ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಚಾಲನೆ

Team Udayavani, Dec 20, 2020, 3:35 PM IST

ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಚಾಲನೆ

ಕಲಬುರಗಿ: ಜಿಲ್ಲೆಯ ಮೂಲಕ ಹಾಯ್ದು ಹೋಗುವ ವಿಜಯಪುರ-ಕಲಬುರಗಿ-ಹುಮನಾಬಾದ್‌ ರಾಷ್ಟ್ರೀಯ ಹೆದ್ದಾರಿ-50 ಸೇರಿದಂತೆ 10,904 ಕೋಟಿ ರೂ. ಮೊತ್ತದ ಕರ್ನಾಟಕದ 33 ರಾಷ್ಟ್ರೀಯ ಹೆದ್ದಾರಿಗಳ ಯೋಜನೆಗಳಿಗೆ ಶನಿವಾರ ಕೇಂದ್ರ ರಸ್ತೆ ಸಾರಿಗೆ, ರಾಷ್ಟೀಯ ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ ವರ್ಚ್ಯುವಲ್‌ ಮೀಟಿಂಗ್‌ ಮೂಲಕ ಚಾಲನೆ ನೀಡಿದರು.

25 ಶಂಕುಸ್ಥಾಪನೆ ಮತ್ತು ಎಂಟು ಕಾಮಗಾರಿಗಳು ರಾಷ್ಟ್ರಕ್ಕೆ ಸಮರ್ಪಣೆ ಸೇರಿದಂತೆ ರಾಜ್ಯದ 33 ರಾಷ್ಟ್ರೀಯ ಹೆದ್ದಾರಿಗಳ 1,197 ಕಿಮೀ ಉದ್ದದ ರಸ್ತೆಗೆ 10,904 ಕೋಟಿ ರೂ. ವೆಚ್ಚ ವ್ಯಯ ಮಾಡಲಾಗುತ್ತಿದ್ದು, ಶಂಕುಸ್ಥಾಪನೆ ನೆರವೇರಿಸಿರುವ ಕಾಮಗಾರಿಗಳು 2022ರ ಹೊತ್ತಿಗೆ ಪೂರ್ಣಗೊಳ್ಳಲಿವೆ ಎಂದರು.

ದಕ್ಷಿಣ ಭಾಗದಲ್ಲಿ ಕರ್ನಾಟಕ ರಾಜ್ಯವು ವೇಗವಾಗಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಈಗ ಚಾಲನೆ ನೀಡಿದ ಅನೇಕ ಯೋಜನೆಗಳು ಕರ್ನಾಟಕದವಿವಿಧ ಭಾಗಗಳಿಗೆ ಸಂಪರ್ಕ ಸಾಧಿ ಸಲು ಸಹಕಾರಿ ಆಗುವುದಲ್ಲದೇ ರಾಜ್ಯದ ಸಂಪೂರ್ಣ ಚಿತ್ರಣವೇ ಬದಲಾಗಲಿದೆ. ಈಗಾಗಲೇ ಪ್ರಗತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಮುಂದಿನಹಂತದ ಅನುದಾನ ಬಿಡುಗಡೆಗೆ ಕೂಡಲೇ ಹಣ ಬಳಕೆ ಪ್ರಮಾಣ ಪತ್ರ ಸಲ್ಲಿಸಬೇಕೆಂದು ರಾಜ್ಯಸರ್ಕಾರಕ್ಕೆ ಸೂಚಿಸಿದರು.

ಬೆಂಗಳೂರಿನ ಗೃಹಕಚೇರಿ ಕೃಷ್ಣಾದಿಂದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಾತನಾಡಿ, ಶಿರಾಡಿ ಘಾಟ್‌ ಸುರಂಗ ಮಾರ್ಗ, ಚಾರ್ಮುಡಿ ಘಾಟ್‌, ಬೆಂಗಳೂರು-ತುಮಕೂರು ಅಷ್ಠ ಪಥದ ರಸ್ತೆ ಯೋಜನೆಗೆ ಅನುಮೋದನೆ ನೀಡಬೇಕು. ಇತ್ತೀಚೆಗೆ ನೆರೆ ಹಾವಳಿಯಿಂದ ಹಾನಿಯಾದ ಹೆದ್ದಾರಿಗಳ ದುರಸ್ತಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡರು.

ಕಲಬುರಗಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ ವಿಡಿಯೋ ಕಾನ್ಫೆರೆನ್‌ ನಲ್ಲಿ ಸಂಸದ ಡಾ| ಉಮೇಶ ಜಾಧವ, ಶಾಸಕರಾದ ಎಂ.ವೈ. ಪಾಟೀಲ, ಬಸವರಾಜ ಮತ್ತಿಮಡು, ಡಾ|ಅವಿನಾಶ ಜಾಧವ, ವಿಧಾನ ಪರಿಷತ್‌ ಸದಸ್ಯರಾದ

ಬಿ.ಜಿ. ಪಾಟೀಲ, ಶಶೀಲ್‌ ನಮೋಶಿ, ಕರ್ನಾಟಕ ನವೀಕರಿಸಬಹುದಾದ ಇಂಧನ ನಿಯಮಿತ ಅಧ್ಯಕ್ಷ ಚಂದು ಪಾಟೀಲ, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ, ಪಾಲಿಕೆ ಆಯುಕ್ತ ಸ್ನೇಹಲ್‌ ಸುಧಾಕರ್‌ ಲೋಖಂಡೆ, ಎನ್‌ಎಚ್‌ಎಐ ಅನುಷ್ಠಾನ ಕಚೇರಿ ವ್ಯವಸ್ಥಾಪಕ ಚಾರ್ಲ್ಸ್‌ ಜೆ., ಇಂಜಿನಿಯರ್‌ ಪ್ರದೀಪ ಹಿರೇಮಠ ಪಾಲ್ಗೊಂಡಿದ್ದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ 22ರೂ.ಗಳಿದ್ದು, ಕೇಂದ್ರಸರ್ಕಾರ 34ರೂ. ನೀಡಿ ಖರೀದಿಸುತ್ತಿದೆ. ಇದರಿಂದ ಹೆಚ್ಚಿನ ಆರ್ಥಿಕ ಹೊರೆಯಾಗುತ್ತಿದ್ದು, ಇದನ್ನು ತಪ್ಪಿಸಲು ಹೊಸ ಎಥೆನಾಲ್‌ ಉತ್ಪಾದನೆ ನೀತಿ ಜಾರಿಗೆ ತರಲು ಉದ್ದೇಶಿಸಲಾಗಿದೆ. ಕರ್ನಾಟಕದಲ್ಲಿ ಹೆಚ್ಚಿನ ಕಬ್ಬುಬೆಳೆಯುವುದರಿಂದ ಇಲ್ಲಿ ಸಕ್ಕರೆ ಕಾರ್ಖಾನೆಗಳು ಹೆಚ್ಚಿದ್ದು, ಪೆಟ್ರೋಲ್‌ಗೆ ಪರ್ಯಾಯವಾಗಿ ಎಥೆನಾಲ್‌ ಬಳಕೆಗೆ ಕರ್ನಾಟಕ ಸರ್ಕಾರ ಮುಂದಾಗಬೇಕು. -ನಿತಿನ್‌ ಗಡ್ಕರಿ, ಕೇಂದ್ರ ಸಚಿವ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.