ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ: ಗುಲಬರ್ಗಾ ವಿವಿಯಲ್ಲಿ ಮತ ಎಣಿಕೆ ಕಾರ್ಯ ಆರಂಭ
Team Udayavani, Nov 10, 2020, 8:21 AM IST
ಕಲಬುರಗಿ: ವಿಧಾನ ಪರಿಷತ್ನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತಗಳ ಎಣಿಕೆ ಇಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದಲ್ಲಿ ಮತ ಕ್ಷೇತ್ರ ಎಣಿಕೆ ಕಾರ್ಯ ನಡೆಯುತ್ತಿದೆ.
ಐವರು ಅಭ್ಯರ್ಥಿಗಳು ಕಣದಲ್ಲಿದ್ದು, ಒಟ್ಟು 21,437 ಮತಗಳು ಚಲಾವಣೆಯಾಗಿವೆ. ಮತ ಎಣಿಕೆಗಾಗಿ 7 ಟೇಬಲ್ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್ಗೆ ಒಬ್ಬ ಕೌಂಟಿಂಗ್ ಸೂಪರ್ ವೈಸರ್, ಮೂವರು ಕೌಂಟಿಂಗ್ ಅಸಿಸ್ಟೆಂಟ್ ಹಾಗೂ ಓರ್ವ ಡಿ-ಗ್ರೂಪ್ ನೌಕರರನ್ನು ನೇಮಿಸಲಾಗಿದೆ. ಒಟ್ಟಾರೆ 120 ಸಿಬ್ಬಂದಿಯನ್ನು ಮತ ಎಣಿಕೆಗಾಗಿ ನಿಯೋಜಿಸಲಾಗಿದೆ.
ಮತ ಎಣಿಕೆ ಕೇಂದ್ರಕ್ಕೆ ಚುನಾವಣಾಧಿಕಾರಿಯೂ ಆಗಿರುವ ಪ್ರಾದೇಶಿಕ ಆಯುಕ್ತ ಡಾ. ಎನ್.ವಿ. ಪ್ರಸಾದ್ ಭೇಟಿ ನೀಡಿ ಪರಿಶೀಲಿಸಿದರು. ವಿಶ್ವವಿದ್ಯಾಲಯದ ಸುತ್ತಲೂ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಡಿಸಿಪಿ, ಎಸಿಪಿ ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್