ಕಾಂಗ್ರೆಸ್ ಮುಕ್ತ ರಾಜ್ಯವಾಗಿಸೋಣ
Team Udayavani, Jan 8, 2018, 12:12 PM IST
ಚಿಂಚೋಳಿ: ಮೀಸಲು ವಿಧಾನಸಭೆ ಮತಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಗೆಲ್ಲಲು ಬಿಜೆಪಿ ಕಾರ್ಯಪ್ರವೃತ್ತವಾಗಿ ಕಾಂಗ್ರೆಸ್
ಮುಕ್ತ ರಾಜ್ಯವನ್ನಾಗಿ ಮಾಡಲು ಎಲ್ಲರೂ ಚುನಾವಣೆಯಲ್ಲಿ ಕಾರ್ಯ ನಿರ್ವಹಿಸಬೇಕೆಂದು ಚಿಂಚೋಳಿ ವಿಧಾನಸಭೆ ಉಸ್ತುವಾರಿ ಔರಾದ ಶಾಸಕ ಪ್ರಭು ಚವ್ಹಾಣ ಹೇಳಿದರು.
ಪಟ್ಟಣದ ಶ್ರೀ ಮಲ್ಲಿಕಾರ್ಜುನ ದೇವಾಲಯದಲ್ಲಿ ಏರ್ಪಡಿಸಿದ ಚಿಂಚೋಳಿ ಮಂಡಲ ಮತಕ್ಷೇತ್ರದ ತಾಲೂಕು ಬಿಜೆಪಿ ಬೂತ್ ಮಟ್ಟದ ಸಶಕ್ತೀಕರಣ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಭ್ರಷ್ಟ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿಸಲು ಪಕ್ಷದ ಮುಖಂಡರ ಅಪೇಕ್ಷೆಯಂತೆ 150 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲು ಪಣತೊಡಲಾಗಿದೆ ಎಂದು ಹೇಳಿದರು.
ತಾಲೂಕಿನ ಎಲ್ಲ 235 ಬೂತ್ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರ ಪಟ್ಟಿ ಸಿದ್ಧಪಡಿಸಿ ನಮ್ಮ ಗಮನಕ್ಕೆ ತರಬೇಕು. ಎಲ್ಲರೂ ಪಕ್ಷದ ಸಲಹೆ, ಸೂಚನೆ, ತತ್ವ-ಸಿದ್ಧಾಂತದಂತೆ ನಡೆಯಬೇಕು ಎಂದು ಸೂಚನೆ ನೀಡಿದರು ಮಾಜಿ ಸಚಿವ ಸುನೀಲ ವಲ್ಯಾಪುರೆ, ಬಿಜೆಪಿ ಹಿರಿಯ ಮುಖಂಡ ರಮೇಶ ಯಾಕಾಪುರ, ಜಿಪಂ ಕೃಷಿ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವನ್ ಯಾಕಾಪುರ, ಜಿಪಂ ಮಾಜಿ ಸದಸ್ಯೆ ಶಶಿಕಲಾ ಟೆಂಗಳಿ, ಶರಣು ಮೊತಕಪಳ್ಳಿ ಮಾತನಾಡಿದರು. ಮುಕುಂದ ಕೊಡದೂರ, ಮಲ್ಲಿಕಾರ್ಜುನ ಪಾಟೀಲ ಹುಳಗೇರಾ, ಸಂಗಪ್ಪ ಪಾಲಾಮೂರ, ಭೀಮಶೆಟ್ಟಿ ಜಾಬಶೆಟ್ಟಿ, ರವಿಕುಮಾರ ಹುಸೇಬಾಯಿ, ಕಾಶಿನಾಥ ನಾಟೀಕಾರ, ಸುಭಾಶ ಸೀಳಿನ್ ಇದ್ದರು.
ತಾಲೂಕು ಬಿಜೆಪಿ ಅಧ್ಯಕ್ಷ ಭೀಮಶೆಟ್ಟಿ ಮುರಡಾ ಪ್ರಾಸ್ತಾವಿಕವಾಗಿ ಮಾತನಾಡಿದರು. ನಗರ ಬಿಜೆಪಿ ಘಟಕದ ಅಧ್ಯಕ್ಷ ಸಂತೋಷ ಗಡಂತಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ