ನೂಪುರ್‌ ಶರ್ಮಾ ಬಂಧನಕ್ಕೆ ಆಗ್ರಹಿಸಿ ಆಶಿಕಾನೆ ರಸೂಲ್‌ ಕಮಿಟಿಯಿಂದ ಬೃಹತ್‌ ಪ್ರತಿಭಟನೆ

Team Udayavani, Jun 12, 2022, 10:33 AM IST

3appeal

ಶಹಾಬಾದ: ಪ್ರವಾದಿ ಮಹಮ್ಮದ್‌ ಅವರನ್ನು ಅವಹೇಳನ ಮಾಡಿದ ಬಿಜೆಪಿಯ ನೂಪುರ್‌ ಶರ್ಮಾ ಮತ್ತು ನವೀನ್‌ ಜಿಂದಾಲ್‌ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಆಶಿಕಾನೆ ರಸೂಲ್‌ ಕಮಿಟಿ ವತಿಯಿಂದ ಶನಿವಾರ ನಗರದ ಮಜ್ಜಿದ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮಾಧ್ಯಮವೊಂದರ ಚರ್ಚೆಯಲ್ಲಿ ಪ್ರವಾದಿ ಮಹಮ್ಮದ್‌ ಅವರನ್ನು ಅವಹೇಳನಕಾರಿ ನಿಂದನೆ ಮಾಡಿದ ಬಿಜೆಪಿಯ ನೂಪುರ್‌ ಶರ್ಮಾ ಮತ್ತು ನವೀನ್‌ ಜಿಂದಾಲ್‌ ಅವರನ್ನು ಕೂಡಲೇ ಬಂಧಿಸಬೇಕು. ದೇಶದಲ್ಲಿ ಅಲ್ಪಸಂಖ್ಯಾತ, ದಲಿತ,ಹಿಂದುಳಿದ ವರ್ಗಗಳ ಮೇಲೆ ನಿರಂತರ ಹಲ್ಲೆ, ದಾಳಿ ಮತ್ತು ಮುಸ್ಲಿಂ ಸಮುದಾಯವನ್ನು ಗುರಿ ಮಾಡುತ್ತಿರುವ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ದೇಶದಲ್ಲಿ ನಡೆಯುತ್ತಿರುವ ಮುಸ್ಲಿಂ ವಿರೋಧಿ ಹಿಂಸಾತ್ಮಕ ಕೃತ್ಯಗಳಿಗೆ ಬಿಜೆಪಿ ಸರ್ಕಾರ ಮೌನ ಸಮ್ಮತಿ ನೀಡುತ್ತಿದೆ. ದುಷ್ಕರ್ಮಿಗಳಿಗೆ ಆಡಳಿತಾತ್ಮಕ ನೆರವು ನೀಡುತ್ತಿದೆ. ಹಿಜಾಬ್‌, ಹಲಾಲ್‌, ವ್ಯಾಪಾರ ಬಹಿಷ್ಕಾರ, ಆಝಾನ್‌, ಈದ್ಗಾಗಳ ವಿವಾದ ಸೃಷ್ಟಿ ಹೀಗೆ ನಿರಂತರ ಮುಸಲ್ಮಾನರ ಧಾರ್ಮಿಕ ವಿಚಾರಗಳಲ್ಲಿ ಸಂಘರ್ಷ ನಡೆಸುತ್ತಿದ್ದು, ಬಿಜೆಪಿ ಹಾಗೂ ಹಿಂದೂತ್ವ ನಾಯಕರು ದ್ವೇಷದ ಭಾಷಣ, ಹೇಳಿಕೆಗಳನ್ನು ಸಾರ್ವಜನಿಕವಾಗಿ ನೀಡುತ್ತಲೇ ಇದ್ದಾರೆ. ಇವರ ವಿರುದ್ಧ ಸರಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಂತಾರಾಷ್ಟ್ರೀಯ ಒತ್ತಡಕ್ಕೆ ಮಣಿದು ನೂಪುರ್‌ ಶರ್ಮಾ, ನವೀನ್‌ ಜಿಂದಾಲ ಅವರನ್ನು ಪಕ್ಷದಿಂದ ವಜಾಗೊಳಿಸಿರುವುದು ಕೇವಲ ಕಣ್ಣೊರೆಸುವ ತಂತ್ರವಾಗಿದೆ. ದೇಶದ ಆರ್ಥಿಕ ಪರಿಸ್ಥಿತಿಯನ್ನು, ಜಾತ್ಯತೀತ ಪರಂಪರೆಯನ್ನು ಸಂಪೂರ್ಣ ನಾಶಗೊಳಿಸಿ ಜಾಗತಿಕ ಮಟ್ಟದಲ್ಲಿ ದೇಶವನ್ನು ತಲೆತಗ್ಗಿಸುವಂತೆ ಮಾಡಿರುವ ಬಿಜೆಪಿ ಸರ್ಕಾರ ಕೂಡಲೇ ರಾಜೀನಾಮೆ ನೀಡಬೇಕು. ಅಲ್ಲದೇ ದೇಶದ ಮಾನವನ್ನು ಹರಾಜುಗೊಳಿಸುತ್ತಿರುವ ಸಂಘಟಕರನ್ನು ನಿಯಂತ್ರಿಸಬೇಕೆಂದು ಆಗ್ರಹಿಸಿದರು.

ನಂತರ ಎಸ್‌ಪಿ ಇಶಾ ಪಂತ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಡಿವೈಎಸ್‌ಪಿ ಉಮೇಶ ಚಿಕ್ಕಮಠ, ಪಿಐ ಸಂತೋಷ ಹಳ್ಳೂರ್‌ ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು. ಮುಖಂಡರಾದ ಅಬ್ದುಲ್‌ ಖಾದಿರ್‌ ಸಾಬ್‌, ಮಹಮ್ಮದ್‌ ಮಸ್ತಾನ, ಮತೀನ ಪಟೇಲ, ಸೈಯದ್‌ ಲಾಡ್ಲೆ ಹುಸೇನಿ, ಅಪ್ಸರ್‌ ಸೇಠ, ರಫೀಕ್‌ ಬಾಗಬಾನ್‌, ಮೌಲನಾ ಹಿದಾಯತ್‌ ಅಲಿ, ಮುಬಿನ್‌ ಅಲಿ, ಅಕ್ಬರ್‌ ಚಿಟ್‌, ಮೆಹಬೂಬ ಪಟೇಲ್‌, ಹಾಷಮ್‌ ಖಾನ್‌, ಮಹಮ್ಮದ್‌ ಉಬೆದುಲ್ಲಾ, ಡಾಕ್ಟರ್‌ ಅಹ್ಮದ್‌ ಪಟೇಲ್‌, ಮಹಮ್ಮದ್‌ ಫಾರೂಕ್‌, ಮಹಮ್ಮದ್‌ ಜೀಲಾನಿ ಶಾಹ್‌, ನದೀಮ್‌ ಶಾಂತನಗರ, ಜಾವೀದ್‌ ಮಡ್ಡಿ, ನೋರೋದ್ದಿನ್‌ ಪಟೇಲ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.