ಬಾಲ ಕಾರ್ಮಿಕ ಪದ್ದತಿ ತಡೆಗೆ ಯತ್ನಿಸೋಣ
Team Udayavani, Jul 11, 2022, 2:28 PM IST
ಶಹಾಬಾದ: ತಾಲೂಕಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಂಸ್ಕಾರ ಪ್ರತಿಷ್ಠಾನ ಸಂಸ್ಥೆ, ಮಾರ್ಗದರ್ಶಿ ಸಂಸ್ಥೆ, ಸಹರಾ ಸಂಸ್ಥೆ, ಮಕ್ಕಳ ಸಹಾಯವಾಣಿ- 1098 ಕಲಬುರಗಿ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಾಥಾ ಮತ್ತು ಮಕ್ಕಳು ಮತ್ತು ಪೋಷಕರಿಗೆ ಶಿಕ್ಷಣದ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಇದೆ ವೇಳೆ ತಹಶೀಲ್ದಾರ್ ಸುರೇಶ ವರ್ಮಾ ಮಾತನಾಡಿ, ಆತ್ಮಸಾಕ್ಷಿಯಾಗಿ ಪ್ರಮಾಣ ಮಾಡುವುದೇನೆಂದರೆ, ಬಾಲ ಕಾರ್ಮಿಕ ಪದ್ಧತಿ ತಡೆಗಟ್ಟಲು ಹಾಗೂ ನಿರ್ಮೂಲನೆಗೆ ಶಕ್ತಿಮೀರಿ ಪ್ರಯತ್ನಿಸುತ್ತೇನೆ. ಹದಿನಾಲ್ಕು ವರ್ಷದೊಳಗಿನ ಶಾಲೆಯಿಂದ ಹೊರಗಡೆ ಇರುವ ಯಾವುದೇ ಮಗು ಕಂಡುಬಂದರೆ, ಅವರ ಪೋಷಕರಿಗೆ ತಿಳಿವಳಿಕೆ ಹೇಳಿ ಎಂದರು.
ವಿದ್ಯಾರ್ಥಿಗಳೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಜಾಥಾ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಸಿಡಿಪಿಒ ಬಿ.ಎಸ್.ಹೊಸಮನಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ, ಚಿತ್ತಾಪುರ ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕ ಶಿವರಾಜ ಪಾಟೀಲ, ಆಸ್ಪಲ್ಲಿ ಶಾಲೆ ಮುಖ್ಯಶಿಕ್ಷಕಿ ಶೋಭಾ ಅರಳಿ, ಶಿಕ್ಷಕರಾದ ಸಂದುಲಾಲ ಬಸೂದೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ