ಕೈ ತಪ್ಪಿದ ಸಚಿವ ಸ್ಥಾನ:ಕಲಬುರಗಿಯಲ್ಲಿ ಅಜಯಸಿಂಗ್‌ ಅಭಿಮಾನಿಗಳ ಆಕ್ರೋಶ

Team Udayavani, Dec 23, 2018, 1:01 PM IST

gul-6.jpg

ಕಲಬುರಗಿ: ಸಚಿವ ಸಂಪುಟ ವಿಸ್ತರಣೆಯಲ್ಲಿ ಜೇವರ್ಗಿ ಕ್ಷೇತ್ರದ ಶಾಸಕ ಡಾ| ಅಜಯ್‌ ಸಿಂಗ್‌ ಅವರಿಗೆ ಸ್ಥಾನಸಿಗದೇ ಕೈ ತಪ್ಪಿದ್ದಕ್ಕೆ ಕಾಂಗ್ರೆಸ್‌ ಕಾರ್ಯಕರ್ತರು, ಅಭಿಮಾನಿಗಳು ಮುಖಂಡರು, ಸಾವಿರಾರು ಸಂಖ್ಯೆಯಲ್ಲಿ ಶನಿವಾರ ಜೇವರ್ಗಿ ಪಟ್ಟಣದಲ್ಲಿ ಏಕಾಏಕಿ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಿ, ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಬಸವೇಶ್ವರ ವೃತ್ತದ ಬಳಿ ಸಾವಿರಾರು ಕಾಂಗ್ರೆಸ್‌ ಕಾರ್ಯಕರ್ತರು, ರಾಜ್ಯ ಸರಕಾರ ಹಾಗೂ ಕಾಂಗ್ರೆಸ್‌ ಹೈ ಕಮಾಂಡ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಡಾ| ಅಜಯಸಿಂಗ್‌ ಎರಡನೇ ಬಾರಿಗೆ ಶಾಸಕರಾಗಿದ್ದಾರಲ್ಲದೇ ಅವರ ತಂದೆ ದಿ. ಧರ್ಮಸಿಂಗ್‌ ಕ್ರಾಂಗ್ರೆಸ್‌ಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಧರ್ಮಸಿಂಗ್‌ ಅವರಿಂದು ಇದ್ದಿದ್ದರೆ ಇಂತಹ ಸ್ಥಿತಿ ಬರುತ್ತಿರಲಿಲ್ಲ. ಸಚಿವ ಸ್ಥಾನ ನೀಡದೇ ದ್ರೋಹ ಬಗೆಯಲಾಗಿದೆ. ಈಗಲಾದರೂ ಪರಿಸ್ಥಿತಿ ಅರಿತು ನ್ಯಾಯ ಕಲ್ಪಿಸಬೇಕೆಂದು ಆಗ್ರಹಿಸಿದರು.
 
ಕಾಂಗ್ರೆಸ್‌ ಪಕ್ಷದ ಮುಖಂಡರಾದ ರಾಜಶೇಖರ ಸಿರಿ, ಸಿದ್ದಲಿಂಗರೆಡ್ಡಿ ಇಟಗಾ, ಚಂದ್ರಕಾಂತ ಯಂಕಂಚಿ, ರಹಿಮಾನ್‌ ಪಟೇಲ, ಬಹದ್ಧೂರ ರಾಠೊಡ, ಪ್ರಕಾಶ ಪುಲಾರೆ, ನೀಲಕಂಠ ಅವುಂಟಿ, ರವಿ ಕೋಳಕೂರ, ಬೆಣ್ಣೆಪ್ಪ ಕೊಂಬಿನ, ಸಕ್ರೆಪ್ಪಗೌಡ ಹರನೂರ, ತುಕಾರಾಮ ಚವ್ಹಾಣ ಗುಡೂರ, ತಿಪ್ಪಣ್ಣ ಕನಕ, ಶರಣು ಗುತ್ತೇದಾರ, ಬಸಣ್ಣ ಸರಕಾರ, ಬೀದಿ ವ್ಯಾಪಾರಿ ಸಂಘದ ಅಧ್ಯಕ್ಷರಾದ ಇಮಾಮಸಾಬ್‌ ಭಾಗವಾನ ಮಿರ್ಚಿ, ಫಯಾಜ ಜಮಾದಾರ, ದೌಲಪ್ಪ ಮದನ, ಮಲ್ಲಿಕಾರ್ಜುನ ಕೆಲ್ಲೂರ, ಶ್ರೀಮಂತ ಧನಕರ್‌, ಮಲ್ಲಣ್ಣ ಕೊಡಚಿ, ಸುನಿಲ ಹಳ್ಳಿ, ಮಲ್ಲಮ್ಮ ಕೊಂಬಿನ, ಸಿದ್ಧು ಶರ್ಮಾ ಜನಿವಾರ, ದೇವಿಂದ್ರ ಮುದಬಾಳ, ಮರೆಪ್ಪ ಸರಡಗಿ, ಸಿದ್ರಾಮ ಕಟ್ಟಿ, ಭೀಮಾಶಂಕರ ಜನಿವಾರ, ಪ್ರಶಾಂತಗೌಡ ಮಾಲಿ ಪಾಟೀಲ ಜೈನಾಪೂರ, ಹಾಗೂ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

ವಿಷ ಸೇವಿಸಿದ ಯುವಕ 
ಜೇವರ್ಗಿ ಶಾಸಕ ಡಾ| ಅಜಯಸಿಂಗ್‌ ಅವರಿಗೆ ಸಚಿವ ಸ್ಥಾನ ಸಿಗದೇ ಇದ್ದುದ್ದಕ್ಕೆ ಬೇಸರಗೊಂಡ ಅವರ ಅಭಿಮಾನಿಯೊಬ್ಬ ವಿಷ ಸೇವಿಸಿದ್ದಾನೆ. ಡಾ| ಅಜಯ್‌ಸಿಂಗ್‌ ಕಟ್ಟಾ ಅಭಿಮಾನಿಯಾಗಿರುವ 35 ವರ್ಷದ ಚಿಕ್ಕ ಜೇವರ್ಗಿ ಗ್ರಾಮದ ಮಹ್ಮದ್‌ ಜಿಲಾನಿ ಮುನ್ಸಿ ವಿಷ ಸೇವಿಸಿದ ಯುವಕ. ಶಾಸಕರಿಗೆ ಸಚಿವ ಸ್ಥಾನ ಸಿಗಲಿಲ್ಲ ಎನ್ನುವ ಕಾರಣಕ್ಕೆ ವಿಷ ಸೇವಿಸಿದ್ದಾನೆ. ಈತನೀಗ ಜೇವರ್ಗಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮಹ್ಮದ ಜಿಲಾನಿ ಚಿಕಿತ್ಸೆಗೆ ಸ್ವಲ್ಪ ಮಟ್ಟಿಗೆ ಸ್ಪಂಧಿಸುತ್ತಿದ್ದು, ಎರಡೂಮೂರು ದಿನಗಳ ಕಾಲ ಸ್ಪಷ್ಟವಾಗಿ ಏನೂ ಹೇಳಲಿಕ್ಕೆ ಸಾಧ್ಯವಿಲ್ಲ ಎಂದು ಚಿಕಿತ್ಸೆ ನೀಡಿದ ಡಾ| ರಾಘವೇಂದ್ರ ಕುಲಕರ್ಣಿ ತಿಳಿಸಿದ್ದಾರೆ. 

ಟಾಪ್ ನ್ಯೂಸ್

ಸೋಮೇಶ್ವರ ಬೀಚ್‌: ರಾತ್ರಿ ವೇಳೆ ಡಿಜೆ ಪಾರ್ಟಿ; ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರಿಂದ ದೂರು

ಸೋಮೇಶ್ವರ ಬೀಚ್‌: ರಾತ್ರಿ ವೇಳೆ ಡಿಜೆ ಪಾರ್ಟಿ; ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರಿಂದ ದೂರು

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ನಿಯಂತ್ರಣಕ್ಕೆ ಬಾರದ ಡೆಂಘೀ-ಮಲೇರಿಯಾ

10

ದೀನ-ದುರ್ಬಲರಿಗೆ ಕಾನೂನು ನೆರವು ಉಚಿತ

12

ಸರ್ಕಾರಗಳಿಗಿಲ್ಲ ರೈತರ ಕಾಳಜಿ

9

ಬಾಂಗ್ಲಾ ಹತ್ಯಾಕಾಂಡಕ್ಕೆ ಖಂಡನೆ

8

ರಾಜ್ಯೋತ್ಸವ: ಸರಳ ಆಚರಣೆಗೆ ನಿರ್ಧಾರ

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

4 ವರ್ಷವಾದರೂ ಮುಗಿಯದ ಕಚೇರಿ ಕಾಮಗಾರಿ

4 ವರ್ಷವಾದರೂ ಮುಗಿಯದ ಕಚೇರಿ ಕಾಮಗಾರಿ

ಸೋಮೇಶ್ವರ ಬೀಚ್‌: ರಾತ್ರಿ ವೇಳೆ ಡಿಜೆ ಪಾರ್ಟಿ; ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರಿಂದ ದೂರು

ಸೋಮೇಶ್ವರ ಬೀಚ್‌: ರಾತ್ರಿ ವೇಳೆ ಡಿಜೆ ಪಾರ್ಟಿ; ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರಿಂದ ದೂರು

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.