Lokayukta Raid;ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ
ರಾಯಚೂರು ನಗರ ಅಭಿವೃದ್ಧಿ ಕೋಶದ ಅಧಿಕಾರಿ ಮನೆ ಮೇಲೆ ದಾಳಿ
Team Udayavani, Jun 28, 2023, 8:48 AM IST
ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನವರಾದ ರಾಯಚೂರು ನಗರ ಅಭಿವೃದ್ಧಿ ಕೋಶದ ಯೋಜನಾ ಶಾಖೆಯ ಸಹಾಯಕ ನಿರ್ದೇಶಕ ಶರಣಪ್ಪ ಮಡಿವಾಳರ್ ಅವರ ಮಾಲೀಕತ್ವದ ಫಾರ್ಮ ಹೌಸ್ ಹಾಗೂ ಮನೆಗಳ ಮೇಲೆ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ನಗರದ ನಾಗನಹಳ್ಳಿ ಖಣದಾಳ ರಸ್ತೆಯಲ್ಲಿರುವ ಫಾರ್ಮ್ ಹೌಸ್ ಮತ್ತು ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿರುವ ಕಚೇರಿ ಮತ್ತು ಮನೆಯ ಮೇಲೆ ದಾಳಿ ನಡೆದಿದೆ ಎಂದು ಗೊತ್ತಾಗಿದೆ.
ಶರಣಪ್ಪ ಹಲವು ವರ್ಷಗಳಿಂದ ರಾಯಚೂರು ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಆರೋಪ ಅವರ ಮೇಲಿತ್ತು. ಈ ನಿಟ್ಡಿನಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.
ಕಲಬುರಗಿ ಲೋಕಾಯುಕ್ತ ಎಸ್ಪಿ ಎ.ಆರ್. ಕರ್ನೂಲ್ ನೇತೃತ್ವದಲ್ಲಿ ಪೊಲೀಸರು ಕಲಬುರಗಿಯ ಫಾರ್ಮ್ ಹೌಸ್ ನಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಹೌಸ್ ನಲ್ಲಿರುವ ಸಿಬ್ಬಂದಿ ಮಾಹಿತಿ ನೀಡುತ್ತಿದ್ದು, ಆಸ್ತಿ ದಾಖಲೆಗಳ ಪರಿಶೀಲನೆ ನಡೆದಿದೆ.
ರಾಮನಗರದಲ್ಲೂ ಲೋಕಾಯುಕ್ತ ರೇಡ್
ರಾಮನಗರ: ಕೃಷಿ ಜಂಟಿ ನಿರ್ದೇಶಕನ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದಾರೆ. ತುಮಕೂರಿನಲ್ಲಿ ಕೃಷಿ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಕೆ.ಹೆಚ್. ರವಿ. ರಾಮನಗರದ ಶಾಂತಿಲಾಲ್ ಲೇಔಟ್ ನಲ್ಲಿ ಸ್ವಂತ ಮನೆ ಹೊಂದಿರುವ ಅಧಿಕಾರಿ. ಅಕ್ರಮ ಹಣ, ಆಸ್ತಿ ಗಳಿಕೆ ಮಾಡಿರುವ ಹಿನ್ನೆಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ .ಬೆಳಗ್ಗೆಯಿಂದ ಮನೆಯಲ್ಲಿ ಆಸ್ತಿ ಪತ್ರ, ಇತರೆ ದಾಖಲಾತಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ