಾಬು ಕಾಳೆ ಬಂಧಿತ ಪ್ರಮುಖ ಆರೋಪಿ. ಅದರಂತೆ ಮೇಳಕುಂದಾ ಗ್ರಾಮದ ರಾಹುಲ್‌ ಕಾರಜೋಳ ಬೋಸ್ಲೆ, ಆಳಂದ ತಾಲೂಕಿನ ಬೀರಪ್ಪ ಅಂದಪ್ಪ ತಡಲಗಿ ಬಂಧಿತ ಇನ್ನಿಬ್ಬರು ಆರೋಪಿಗಳು.

ಆರೋಪಿಗಳನ್ನು ಆಳಂದ ತಾಲೂಕಿನ ದೇವಂತಗಿ ಗ್ರಾಮದಲ್ಲಿ ಬಂಧಿಸಿ ಸುಮಾರು 9ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಈಶಾನ್ಯ ವಲಯ ಐಜಿಪಿ ಅಲೋಕಕುಮಾರ ಸುದ್ದಿಗಾರರಿಗೆ ತಿಳಿಸಿದರು.

ಪ್ರಮುಖ ಆರೋಪಿ ಸಮ್ಯಾ ಅಲಿಯಾಸ್‌ ಶಮೀರ್‌ ಎನ್ನುವಾತ ನಿಂಬರ್ಗಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸಿದ್ದಪ್ಪ ಬೋಸ್ಲೆ ಎಂಬಾತನ ಕೊಲೆ ಮಾಡಿದ್ದಲ್ಲದೆ ಕಲಬುರಗಿಯ ಅಶೋಕ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ರವಿ ಪವಾರ ಎನ್ನುವಾತನನ್ನು ಕೊಲೆ ಮಾಡಿದ್ದ. ಅಲ್ಲದೇ ಮಹಾರಾಷ್ಟ್ರದ ಕುರುಡವಾಡಿ ರೈಲ್ವೇ ಪೊಲೀಸ್‌ರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ಪ್ರಮುಖ ಆರೋಪಿಯೂ ಆಗಿದ್ದಾನೆ. ಇಷ್ಟೆಲ್ಲ ಕುಖ್ಯಾತಿ ಹೊಂದಿದ್ದರೂ ಪೊಲೀಸ್‌ರ ಕೈಗೆ ಸಿಕ್ಕಿರಲಿಲ್ಲ. ಈಗ ಬಂಧನವಾಗಿದ್ದಾನೆ. ಇನ್ನೂ ಮೂವರು ಆರೋಪಿಗಳನ್ನು ಬಂಧಿಸಬೇಕಾಗಿದೆ. ಕಾರ್ಯಾಚರಣೆ ನಡೆದಿದೆ ಎಂದು ವಿವರಿಸಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌. ಶಶಿಕುಮಾರ, ಹೆಚ್ಚುವರಿ ಎಸ್ಪಿ ಜಯಪ್ರಕಾಶ, ಡಿಎಸ್ಪಿ ಗಜಕೋಶ ಹಾಗೂ ಮುಂತಾದವರಿದ್ದರು.  

20 ಸಾವಿರ ರೂ. ಬಹುಮಾನ: ತನಿಖೆ ನಡೆಸಿ ಕುಖ್ಯಾತ ಆರೋಪಿಗಳನ್ನು ಬಂಧಿಸಿದ್ದಕ್ಕೆ ತನಿಖಾ ತಂಡಕ್ಕೆ ಈಶಾನ್ಯ ವಲಯ ಐಜಿಪಿ 20 ಸಾವಿರ ರೂ. ಬಹುಮಾನ ಘೋಷಿಸಿ, ಅಭಿನಂದನೆ ಸಲ್ಲಿಸಿದರು. ಆಳಂದ ಡಿಎಸ್ಪಿ ಪಿ.ಡಿ.ಗಜಕೋಶ, ಸಿಪಿಐ ಸೋಮಲಿಂಗ ಕಿರದಳ್ಳಿ, ಪಿಎಸ್‌ಐಗಳಾದ ಸುರೇಶ ಬಾಬು, ಉದ್ದಂಡಪ್ಪ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ತಂಡ ರಚಿಸಲಾಗಿತ್ತು.

ಬಯಲಿಗೆ ಬಂದದ್ದು ಹೇಗೆ?
ಆಳಂದ ತಾಲೂಕಿನ ಜಿಡಗಾ ಮಠ ಕಳ್ಳತನವಾಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧನವಾದ ನಂತರ ಕೂಲಂಕುಷವಾಗಿ ತನಿಖೆ ನಡೆಸಿದಾಗ ಬಂಗಾರವನ್ನು ಬೀರಪ್ಪ ಹತ್ತಿರ ಮಾರಾಟ ಮಾಡುತ್ತಿದ್ದರು ಎಂಬುದು ಪತ್ತೆಯಾಗಿದೆ. ಇದನ್ನೇ ಆಧಾರವಾಗಿ ಇಟ್ಟುಕೊಂಡು ತನಿಖೆ ನಡೆಸಿ ಕಾರ್ಯಾಚರಣೆ ಕೈಗೊಂಡಾಗ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಿದೆ. 

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.