ವಸತಿ ನಿಲಯ ದುರಸ್ತಿಗೆ ನಿರ್ಲಕ್ಷ್ಯ


Team Udayavani, Jun 7, 2018, 10:22 AM IST

gul-6.jpg

ಚಿಂಚೋಳಿ: ತಾಲೂಕಿನಲ್ಲಿ ಇರುವ ಸಮಾಜ ಕಲ್ಯಾಣ ಇಲಾಖೆಗೆ ಒಳಪಟ್ಟಿರುವ ಬಾಲಕ-ಬಾಲಕಿಯರ ಮೆಟ್ರಿಕ್‌ ನಂತರದ ಕಾಲೇಜು, ಆಶ್ರಮ ಶಾಲೆ, ವಸತಿ ನಿಲಯಗಳಿಗೆ ಮೂಲಸೌಕರ್ಯ ಒದಗಿಸುವುದು ಹಾಗೂ ವಸತಿ ನಿಲಯ ದುರಸ್ತಿಗೊಳಿಸಿ ಮಕ್ಕಳಿಗೆ ಅನುಕೂಲ ಮಾಡಿಕೊಡುವ ಕೆಲಸವನ್ನು ಪೂರ್ಣಗೊಳಿಸುವಲ್ಲಿ ಕರ್ನಾಟಕ ಗ್ರಾಮೀಣ
ಮೂಲಸೌಕರ್ಯಗಳ ಅಭಿವೃದ್ಧಿ ನಿಗಮ ನಿರ್ಲಕ್ಷ್ಯತನ ವಹಿಸಿದೆ.

ಹಿಂದುಳಿದ ಪ್ರದೇಶದ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ಒಟ್ಟು 12 ಸರಕಾರಿ ವಸತಿ ನಿಲಯಗಳಿವೆ. ಇವುಗಳಲ್ಲಿ ಏಳು ಮೆಟ್ರಿಕ್‌ ಪೂರ್ವ ಬಾಲಕರ-ಬಾಲಕಿಯರ ವಸತಿ ನಿಲಯ, ಮೂರು ಆಶ್ರಮ ವಸತಿ ಶಾಲೆ, ಒಂದು ಬಾಲಕರ ಕಾಲೇಜು ವಸತಿ ನಿಲಯ, ಒಂದು ವೃತ್ತಿಪರ ಮಹಿಳಾ ವಸತಿ ನಿಲಯಗಳಿವೆ.

ಮೆಟ್ರಿಕ್‌ ಪೂರ್ವ ಬಾಲಕರ-ಬಾಲಕಿಯರ ವಸತಿ ನಿಲಯದಲ್ಲಿ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 530, ಆಶ್ರಮ ವಸತಿ ಶಾಲೆಯಲ್ಲಿ 370, ಬಾಲಕರ ಕಾಲೇಜು ವಸತಿ ನಿಲಯದಲ್ಲಿ 60, ವೃತ್ತಿಪರ ಮಹಿಳಾ ವಸತಿ ನಿಲಯದಲ್ಲಿ ಒಟ್ಟು ವಿದ್ಯಾರ್ಥಿನಿಯರ ಸಂಖ್ಯೆ 50. ಹೀಗೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯದಲ್ಲಿ ಒಟ್ಟು 1015 ವಿದ್ಯಾರ್ಥಿಗಳಿದ್ದಾರೆ.

ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಮಕ್ಕಳು ವಸತಿ ನಿಲಯದಲ್ಲಿ ಇದ್ದುಕೊಂಡು ವಿದ್ಯಾಭ್ಯಾಸ ಮಾಡುವುದಕ್ಕಾಗಿ ಮಕ್ಕಳಿಗೆ ಶುದ್ದ ನೀರು, ಶೌಚಾಲಯ, ವಿದ್ಯುತ್‌ ಸಂಪರ್ಕ, ಫ್ಯಾನ್‌, ಬಿಸಿ ನೀರು, ಬಟ್ಟೆ ಒಗೆದುಕೊಳ್ಳಲು ಕಾಂಪೌಂಡ್‌ ಗೋಡೆ ನಿರ್ಮಾಣ, ಹೆಚ್ಚುವರಿ ಕೋಣೆ ಹಾಗೂ ವಸತಿ ನಿಲಯಗಳ ದುರಸ್ತಿಗಾಗಿ ಮತ್ತು ನವೀಕರಣಗೊಳಿಸುವುದಕ್ಕಾಗಿ ಚಿಂಚೋಳಿ ಬಾಲಕಿಯರ ವಸತಿ ನಿಲಯಕ್ಕೆ 20.80 ಲಕ್ಷ ರೂ., ಬಾಲಕರ ವಸತಿ ನಿಲಯ ಕುಂಚಾವರಂಗೆ 29 ಲಕ್ಷ ರೂ., ಸರಕಾರಿ ಆಶ್ರಮ ಶಾಲೆ ಚಿಂಚೋಳಿ(ಚಂದಾಪೂರ) 25.09 ಲಕ್ಷ ರೂ., ಮೆಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯ ಚಿಂಚೋಳಿಗೆ 14.75 ಲಕ್ಷ ರೂ., ಕುಂಚಾವರಂ ಗಡಿಭಾಗದಲ್ಲಿ ಇರುವ ವಂಟಿಚಿಂತಾ ಆಶ್ರಮ ವಸತಿ ಶಾಲೆಗೆ 17.67ಲಕ್ಷ ರೂ., ಐನಾಪುರ ಸರಕಾರಿ ಬಾಲಕರ ವಸತಿ ನಿಲಯಕ್ಕೆ 40.86 ಲಕ್ಷ ರೂ., ಸರಕಾರಿ ಆಶ್ರಮ ವಸತಿ ಶಾಲೆ ಪಾಲತ್ಯಾತಾಂಡಕ್ಕೆ 68.05 ಲಕ್ಷ ರೂ. ನೀಡಲಾಗಿದೆ. ಒಟ್ಟು 2.56 ಕೋಟಿ ರೂ. ಸಮಾಜ ಕಲ್ಯಾಣ ಇಲಾಖೆಗೆ ಹೆಚ್‌.ಕೆ.ಆರ್‌.ಡಿ.ಬಿ.ಯಿಂದ 2017-18ನೇ ಸಾಲಿನಲ್ಲಿ ಅನುದಾನ ನೀಡಲಾಗಿದೆ. ಈ ಎಲ್ಲ ವಸತಿ ನಿಲಯಗಳ ಕಾಮಗಾರಿಗಳನ್ನು ಶಾಸಕರ ಅನುಮತಿ ಮೇರೆಗೆ ಕರ್ನಾಟಕ ಗ್ರಾಮೀಣ ಮೂಲಸೌಕರ್ಯಗಳ ಅಭಿವೃದ್ಧಿ ನಿಗಮಕ್ಕೆ ವಹಿಸಿಕೊಡಲಾಗಿದೆ.

ಕಳೆದ ಒಂದು ವರ್ಷಗಳಿಂದ ವಸತಿ ನಿಲಯಗಳ ದುರಸ್ತಿ ಕಾರ್ಯ ನಡೆದಿದ್ದು ಇನ್ನು ಪೂರ್ಣಗೊಂಡಿಲ್ಲ. ಮಳೆಗಾಲದಲ್ಲಿ ಕೆಲವು ವಸತಿ ನಿಲಯಗಳು ಸಂಪೂರ್ಣ ಸೋರುತ್ತಿರುವುದರಿಂದ ಮಕ್ಕಳಿಗೆ ರಾತ್ರಿ ಮಲಗಲು, ಹಗಲು
ಕುಳಿತುಕೊಳ್ಳಲು ತೊಂದರೆ ಪಡುವಂತಾಗಿತ್ತು. 

ಈಗ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು, ಎಲ್ಲ ವಸತಿ ನಿಲಯಗಳು ಜೂನ್‌4ರಿಂದ ಪ್ರಾರಂಭಗೊಳ್ಳಲಿವೆ. ಹಳ್ಳಿಯ ಕೂಲಿ ಕಾರ್ಮಿಕರ ಬಡವರ ಮಕ್ಕಳು ವಸತಿ ನಿಲಯಗಳಲ್ಲಿ ಹೇಗೆ ಜೀವನ ಸಾಗಿಸಬೇಕು ಮತ್ತು ಅಭ್ಯಸಿಸಬೇಕು ಎಂಬುದನ್ನು ಜನಪ್ರತಿನಿಧಿಗಳು ಕಣ್ತೆರೆದು ನೋಡಬೇಕಾಗಿದೆ. ನಿಗಮದ ಹೆಸರಿನಲ್ಲಿ ಕೆಲವು ಪಕ್ಷಗಳ ಕಾರ್ಯಕರ್ತರೆ ಕೆಲಸ ಮಾಡುತ್ತಿದ್ದಾರೆನ್ನುವ ಆರೋಪಗಳು ಕೇಳಿಬಂದಿವೆ.

ಸರಕಾರಿ ವಸತಿ ನಿಲಯಗಳ ದುರಸ್ತಿ ಕೆಲಸಗಳನ್ನು ಕರ್ನಾಟಕ ಗ್ರಾಮೀಣ ಮೂಲಸೌಕರ್ಯಗಳ ಅಭಿವೃದ್ಧಿ ನಿಗಮಕ್ಕೆ ವಹಿಸಿ ಕೊಡಲಾಗಿದೆ. ಒಂದು ವರ್ಷವಾದರೂ ಇನ್ನು ಕಾಮಗಾರಿಗಳು ಪೂರ್ಣಗೊಂಡಿಲ್ಲ. ಕೆಲಸಗಳು ಸಂಪೂರ್ಣ ಕಳಪೆಮಟ್ಟದಿಂದ ನಡೆಯುತ್ತಿವೆ. ಕೆಲವು ವಸತಿ ನಿಲಯಗಳಲ್ಲಿ ಕೋಣೆಗಳ ಕೊರತೆ ಇದೆ ಎಂದು ಈಗಾಗಲೇ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳಿಗೆ ಮತ್ತು ಜಿಪಂ ಸಿಇಒಗೆ ವರದಿ ನೀಡಲಾಗಿದೆ. ತಾಪಂ ಸಾಮಾನ್ಯ ಸಭೆ ಮತ್ತು ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ.
 ಪ್ರಭುಲಿಂಗ ಬುಳ್ಳ,  ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ

ವಸತಿ ನಿಲಯಗಳ ದುರಸ್ತಿಗೋಸ್ಕರ ಸಮಾಜ ಕಲ್ಯಾಣ ಇಲಾಖೆಯಿಂದ ಅನುದಾನ ನೀಡಲಾಗಿದೆ. ಇವುಗಳ ಅಭಿವೃದ್ಧಿ ಇನ್ನು ಪೂರ್ಣಗೊಂಡಿಲ್ಲ ಇವುಗಳ ಬಗ್ಗೆ ತನಿಖೆ ನಡೆಸಬೇಕಾಗಿದೆ.  ಮಹಮ್ಮದ ಹುಸೇನ ನಾಯಕೋಡಿ, ತಾಲೂಕು ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ

ಶಾಮರಾವ ಚಿಂಚೋಳಿ

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.