ಪ್ಲಾಸ್ಟಿಕ್‌ ಉತ್ಪಾದನೆ ಕಾರ್ಖಾನೆಗೆ ಬೀಗ

Team Udayavani, Nov 11, 2020, 7:25 PM IST

ಪ್ಲಾಸ್ಟಿಕ್‌ ಉತ್ಪಾದನೆ ಕಾರ್ಖಾನೆಗೆ ಬೀಗ

ಕಲಬುರಗಿ: ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್‌ ಸುಧಾಕರ್‌ ಲೋಖಂಡೆ ನೇತೃತ್ವದಲ್ಲಿ ಕದ್ದುಮುಚ್ಚಿ ರಾತ್ರೋರಾತ್ರಿ ಪ್ಲಾಸ್ಟಿಕ್‌ ಉತ್ಪಾದಿಸುತ್ತಿದ್ದ ಕಾರ್ಖಾನೆಯೊಂದಕ್ಕೆ ಅಧಿಕಾರಿಗಳು ದಾಳಿ ನಡೆಸಿ ಕಾರ್ಖಾನೆಗೆ ಬೀಗ ಜಡಿದಿದ್ದಾರೆ.

ಇಲ್ಲಿನ ಕಪನೂರ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಕಾರ್ಖಾನೆಯನ್ನು ರಾತ್ರಿ ವೇಳೆಆರಂಭಿಸಿ, ಪ್ಲಾಸ್ಟಿಕ್‌ ಉತ್ಪಾದಿಸಲಾಗುತ್ತಿತ್ತು. ಅಲ್ಲದೇ, ರಾತ್ರೋರಾತ್ರಿ ಪ್ಲಾಸ್ಟಿಕ್‌ ವಸ್ತುಗಳನ್ನು ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿದೊರೆತ ಮೇರೆಗೆ ಪಾಲಿಕೆ ಆಯುಕ್ತ ಸ್ನೇಹಲ್‌ಸುಧಾಕರ್‌ ಲೋಖಂಡೆ ನೇತೃತ್ವದಲ್ಲಿ ಅಧಿಕಾರಿಗಳು ಸೋಮವಾರ ದಾಳಿ ಮಾಡಿದ್ದರು. ಕಾರ್ಖಾನೆಯಲ್ಲಿ ಸಂಗ್ರಹಿಸಿದ್ದ ಒಂದು ಟನ್‌ಗೂ ಅಧಿಕ ಪ್ಲಾಸ್ಟಿಕ್‌ ಜಪ್ತಿ ಮಾಡಲಾಗಿದೆ.

ಜತೆಗೆ 10 ಟನ್‌ನಷ್ಟು ಕಚ್ಚಾ ಪ್ಲಾಸ್ಟಿಕ್‌ನ್ನು ವಶಕ್ಕೆ ಪಡೆಯಲಾಗಿದೆ. ಹೊರಗಡೆಯಿಂದ ಬಾಗಿಲು ಹಾಕಿ ಒಳಗಡೆ ಪ್ಲಾಸ್ಟಿಕ್‌ ಉತ್ಪಾದಿಸಲಾಗಿತ್ತು. ಪಾಲಿಕೆ ಅಧಿಕಾರಿಗಳೊಂದಿಗೆ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಮನೆಯಲ್ಲಿ ಸಂಗ್ರಹ: ಪ್ಲಾಸ್ಟಿಕ್‌ ನಿಯಂತ್ರಣಕ್ಕೆನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದರೂ,ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಮುಖ್ಯ ಕಾರಣ ಹೈದ್ರಾಬಾದ್‌ನಿಂದ ಪ್ಲಾಸ್ಟಿಕ್‌ ತರಿಸಿಕೊಂಡು ಮನೆಯಲ್ಲಿ ಸಂಗ್ರಹಮಾಡುತ್ತಿರುವುದು. ಶೇ.75ಕ್ಕಿಂತ ಪ್ಲಾಸ್ಟಿಕ್‌ಹೈದ್ರಾಬಾದ್‌ನಿಂದಲೇ ಸರಬರಾಜು ಆಗುತ್ತಿದೆ ಎನ್ನುತ್ತಾರೆ ಪಾಲಿಕೆ ಅಧಿಕಾರಿಗಳು. ಸಗಟು ವ್ಯಾಪಾರಿಗಳು ಮತ್ತು ವರ್ತಕರು ಹೈದ್ರಾಬಾದ್‌ನಿಂದ ಪ್ಲಾಸ್ಟಿಕ್‌ ಕ್ಯಾರಿಬ್ಯಾಗ್‌ಗಳು, ಟೀ, ನೀರಿನ ಲೋಟಾಗಳನ್ನು ತಂದು ಮನೆಯಲ್ಲಿ ಸಂಗ್ರಹಿಸುತ್ತಿದ್ದಾರೆ. ಇದರಿಂದ ಅಂಗಡಿಗಳ ಮೇಲೆ ದಾಳಿ ಮಾಡಿದರೂ, ಸ್ಪಲ್ವ ಪ್ರಮಾಣದ ಪ್ಲಾಸ್ಟಿಕ್‌ ಪತ್ತೆಯಾಗುತ್ತಿದೆ. ಮರು ದಿನ ಮತ್ತೆ ಅಂಗಡಿಗಳಲ್ಲಿ ಪ್ಲಾಸ್ಟಿಕ್‌ ಬಳಕೆ ಮಾಡುವ ಪರಿಪಾಠವನ್ನು ವ್ಯಾಪಾರಿಗಳು ಬೆಳೆಸಿಕೊಂಡಿದ್ದಾರೆ ಎಂದು ಉಪ ಆಯುಕ್ತ ಆರ್‌.ಪಿ. ಜಾಧವ್‌ ಬೇಸರ ವ್ಯಕ್ತಪಡಿಸಿದರು.

ಕಳೆದ ಒಂದು ತಿಂಗಳ ಅವಧಿಯಲ್ಲೇ ಸುಮಾರು 40 ಟನ್‌ ಪ್ಲಾಸ್ಟಿಕ್‌ ಜಪ್ತಿ ಮಾಡಲಾಗಿದೆ. ಬೀದಿ ವ್ಯಾಪಾರಿಗಳು ವ್ಯಾಪಕವಾಗಿ ಪ್ಲಾಸ್ಟಿಕ್‌ ಬಳಕೆ ಮಾಡುತ್ತಿದ್ದಾರೆ. ದಂಡ ಹಾಕಿದರೂ ವ್ಯಾಪಾರಿಗಳು ಮಣಿಯುತ್ತಿಲ್ಲ. ಹೀಗಾಗಿ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲು ಯೋಜಿಸಲಾಗಿದೆ. ಮೇಲಾಗಿ ಸಾರ್ವಜನಿಕರು ಪ್ಲಾಸ್ಟಿಕ್‌ ದುಷ್ಪರಿಣಾಮಅರಿತು ಬಳಕೆ ಮಾಡುವುದನ್ನು ನಿಲ್ಲಿಸಬೇಕು. ಪ್ರತಿಯೊಬ್ಬರೂ ಬಟ್ಟೆ ಅಥವಾ ಪರಿಸರ ಸ್ನೇಹಿ ಚೀಲಗಳನ್ನು ಉಪಯೋಗಿಸುವ ಮೂಲಕ ಪ್ಲಾಸ್ಟಿಕ್‌ ನಿರ್ಮೂಲನೆಗೆ ಸಹಕಾರ ನೀಡಬೇಕು ಎನ್ನುತ್ತಾರೆ ಅವರು.

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.