ನುಡಿಗೂ ನಡೆಗೂ ಸಾಮ್ಯತೆಯಿರಲಿ: ಡಾ| ಚಂದ್ರಶೇಖರ

Team Udayavani, May 26, 2018, 1:22 PM IST

gul-2.jpg

ಕಲಬುರಗಿ: ಪೋಷಕರು ಮೊದಲ ಗುರುವಾದರೆ ಶಿಕ್ಷಕರು ಎರಡನೇ ಪೋಷಕರು. ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಇಬ್ಬರ ಪಾತ್ರವೂ ಬಹಳ ಮುಖ್ಯ ಎಂದು ಮನೋವೈದ್ಯ ಡಾ| ಸಿ.ಆರ್‌.ಚಂದ್ರಶೇಖರ ಹೇಳಿದರು.

ನಗರದ ವಿವೇಕಾನಂದ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ದೈವತ್ವವನ್ನು ಹೊರತರುವುದೇ ಶಿಕ್ಷಣದ ಮುಖ್ಯ ಉದ್ದೇಶವಾಗಿದೆ ಎಂದರು.

ನಮ್ಮಲ್ಲಿ ನೈತಿಕ ಪ್ರಜ್ಞೆ ಹಾಗೂ ನೈತಿಕ ಮೌಲ್ಯಗಳು ಕುಸಿಯುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ದಿನೆ-ದಿನೇ ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ. ಜನರಲ್ಲಿ ಋಣಾತ್ಮಕ ವಿಚಾರಗಳು ಹೆಚ್ಚಿನ ಪ್ರಾಧಾನ್ಯತೆ ಪಡೆಯುತ್ತಿವೆ. ನುಡಿಗೂ-ನಡೆಗೂ ಸಾಮ್ಯತೆ ಕಡಿಮೆಯಾಗುತ್ತಿದೆ. ಹೀಗಾಗಬಾರದು ಎಂದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪೋಷಕರಿಗೆ ತಮ್ಮ ಮಕ್ಕಳೊಡನೆ ಕುಳಿತು ಮಾತನಾಡಲು ಸಮಯವಿಲ್ಲ. ಮಕ್ಕಳಿಗೆ ಅತಿ ಹೆಚ್ಚು ಶುಲ್ಕ ಭರಿಸಿ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಿ ಹೆಚ್ಚು ಅಂಕ ಗಳಿಸಬೇಕೆಂದು ಅಪೇಕ್ಷೆ ಪಡುತ್ತಾರೆ. ಮಗು ಉತ್ತಮ ಸಂಸ್ಕಾರ ಹಾಗೂ ಮೌಲ್ಯಗಳನ್ನು ಕಲಿಯಬೇಕು, ಜೀವನದಲ್ಲಿ ಅಂಕಗಳು ಮುಖ್ಯವಲ್ಲ ಎಂದು ಹೇಳಲಾಗದು. ಹೀಗಾಗಿ ಶಿಕ್ಷಕರು ಮಕ್ಕಳ ಮನಸ್ಸನ್ನು ಅವರವರ ಸಮಸ್ಯೆಗಳನ್ನು ಚೆನ್ನಾಗಿ ಅರ್ಥ ಮಾಡಿಕೊಂಡು ನೈತಿಕ ಶಿಕ್ಷಣ ನೀಡಿ ದೇಶದ ಉತ್ತಮ ಪ್ರಜೆಗಳಾಗಿ ಮಾಡಬೇಕೆಂದು ಶಿಕ್ಷಕರಿಗೆ ಸಲಹೆ ನೀಡಿದರು.

ಶಿಕ್ಷಣ ಇಲಾಖೆ ಉಪನಿರ್ದೇಶಕ ಶಾಂತಗೌಡ ಪಾಟೀಲ ಮಾತನಾಡಿ, ಮಕ್ಕಳಿಗೆ ಕೇವಲ ಪಠ್ಯಜ್ಞಾನ ನೀಡುವುದು ಮುಖ್ಯವಲ್ಲ. ಅವರನ್ನು ಜವಾಬ್ದಾರಿಯುತ ಪ್ರಜೆಗಳಾಗಿ ರೂಪಿಸುವ ಹೊಣೆ ಎಲ್ಲ ಶಿಕ್ಷಕರದ್ದಾಗಿದೆ. ಮಕ್ಕಳ ಸಮಸ್ಯೆ ಅರ್ಥ ಮಾಡಿಕೊಂಡು ಅವುಗಳಿಗೆ ಪರಿಹಾರ ನೀಡಿ ಮೌಲ್ಯಯುತ ಹಾಗೂ ಸಂಸ್ಕಾರಯುತ ಶಿಕ್ಷಣ ನೀಡುವ ಕಡೆಗೆ ಶಾಲೆಗಳು ಗಮನಹರಿಸಬೇಕು ಎಂದರು.

ಸಂಸ್ಥೆ ಅಧ್ಯಕ್ಷೆ ಸುವರ್ಣ ಭಗವತಿ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಪ್ರಾಂಶುಪಾಲ ಸಿದ್ದಪ್ಪ ಭಗವತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಿಗ್ಗಾಂವಕರ, ಟ್ರಸ್ಟ್‌ನ ಪ್ರಕಾಶಕ ಎಸ್‌. ಎಸ್‌.ಹಿರೇಮಠ, ಮದರ ತೆರೆಸಾ ಕಾಲೇಜನ ಆಡಳಿತಾಧಿಕಾರಿ ಪ್ರಕಾಶ ಕವಿಶೆಟ್ಟಿ ಹಾಗೂ ಶಿಕ್ಷಕರು ಹಾಜರಿದ್ದರು. ಶಿಕ್ಷಕ ಆನಂದ ಸ್ವಾಗತಿಸಿದರು. ಶಿಕ್ಷಕಿ ಶೋಭಾ ವಂದಿಸಿದರು.

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.