ಬೀದರ್ ಪ್ರವೇಶ ನಿರಾಕರಣೆಗೆ ಮುತಾಲಿಕ್‌ ಕೆಂಡ

Team Udayavani, Jun 5, 2022, 11:42 AM IST

5mutalik

ಕಲಬುರಗಿ: ಬೀದರ್ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಆಳಂದ ತಾಲೂಕಿನ ಮಂಠಾಳ ಗ್ರಾಮದ ಬಳಿಯಲ್ಲಿ ಶನಿವಾರ ಮಧ್ಯಾಹ್ನ ಬೀದರ ಜಿಲ್ಲೆಗೆ ಹೊರಟಿದ್ದ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್‌ ಮತ್ತು ರಾಜ್ಯಾಧ್ಯಕ್ಷ ಆಂದೋಲಾದ ಸಿದ್ಧಲಿಂಗ ಸ್ವಾಮೀಜಿ ಅವರನ್ನು ಪೊಲೀಸರು ತಡೆದು ವಾಪಸ್ಸು ಕಳಿಸಿರುವ ಘಟನೆ ನಡೆದಿದೆ. ‌

ಬೀದರನಲ್ಲಿ ಜೂ.4ರಿಂದ 12ರ ವರೆಗೆ ಮೂಲ ಅನುಭವ ಮಂಟಪ ರಕ್ಷಣೆಗಾಗಿ ನಡೆಯುತ್ತಿರುವ “ಮಠಾಧೀಶರ ನಡೆ ಬಸವಕಲ್ಯಾಣದ ಕಡೆ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಭಯ ನಾಯಕರು ಹೊರಟಿದ್ದರು. ಆದರೆ, ಮುನ್ನೆಚ್ಚರಿಕೆ ಕ್ರಮವಾಗಿ ಬೀದರ ಜಿಲ್ಲಾಡಳಿತ ಉಭಯ ನಾಯಕರ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಶನಿವಾರ ಆಳಂದದಲ್ಲಿನ ಕಾರ್ಯಕ್ರಮ ಮುಗಿಸಿಕೊಂಡು ಬೀದರಗೆ ಪ್ರಯಾಣ ಬೆಳೆಸಿದಾಗ ವಿ.ಕೆ.ಸಲಗರ ಬಳಿ ಮಂಠಾಳದಲ್ಲಿ ಪೊಲೀಸರು ಉಭಯ ನಾಯಕರನ್ನು ತಡೆದಾಗ ತುಸು ಹೊತ್ತು ವಾದ-ಪ್ರತಿವಾದಗಳು ನಡೆದವು.

ನಾವು ಬಸವಕಲ್ಯಾಣದ ಘನ ರುದ್ರಮುನಿ ಶಿವಾಚಾರ್ಯರ ಭೇಟಿಗೆ ಹೊರಟಿದ್ದೇವೆ. ನಮ್ಮ ಉದ್ದೇಶ ಯಾವ ಕಾರ್ಯಕ್ರಮದಲ್ಲಿಯೂ ಪಾಲ್ಗೊಳ್ಳುವುದು ಅಲ್ಲ ಎಂದು ತಿಳಿಸಿದರೂ ಪೊಲೀಸರು ಯಾವುದೇ ಕಾರಣಕ್ಕೂ ಬೀದರ್‌ ಜಿಲ್ಲೆಗೆ ಪ್ರವೇಶ ನೀಡಲು ಸಾಧ್ಯವಿಲ್ಲ ಎಂದು ಪಟ್ಟು ಹಿಡಿದರು.

ಈ ವೇಳೆ ಶ್ರೀರಾಮ ಸೇನೆ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ವಾದವೂ ಆಯಿತು. ಕೊನೆಗೆ ಉಭಯ ನಾಯಕರು ತಮ್ಮ ಕಾರ್ಯಕರ್ತರ ಸಮೇತ ಕಲಬುರಗಿಗೆ ಆಗಮಿಸಿದರು. ಜಿಲ್ಲಾ ಅಧ್ಯಕ್ಷ ಮಹೇಶ ಗೊಬ್ಬೂರ, ಸೇಡಂ ಅಧ್ಯಕ್ಷ ಮೌನೇಶ ಬಡಿಗೇರ, ವಿಶ್ವ ಹಿಂದೂ ಪರಿಷತ್‌ನ ಬಸವರಾಜ ಪಾಟೀಲ, ಕಲಬುರಗಿ ನಗರ ಅಧ್ಯಕ್ಷ ಸಂತೋಷ ಹಿರೇಮಠ ಹಾಗೂ 50ಕ್ಕೂ ಹೆಚ್ಚು ಜನ ಕಾರ್ಯಕರ್ತರು ಇದ್ದರು.

ನಮ್ಮನ್ನು ಉದ್ದೇಶ ಪೂರ್ವಕವಾಗಿ ಸರಕಾರ ತಡೆದಿದೆ. ನಾವು ರುದ್ರಮುನಿ ಸ್ವಾಮೀಜಿ ಅವರನ್ನು ಭೇಟಿ ಮಾಡಲು ಹೊರಟಿದ್ದೆವು. ಬಸವಕಲ್ಯಾಣ ಶಾಸಕ ಶರಣು ಸಲಗರ್‌ ಡಿಜೆ ನಿಷೇಧ ಇದ್ದರೂ ಡಿಜೆ ಹಚ್ಚಿ ಸುಪ್ರೀಂಕೋರ್ಟ್‌ ಆದೇಶ ಉಲ್ಲಂಘಿಸಿದ್ದರೂ, ಸರಕಾರ ಬಾಯಿ ಮುಚ್ಚಿ ಕುಳಿತಿದೆ. ನಾವು ಶಾಂತವಾಗಿ ಸ್ವಾಮೀಜಿಗಳನ್ನು ಭೇಟಿ ಮಾಡಲು ಹೊರಟಿದ್ದರೆ ನಿರ್ಬಂಧ ಹೇರಲಾಗುತ್ತದೆ. ಇದು ಸರಿಯಲ್ಲ. -ಪ್ರಮೋದ ಮುತಾಲಿಕ್‌, ರಾಷ್ಟ್ರೀಯ ಅಧ್ಯಕ್ಷ, ಶ್ರೀರಾಮ ಸೇನೆ

“ಅಲ್ಲಿ.. ನಾವೇನು ಬಂದೂಕು, ಬಡಿಗೆ ತಗೊಂಡು ಹೊರಟಿದ್ವಾ? ಸ್ವಾಮೀಜಿ ಒಬ್ಬರನ್ನು ಮಾತನಾಡಿಸಿಕೊಂಡು ಬರಲು ಹೊರಟಿದ್ದೆವು. ಇಂತಹ ವೇಳೆ ಬೀದರ ಜಿಲ್ಲಾಡಳಿತದ ಮುಖೇನ ನಮ್ಮನ್ನು ನಿರ್ಬಂಧಿಸುವ ಸರಕಾರದ ಉದ್ದೇಶ ಸರಿಯಾದುದ್ದಲ್ಲ. ಮೊದಲು ನಿಮ್ಮ ಶಾಸಕರು, ಮುಖಂಡರ ಮಾಡುವ ಉಲ್ಲಂಘನೆಗಳನ್ನು ತುಸು ನೋಡಿ. -ಶ್ರೀ ಸಿದ್ಧಲಿಂಗ ಸ್ವಾಮೀಜಿ ಆಂದೋಲಾ, ರಾಜ್ಯಾಧ್ಯಕ್ಷ, ಶ್ರೀರಾಮಸೇನೆ

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.