ಸೋಂಕು ನಿಯಂತ್ರಣಕ್ಕೆ ರಾತ್ರಿ ಕರ್ಫ್ಯೂ ಇನ್ನಷ್ಟು ನಗರಗಳಿಗೆ ವಿಸ್ತರಣೆ: ಗೃಹ ಸಚಿವ ಬೊಮ್ಮಾಯಿ
Team Udayavani, Apr 15, 2021, 10:43 AM IST
ಕಲಬುರಗಿ: ಕೋವಿಡ್-19 ನಿಯಂತ್ರಣ ನಿಟ್ಟಿನಲ್ಲಿ ರಾತ್ರಿ ಕರ್ಫ್ಯೂ ಮತ್ತಷ್ಟು ನಗರಗಳಿಗೆ ವಿಸ್ತರಿಸುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಉದಯವಾಣಿಯೊಂದಿಗೆ ಮಾತನಾಡಿದ ಅವರು, ರಾತ್ರಿ ಕರ್ಫ್ಯೂ ಅಲ್ಲದೇ ಕೊವಿಡ್ ನಿಯಂತ್ರಣದ ಕ್ರಮಗಳನ್ನು ಕಠಿಣಗೊಳಿಸುವಂತೆ ಈಗಾಗಲೇ ಇಲಾಖಾಧಿಕಾರಿಗಳಿಗೆ ಸೂಚಿಸಲಾಗಿದೆ. ಮಹಾರಾಷ್ಟ್ರದಿಂದ ಬರುವವರ ಮೇಲೆ ನಿಗಾವಹಿಸಲು ಸೂಚಿಸಲಾಗಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ವ್ಯಾಪಕವಾಗಿದ್ದರಿಂದ ಲಾಕ್ ಡೌನ್ ಮಾದರಿಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಾವು ಕೂಡಾ ಅಧಿಕಾರಿಗಳೊಂದಿಗೆ ಸಮಾಲೋಚಿಸಲಾಗುವುದು ಎಂದು ಸಚಿವರು ವಿವರಿಸಿದರು.
ಏ. 18ರಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರು ಸರ್ವ ಪಕ್ಷಗಳ ಸಭೆ ಕರೆದಿದ್ದಾರೆ. ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯ ಹಾಗೂ ಸಾಧಕ- ಬಾಧಕ ನೋಡಿಕೊಂಡು ಮುಂದಿನ ಹೆಜ್ಜೆ ಇಡಲಾಗುವುದು ಎಂದು ಸಚಿವ ಬೊಮ್ಮಾಯಿ ತಿಳಿಸಿದರು.
ಇದನ್ನೂ ಓದಿ:10 ದಿನಗಳಲ್ಲಿ ಮತ್ತಷ್ಟು ಹೆಚ್ಚಳ; ಭಾರತದಲ್ಲಿ 24 ಗಂಟೆಯಲ್ಲಿ 2 ಲಕ್ಷ ಕೋವಿಡ್ ಪ್ರಕರಣ ಪತ್ತೆ
ಸಾರ್ವಜನಿಕರು ಕೋವಿಡ್ ನಿಯಂತ್ರಣ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರ ಮುಖಾಂತರ ಕೋವಿಡ್ ಹೊಡೆದೊಡಿಸಬೇಕು. ಪೊಲೀಸರಂತು ಕೋವಿಡ್ ನಿಯಂತ್ರಣದ ಕ್ರಮ ಕೈಗೊಳ್ಳುತ್ತಿದ್ದಾರೆ. ಪೊಲೀಸ್ ರಿಗೂ ಕೋವಿಡ್ ತಗುಲದಂತೆ ನಿಗಾ ವಹಿಸುವಂತೆ ಹೇಳಲಾಗಿದೆ ಎಂದು ಹೇಳಿದರು.
ಕಮಲ ಅರಳುವುದು ನಿಶ್ಚಿತ
ಬಸವಕಲ್ಯಾಣ ಪ್ರವಾಸೋದ್ಯಮದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ ಪಡಿಸುವುದಲ್ಲದೇ ಇಡೀ ಕ್ಷೇತ್ರದ ಅಭಿವೃದ್ಧಿ ಬಿಜೆಪಿಯಿಂದ ಸಾಧ್ಯ ಎಂಬುದನ್ನು ಮತದಾರರು ಮನಗಂಡಿರುವುದರಿಂದ ಕಮಲ ಅರಳುವುದು ನಿಶ್ಚಿತ ಎಂದು ಗೃಹ ಸಚಿವರು ದೃಢ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ