ವೈದ್ಯರ ನಡೆ ಹಳ್ಳಿಕಡೆ ಸಾಗಲಿ: ನಿರಾಣಿ


Team Udayavani, Jun 5, 2021, 6:06 PM IST

xcvbnbvcxz

ಕಲಬುರಗಿ: ಕೊರೊನಾ ಸೋಂಕಿನ ಕಾರಣ ಜನರು ಭಯದಿಂದ ಚಿಕಿತ್ಸೆ ಪಡೆಯಲು ಮುಂದೆ ಬರುತ್ತಿಲ್ಲ. ಹೀಗಾಗಿ ವೈದ್ಯ ತಂಡ ಹಳ್ಳಿಗೆ ಹೋಗಿ ತಪಾಸಣೆ ಮಾಡಿ ಜನರಿಗೆ ಚಿಕಿತ್ಸೆ ನೀಡಬೇಕೆಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಕರೆ ನೀಡಿದರು. ಬೆಂಗಳೂರಿನಿಂದ ಶುಕ್ರವಾರ ಝೂಮ್‌ ಮೀಟ್‌ ಮೂಲಕ ಜಿಲ್ಲೆಯ ಜನಪ್ರತಿನಿಧಿ ಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿ ಕಾರಿಗಳೊಂದಿಗೆ ಕೋವಿಡ್‌ -19 ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.

ಮಹಾಮಾರಿ ಸೋಂಕಿನಿಂದ ಗ್ರಾಮೀಣ ಜನರಲ್ಲಿ ಭಯ ಮನೆ ಮಾಡಿದೆ. ಇದನ್ನು ಹೋಗಲಾಡಿಸಿ ಅವರಲ್ಲಿ ಆತ್ಮಸ್ಥೈರ್ಯ ತುಂಬಬೇಕಾದ ಅವಶ್ಯಕತೆ ಹೆಚ್ಚಿದೆ. ಹಾಗೆ ಸರ್ಕಾರದ ಮಾರ್ಗಸೂಚಿ ಅನ್ವಯ 18-44 ವಯಸ್ಸಿನ ಆದ್ಯತಾ ಗುಂಪೆಂದು ಪರಿಗಣಿಸಿರುವ ಎಲ್ಲರಿಗೂ ಕೋವಿಡ್‌ ಲಸಿಕೆ ನೀಡಬೇಕು. ಜಿಲ್ಲೆಯಲ್ಲಿ ಖನಿಜ ನಿ ಧಿಯ ಶೇ.33ರಷ್ಟು ಅನುದಾನದಲ್ಲಿ ಆಕ್ಸಿಜನ್‌ ಘಟಕ ಸ್ಥಾಪನೆ, ಔಷಧಿ , ಕನ್ಸುಮೇಬಲ್ಸ್‌, ವೈದ್ಯಕೀಯ ಉಪಕರಣಗಳ ಖರೀದಿಗೆ ಮುಂದಾಗಬೇಕು ಎಂದು ಸಚಿವರು ತಿಳಿಸಿದರು.

ಲಾಕ್‌ಡೌನ್‌ ಕಾರಣ ಜನರು ನಗರದಿಂದ ಹಳ್ಳಿಗಳಿಗೆ ವಾಪಸ್ಸಾಗಿದ್ದು, ಮಹಾತ್ಮ ಗಾಂ ಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಅನುಷ್ಠಾನಕ್ಕೆ ತಂದು ದುಡಿಯುವ ಕೈಗಳಿಗೆ ಕೆಲಸ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ| ದಿಲೀಷ್‌ ಸಸಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶಿಸಿದರು.

ಇದಕ್ಕೂ ಮುನ್ನ ಜಿಲ್ಲಾ ಧಿಕಾರಿ ವಿ.ವಿ.ಜ್ಯೋತ್ಸ್ನಾ ಮಾತನಾಡಿ, ಕಳೆದ ಏಳು ದಿನಗಳಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇ.3ಕ್ಕೆ ಇಳಿದಿದೆ. ಇಪ್ಪತ್ತು ದಿನಗಳ ಹಿಂದೆ ಪ್ರತಿದಿನ 15ರಿಂದ 20 ಜನರು ಕೋವಿಡ್‌ನಿಂದ ನಿಧನರಾಗುತ್ತಿದ್ದರು. ಇದೀಗ ಇದರ ಪ್ರಮಾಣ 2ರಿಂದ 5ಕ್ಕೆ ಇಳಿಕೆಯಾಗಿದೆ ಎಂದರು. ಕೊರೊನಾ ಮೂರನೇ ಅಲೆ ಎದುರಿಸಲು ಜಿಲ್ಲೆಯಲ್ಲಿ ಸಿದ್ಧತೆ ಆರಂಭಿಸಿದ್ದು, ತಜ್ಞರ ಸಭೆ ಕರೆದು ಅಗತ್ಯ ಸಲಹೆ ಪಡೆಯಲಾಗಿದೆ.

ಜಿಲ್ಲೆಯಲ್ಲಿ 0-6 ವಯಸ್ಸಿನ 3.6 ಲಕ್ಷ, 7-11 ವಯಸ್ಸಿನ 2.8 ಲಕ್ಷ ಹಾಗೂ 12-14 ವಯಸ್ಸಿನ 1.64 ಲಕ್ಷ ಮಕ್ಕಳಿದ್ದು, ಇವರ ಬಗ್ಗೆ ಹೆಚ್ಚಿನ ಗಮನಹರಿಸಬೇಕಿದೆ. ತಾಲೂಕು ಆಸ್ಪತ್ರೆಯಲ್ಲಿ ಈಗಿರುವ 50 ಆಕ್ಸಿಜನೇಟೆಡ್‌ ಹಾಸಿಗೆಯನ್ನು 100ಕ್ಕೆ ಹೆಚ್ಚಿಸಲಾಗುತ್ತಿದೆ. ಇದರಲ್ಲಿ 30 ಮಕ್ಕಳಿಗೆ ಮೀಸಲಿಟ್ಟು, ಅದರಲ್ಲಿ ಐದು ಐಸಿಯು ಹಾಸಿಗೆಗಳನ್ನಾಗಿ ಮಾಡಲಾಗುವುದು. ಪ್ರತಿ ತಾಲೂಕಿನಲ್ಲಿ ಆಕ್ಸಿಜನ್‌ ಪ್ಲಾಂಟ್‌ ಸ್ಥಾಪನೆ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ವಿವರಿಸಿದರು. ವಿಧಾನ ಪರಿಷತ್‌ ಸದಸ್ಯ ಶಶೀಲ ನಮೋಶಿ ಮಾತನಾಡಿ, ರಾಜ್ಯ ಸರ್ಕಾರ ಶಿಕ್ಷಕರನ್ನು ಲಸಿಕೆ ವಿತರಣೆಗೆ ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸಿದೆ.

ಆದರೆ ಹಲವರು ಇನ್ನೂ ಲಸಿಕೆಯಿಂದ ವಂಚಿತರಾಗಿದ್ದು, ಎಲ್ಲ ಶಿಕ್ಷಕರಿಗೂ ಲಸಿಕೆ ದೊರೆಯುವಂತಾಗಬೇಕು ಎಂದರು. ಜಿಪಂ ಸಿಇಒ ಡಾ| ದಿಲೀಷ್‌ ಶಶಿ ನರೇಗಾ ಅನುಷ್ಠಾನ ಮತ್ತು ಪ್ರಗತಿ ಬಗ್ಗೆ ವಿವರಿಸಿದರು. ಚಿತ್ತಾಪುರ ಶಾಸಕ ಪ್ರಿಯಾಂಕ್‌ ಖರ್ಗೆ, ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿಷತ್‌ ಸದಸ್ಯ ಬಿ.ಜಿ.ಪಾಟೀಲ ಮಾತನಾಡಿದರು. ಝೂಮ ಮೀಟ್‌ನಲ್ಲಿ ಶಾಸ ಕ ರಾದ ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ ಪಾಟೀಲ ತೇಲ್ಕೂರ, ಖನೀಜ್‌ ಫಾತಿಮಾ, ನಗರ ಪೊಲೀಸ್‌ ಆಯುಕ್ತ ಡಾ| ವೈ.ಎಸ್‌.ರವಿಕುಮಾರ, ಎಸ್‌ಪಿ ಡಾ| ಸಿಮಿ ಮರಿಯಂ ಜಾರ್ಜ್‌, ಜೆಸ್ಕಾಂ ಎಂಡಿ ರಾಹುಲ್‌ ಪಾಂಡ್ವೆ, ಪಾಲಿಕೆ ಆಯುಕ್ತ ಸ್ನೇಹಲ್‌ ಸುಧಾಕರ ಲೋಖಂಡೆ, ಡಾ| ಶರಣಬಸಪ್ಪ ಗಣಜಲಖೇಡ್‌, ಜಿಮ್ಸ್‌ ನಿರ್ದೇಶಕಿ ಡಾ| ಕವಿತಾ ಪಾಟೀಲ, ಇಎಸ್‌ಐಸಿ ಡೀನ್‌ ಡಾ| ಇವಾನೋ ಲೊಬೋ, ಜಿಲ್ಲಾ ಸರ್ಜನ್‌ ಡಾ| ಅಂಬಾರಾಯ ರುದ್ರವಾಡಿ, ಸಹಾಯಕ ಆಯುಕ್ತ ರಾಮಚಂದ್ರ ಗಡಾದೆ, ರಮೇಶ ಕೋಲಾರ ಮತ್ತು ಜಿಲ್ಲಾ, ತಾಲೂಕು ಮಟ್ಟದ ಅ ಧಿಕಾರಿಗಳು ಭಾಗವಹಿಸಿದ್ದರು

 

ಟಾಪ್ ನ್ಯೂಸ್

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.