ಆ. 14ರಂದು ಕಲಬುರಗಿಯಲ್ಲಿ ಮೆಗಾ ಲೋಕ ಅದಾಲತ್: ರಾಜೀ ಮೂಲಕ ಪ್ರಕರಣಗಳ ಇತ್ಯರ್ಥ

Team Udayavani, Jul 16, 2021, 12:28 PM IST

loka

ಕಲಬುರಗಿ: ಎಲ್ಲ ವರ್ಗದ ಕಕ್ಷಿದಾರರ ಅನುಕೂಲಕ್ಕಾಗಿ ಹಾಗೂ ರಾಜೀ ಮೂಲಕ ಪ್ರಕರಣಗಳ ಇತ್ಯರ್ಥಕ್ಕಾಗಿ ಮುಂದಿನ ತಿಂಗಳು ಆಗಸ್ಟ್  14ರಂದು ಮೆಗಾ ಲೋಕ್ ಅದಾಲತ್ ನಡೆಸಲಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಸುಬ್ರಹ್ಮಣ್ಯ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಲಬುರಗಿ, ಆಳಂದ, ಅಫಜಲಪುರ, ಚಿಂಚೋಳಿ, ಚಿತ್ತಾಪುರ, ಜೇವರ್ಗಿ ಮತ್ತು ಸೇಡಂ ತಾಲೂಕು ಕಾನೂನು ಸೇವೆಗಳ ಸಮಿತಿಯಿಂದ ಮೆಗಾ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದರು.

ನ್ಯಾಯಾಲಯಗಳಲ್ಲಿ ಚಾಲ್ತಿ ಇರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ಪ್ರಕರಣಗಳನ್ನು ವ್ಯಾಜ್ಯಪೂರ್ವ ಪ್ರಕರಣಗಳು ಅಂತಾ ಪರಿಗಣಿಸಿ ವಿವಿಧ ಪ್ರಕರಣಗಳಾದ ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ಅಸಲು ದಾವೆಗಳು, ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೈವಾಹಿಕ ಹಾಗೂ ಜೀವನಾಂಶ ಮತ್ತು ಕಾನೂನಿನ್ವಯ ರಾಜೀ ಆಗಬಹುದಾದ ಎಲ್ಲ ತರಹದ ಪ್ರಕರಣಗಳನ್ನು ಅದಾಲತ್ ನಲ್ಲಿ ಇತ್ಯರ್ಥಪಡಿಸಲಾಗುವುದು ಎಂದು ವಿವರಿಸಿದರು.

ಕಕ್ಷಿದಾರರು ಖುದ್ದಾಗಿ ಇಲ್ಲವೇ ಆನ್ ಲೈನ್, ವಿಡಿಯೋ ಕಾನ್ಫರೆನ್ಸ್, ಈ ಮೇಲ್, ಎಸ್ಎಂಎಸ್, ವಾಟ್ಸ್ಯಾಪ್, ಎಲೆಕ್ಟ್ರಾನಿಕ್ ಮೊಡ್ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಅತಿ ಶೀಘ್ರವಾಗಿ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣ ಅವಕಾಶವಿದೆ ಎಂದು ನ್ಯಾಯಾಧೀಶರು ತಿಳಿಸಿದರು.

ಮೆಗಾ ಲೋಕ್ ಅದಾಲತ್ ನಲ್ಲಿ ರಾಜೀ ಸಂಧಾನ ಮಾಡಿಕೊಳ್ಳುವುದರಿಂದ ಕಕ್ಷಿದಾರರ ಸಮಯ, ಹಣ ಉಳಿಯುವುದಲ್ಲದೇ ಪರಸ್ಪರ, ಸಾಮರಸ್ಯ ಮುಂದುವರೆಯುತ್ತದೆ.‌ ಆದ್ದರಿಂದ ಆಗಸ್ಟ್ 14 ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜರಗುವ ಮೆಗಾ ಲೋಕ್ ಅದಾಲತ್ ನ ಸದುಪಯೋಗ ಪಡೆದುಕೊಳ್ಳುವಂತೆ, ಕಕ್ಷಿದಾರರು ಹಾಗೂ ಸಾರ್ವಜನಿಕರಲ್ಲಿ ಕೋರಲಾಗಿದೆ.

ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಲೋಕ್ ಅದಾಲತ್ 27094 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಈಗಲೂ ಹೆಚ್ಚಿನ ಪ್ರಕರಣಗಳು ಇತ್ಯರ್ಥಗೊಳ್ಳಬೇಕೆಂಬ ನಿರೀಕ್ಷೆ ಹೊಂದಲಾಗಿದೆ ಎಂದು ನ್ಯಾಯಾಧೀಶರಾದ ಕೆ. ಸುಬ್ರಹ್ಮಣ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಸುಶಾಂತ ಮಹಾವೀರ ಚೌಗಲೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.