ಚಲಿಸುತ್ತಿದ್ದ ಸ್ಕೂಟಿಯಿಂದ ಕಳಚಿದ ಚಕ್ರ: ಆರೋಗ್ಯ ಸಿಬ್ಬಂದಿ ತಲೆಗೆ ಪೆಟ್ಟು
Team Udayavani, May 15, 2020, 1:17 PM IST
ಕಲಬುರಗಿ: ಕೋವಿಡ್-19 ಸೋಂಕು ನಿಯಂತ್ರಣ ಕರ್ತವ್ಯಕ್ಕೆ ಹೊರಟಿದ್ದ ಆರೋಗ್ಯ ಸಿಬ್ಬಂದಿಯ ದ್ವಿಚಕ್ರ ವಾಹನ ಅಪಘಾತವಾಗಿ ಓರ್ವ ಮಹಿಳಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಜಿಲ್ಲೆಯ ಶಹಾಬಾದ್ ಪಟ್ಟಣದ ರಾವೂರ್ ಕ್ರಾಸ್ ಹತ್ತಿರ ಈ ಘಟನೆ ಜರುಗಿದೆ. ಸ್ಟಾಫ್ ನರ್ಸ್ ರಾಜಕುಮಾರಿ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜಕುಮಾರಿ ಮತ್ತು ರೇಣುಕಾ ಎಂಬುವವರು ಕಲಬುರಗಿ ನಗರದಿಂದ ಹೊಂಡಾ ಆ್ಯಕ್ಟೀವಾದಲ್ಲಿ ಚಿತ್ತಾಪುರ ಸರ್ಕಾರಿ ಆಸ್ಪತ್ರೆ ಹೊರಟಿದ್ದರು. ಈ ವೇಳೆ ಆ್ಯಕ್ವೀವಾದ ಹಿಂಬದಿ ಚಕ್ರ ಕಳಚಿ ಬಿದ್ದಿದೆ. ಇದರಿಂದ ಇಬ್ಬರೂ ನೆಲಕ್ಕೆ ಬಿದ್ದಿದ್ದಾರೆ.
ಚಾಲನೆ ಮಾಡುತ್ತಿದ್ದ ರೇಣುಕಾ ಹೆಲ್ಮಟ್ ಧರಿಸಿದ್ದರಿಂದ ಅವರಿಗೆ ಯಾವುದೇ ಗಂಭೀರ ಗಾಯಗಳು ಆಗಿಲ್ಲ. ಹಿಂಬದಿ ಕುಳಿತಿದ್ದ ರಾಜಕುಮಾರಿ ತಲೆಗೆ ಪೆಟ್ಟು ಬಿದ್ದು ರಕ್ತ ಸ್ರಾವ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು