Udayavni Special

ಬೇಡಿಕೆ ಈಡೇರಿಕೆಗೆ ಹೋರಾಟ ಅವಶ್ಯ

Team Udayavani, Aug 19, 2017, 10:37 AM IST

gulbarga 2.jpg

ಆಳಂದ: ರೈತರು, ದಲಿತರು, ಕೃಷಿಕರ ಸಂಪೂರ್ಣ ವಿವಿಧ ಬೇಡಿಕೆಗಳು ಈಡೇರಲು ಹೋರಾಟ ಅನಿವಾರ್ಯವಾಗಿದೆ
ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ ಹೇಳಿದರು. ಪಟ್ಟಣದಲ್ಲಿ ಶುಕ್ರವಾರ ರೈತ, ಕೃಷಿ ಕೂಲಿಕಾರ, ದಲಿತ ಸಂಘಟನೆಗಳ ಒಕ್ಕೂಟ ಕರೆದ ಸಭೆಯಲ್ಲಿ ಅವರು ಮಾತನಾಡಿದರು. ಬರದಿಂದ ತತ್ತರಿಸಿ ಹೋಗಿರುವ ಸಾವಿರಾರು ರೈತರು ಆತ್ಮಹತ್ಯೆಗೆ ತುತ್ತಾಗುತ್ತಿರುವಾಗ ಕೂಲಿ ಕೆಲಸಗಳನ್ನು ಕಳೆದುಕೊಂಡು ದೊಡ್ಡ ಸಂಖ್ಯೆಯಲ್ಲಿ ದಲಿತರು, ಕೂಲಿಕಾಕರರು ನಗರಗಳಿಗೆ ವಲಸೆ ಹೋಗುತ್ತಿರುವ ಸಂದರ್ಭದಲ್ಲೂ ಸಾಲಮನ್ನಾಕ್ಕೂ ನಮಗೂ ಸಂಬಂಧವಿಲ್ಲ, ಸಾಲಮನ್ನಾ ಮಾಡಿದ ರಾಜ್ಯ ಸರ್ಕಾರಕ್ಕೆ ಬಿಡಿಗಾಸಿನ ಹಣಕಾಸಿನ ಸಹಾಯವನ್ನೂ ನೀಡುವುದಿಲ್ಲ ಎನ್ನುವ ಪ್ರಧಾನಮಂತ್ರಿಗಳ ಮತ್ತು ಹಣಕಾಸು ಸಚಿವರ ನೀತಿ ಜನವಿರೋಧಿ ಆಗಿದೆ ಎಂದು ಖಂಡಿಸಿದರು. ರೈತರ, ದಲಿತರ ಮತ್ತು ಕೃಷಿ ಕಾರ್ಮಿಕರ ಸಂಪೂರ್ಣ ಸಾಲಮನ್ನಾ ಮಾಡಿದರೆ ಮಾತ್ರ ಅವರೆಲ್ಲ ಚೇತರಿಸಿಕೊಳ್ಳಲು ಸಾಧ್ಯ. ಕೃಷಿ ಕ್ಷೇತ್ರ ಸ್ವಾಲಂಬನೆಗೊಳಿಸಲು ಡಾ| ಎಂ.ಎಸ್‌. ಸ್ವಾಮಿನಾಥನ್‌ ವರದಿ ಆಧಾರಿತ ಕನಿಷ್ಠ ಬೆಂಬಲ ಬೆಲೆ ನಿಗದಿಗಾಗಿ ಕೃಷಿಕರ ಪರವಾದ ಬೆಳೆ ವಿಮೆ ನೀತಿ ಜಾರಿಗೊಳಿಸಬೇಕು. ರೈತರಿಗೆ ಮತ್ತು ಕೂಲಿಕಾರರಿಗೆ 5 ಸಾವಿರ ರೂ. ಮಾಸಾಶನ ನೀಡಬೇಕು ಎನ್ನುವ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಬೇಕಾಬಿಟ್ಟಿ ಭೂಸ್ವಾ ಧೀನತೆ ತಡೆಯಬೇಕು. ಭೂಮಿಗೆ ನ್ಯಾಯವಾದ ಬೆಲೆ ದೊರೆಯಬೇಕು ಸರ್ಕಾರಿ ಹಾಗೂ ಅರಣ್ಯ ಭೂಮಿ ಉಳುಮೆದಾರರಿಗೆ ಹಕ್ಕುಪತ್ರವನ್ನು ಒದಗಿಸಬೇಕು. ಭೂರಹಿತ ಬಡವರಿಗೆ ಹಾಗೂ ದಲಿತರಿಗೆ ಭೂ ಮಂಜೂರಾತಿಗಾಗಿ ಮತ್ತು ಎಲ್ಲ ಬಡವರಿಗೂ ರೇಷನ್‌ ಕಾರ್ಡ್‌ ಮಂಜೂರಾತಿ ಮಾಡಬೇಕು. ಆನ್‌ಲೈನ್‌ ತೊಂದರೆ ನಿವಾರಿಸಬೇಕು ಎಂದು ಒತ್ತಾಯಿಸಿದರು. ಮುಖಂಡ ಆನಂದರಾವ್‌ ಶಿರೂರೆ, ಕಲ್ಯಾಣಿ ಅವುಟೆ, ಕಲ್ಯಾಣಿ ಹಿರೋಳಿ ಸಲಹೆ ನೀಡಿದರು. ಮಹಾವೀರ ಕಾಂಬಳೆ, ದಿನಕರ್‌ ಎಸ್‌. ವಾರಿಕ, ಮೈಲಾರಿ ಜೋಗೆ, ಲಕ್ಷ್ಮಣ ಕಾಂಬಳೆ, ರಫೀಕ ನಿಂಬಾಳಕರ್‌, ಧರೆಪ್ಪ ಸಿಂಗೆ, ಆದರ್ಶ ಅವಟೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kalaburagi news

ಮೂರನೇ ಅಲೆ ತಡೆಗೆ ಲಸಿಕೆ ಹಾಕಿಸಿಕೊಳ್ಳಿ

gulbarga news

ಇಂದು ನಾಗಾವಿ ಯಲ್ಲಮ್ಮದೇವಿ ಜಾತ್ರೆ

kalaburagi news

ಕೆಕೆಆರ್‌ಡಿಬಿಗೆ 3000 ಕೋಟಿ ರೂ. ಕೊಡಲು ಬದ್ಧ: ಮುಖ್ಯಮಂತ್ರಿ ಬೊಮ್ಮಾಯಿ

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

surjwewala

ಬೊಮ್ಮಾಯಿ‌ ಸರ್ಕಾರ ಕಾಲಿನಿಂದ ಮುಡಿಯವರೆಗೂ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸುರ್ಜೇವಾಲಾ

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.