ಲಿಂಗಾಯತ ಧರ್ಮ ಹಿಂದೂ ಧರ್ಮದ ಅಂಗವಲ್ಲ

Team Udayavani, Aug 3, 2017, 12:07 PM IST

03-GUB-1.jpg

ಜೇವರ್ಗಿ: ವಿಶ್ವಗುರು ಬಸವಣ್ಣ ಸ್ಥಾಪಿಸಿದ ಸ್ವತಂತ್ರ ಲಿಂಗಾಯತ ಧರ್ಮಕ್ಕೆ ಶಾಸನಬದ್ಧ ಮಾನ್ಯತೆ ಹಗೂ ಅಲ್ಪಸಂಖ್ಯಾತ ಆಯೋಗದ ಮಾನ್ಯತೆ ದೊರೆಯಬೇಕಾಗಿದ್ದು ನ್ಯಾಯಸಮ್ಮತ ಹಾಗೂ ಕಾನೂನು ಸಮ್ಮತವಾಗಿದೆ ಎಂದು ಶಿಕ್ಷಕ ಪಂಡಿತ್‌ ನೆಲ್ಲಗಿ ಹೇಳಿದರು.

ಪಟ್ಟಣದ ಸರಕಾರಿ ಕನ್ಯಾ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಶರಣ ಸಂಗಮ ಕಾರ್ಯಕ್ರಮದಲ್ಲಿ ಅವರು ಅನುಭಾವ
ನೀಡಿದರು. 12ನೇ ಶತಮಾನದಲ್ಲಿ ಬಸವಾದಿ ಶರಣರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ತಳಹದಿ ಮೇಲೆ ಸ್ಥಾಪಿಸಿದ ಲಿಂಗಾಯತ ಧರ್ಮ ಸಾರ್ವಕಾಲಿಕ ಸಮಾನತೆ ಸಾರುವ ಪರಿಪೂರ್ಣ ಧರ್ಮವಾಗಿದೆ. ಸ್ವಾತಂತ್ರ ಪೂರ್ವದಲ್ಲಿ ಸರಕಾರಿಯ ಎಲ್ಲಾ ಜನಗಣತಿ, ಕೋರ್ಟ್‌, ಗೆಜೆಟ್‌ ಹಾಗೂ ಕಚೇರಿಯ ಸುತ್ತೋಲೆಗಳಲ್ಲಿ ಲಿಂಗಾಯತ ಒಂದು ಸ್ವತಂತ್ರ ಧರ್ಮವೆಂದು ದಾಖಲಾಗಿದ್ದರೂ ಸ್ವತಂತ್ರ ಭಾರತದಲ್ಲಿ ಅದು ಹಿಂದೂ ಧರ್ಮದ ಅಂಗವೆಂದು ನಮೂದಿಸಿ ಬಸವಣ್ಣನವರಿಗೆ ಅವಮಾನ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಸವಕೇಂದ್ರದ ಅಧ್ಯಕ್ಷ ಶರಣಬಸವ ಕಲ್ಲಾ ಮಾತನಾಡಿ, ಲಿಂಗಾಯತ ಧರ್ಮದ ಧ್ಯೇಯ ಜಾತಿ, ವರ್ಣ, ಲಿಂಗಭೇದ ರಹಿತ ಧರ್ಮಸಹಿತ ಶರಣ ಸಮಾಜ ನಿರ್ಮಾಣ, ಕಲ್ಯಾಣ ರಾಜ್ಯ ನಿರ್ಮಾಣ. ವಚನ ಸಾಹಿತ್ಯ, ಶಾಸನ ಸಾಹಿತ್ಯ, ಜನಪದ ಸಾಹಿತ್ಯ, ಬಸವಾದಿ ಶರಣರನ್ನು ಕುರಿತ 
ನೂರಾರು ಕಾವ್ಯಗಳು, ಸಂಶೋಧನಾ ಮತ್ತು ವಿಮರ್ಶಾ ಸಾಹಿತ್ಯಗಳಲ್ಲಿ ಲಿಂಗಾಯತ ಸ್ವತಂತ್ರ ಧರ್ಮವಾಗಲು ಬೇಕಾದ ಎಲ್ಲಾ ಲಕ್ಷಣ ಮತ್ತು ದಾಖಲೆಗಳನ್ನು ಒದಗಿಸಿಕೊಟ್ಟಿದೆ. ಬಸವಾದಿ ಕಾಲದ ನಂತರ ವೀರಶೈವ ಪಂಗಡ ಲಿಂಗಾಯತ ಧರ್ಮದಲ್ಲಿ ಬಂದು ಸೇರಿಕೊಂಡಿದೆ. ಲಿಂಗಾಯತ ಧರ್ಮ ಹಿಂದೂ ಧರ್ಮದ ಅಂಗವಲ್ಲ, ಲಿಂಗಾಯತ ಧರ್ಮ ಸ್ವತಂತ್ರ ಧರ್ಮವಾಗಿದೆ ಎಂದು ಹೇಳಿದರು. 

ವಿಧಾನಪರಿಷತ್‌ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ, ಪತ್ರಕರ್ತ ವಿಜಯಕುಮಾರ ಕಲ್ಲಾ ಮುಖ್ಯ ಅತಿಥಿಗಳಾಗಿದ್ದರು. ಲಿಂ| ಮಲ್ಲಣ್ಣ ಸೋಮಣ್ಣ ಕಲ್ಲಾ ಅವರ ಪುಣ್ಯಸ್ಮರಣೋತ್ಸವ ನಿಮಿತ್ತ ಅವರ ಕುಟುಂಬ ವರ್ಗ ಕಾರ್ಯಕ್ರಮದ ದಾಸೋಹಿಗಳಾಗಿ ಸೇವೆ ಸಲ್ಲಿಸಿದರು. ಕಸಾಪ ಅಧ್ಯಕ್ಷ ಶಿವನಗೌಡ ಪಾಟೀಲ ಹಂಗರಗಿ, ಗುವಿವಿ ಸಿಂಡಿಕೇಟ್‌ ಸದಸ್ಯ ಸಂಗನಗೌಡ ಪಾಟೀಲ ಗುಳಾಳ, ಷಣ್ಮುಖಪ್ಪಗೌಡ ಹಿರೇಗೌಡ, ನೀಲಕಂಠ ಅವುಂಟಿ, ವಿಶ್ವನಾಥರೆಡ್ಡಿ ರಾಜಳ್ಳಿ, ಲಕ್ಷ್ಮೀಕಾಂತ ನಾಗರವತ್‌, ಸೋಮಣ್ಣ ಕಲ್ಲಾ, ಭಗವಂತ್ರಾಯ ಬೆಣ್ಣೂರ, ಮುರುಗೆಣ್ಣ ಬಿರಾದಾರ ಯಡ್ರಾಮಿ, ಗುರುಗೌಡ ಮಾಲಿಪಾಟೀಲ, ನಿಜಲಿಂಗ ದೊಡ್ಮನಿ, ಶರಣು ದೋರನಹಳ್ಳಿ, ಸುರೇಶ ಸಾಸಬಾಳ, ಅಖಂಡು ಕಲ್ಲಾ, ನಿಂಗಣ್ಣಗೌಡ ಹಳಿಮನಿ, ರಾಮಣ್ಣ ತೊನಸಳ್ಳಿಕರ್‌,  ಮಲ್ಲಿಕಾರ್ಜುನ ಮಾಸ್ತರ ಹೂಗಾರ, ದೇವಾನಂದ ಡೂಗನಕರ್‌, ನೂರಂದಪ್ಪ ಯಡ್ರಾಮಿ ಸೇರಿದಂತೆ ನೂರಾರು ಜನ ಬಸವಾಭಿಮಾನಿಗಳು ಆಗಮಿಸಿದ್ದರು. ಶಿಕ್ಷಕ ಬಸವರಾಜ ಕಲ್ಲಾ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.