ಕಲಬುರಗಿ: 24 ಗಂಟೆ ಅವಧಿಯಲ್ಲಿ ಓರ್ವ ಕೋವಿಡ್ ಶಂಕಿತ ಸೇರಿ 9 ಸೋಂಕಿತರ ಸಾವು
Team Udayavani, May 3, 2021, 5:06 PM IST
ಕಲಬುರಗಿ: ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಓರ್ವ ಕೋವಿಡ್ ಶಂಕಿತ ಸೇರಿ ಒಂಭತ್ತು ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ.
ನಗರದ ಖಾಸಗಿ ಆನಂದ ಆಸ್ಪತ್ರೆಯಲ್ಲಿ ರವಿವಾರ ರಾತ್ರಿಯಿಂದ ಸೋಮವಾರ ಬೆಳಗ್ಗೆಯವರೆಗೆ ಐವರು ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. ರವಿವಾರ ತಡರಾತ್ರಿಯೇ ನಾಲ್ವರು ಮೃತಪಟ್ಟಿದ್ದರೆ, ಸೋಮವಾರ ಬೆಳಗ್ಗೆ ಓರ್ವ ಕೋವಿಡ್ ಸೋಂಕಿತ ಸಾವನ್ನಪ್ಪಿದ್ದಾನೆ. ಈ ಐವರ ಸಾವಿಗೆ ಆಕ್ಸಿಜನ್ ಅಭಾವ ಕಾರಣ ಎನ್ನಲಾಗಿದೆ.
ಅದೇ ರೀತಿ ಆಳಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತ ಮಹಿಳೆಯರು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಕೋವಿಡ್ ಚಿಕಿತ್ಸೆಗೆ ದಾಖಲಾಗಿದ್ದ ಮೂವರೂ ಮಹಿಳೆಯರು ರವಿವಾರ ರಾತ್ರಿ ಮೃತಪಟ್ಟಿದ್ದಾರೆ. ಮತ್ತೊಬ್ಬ ವ್ಯಕ್ತಿ ಶಂಕಿತ ಕೋವಿಡ್ ನಿಂದ ಸೋಮವಾರ ಮಧ್ಯಾಹ್ನ ಸಾವನ್ನಪ್ಪಿದ್ದಾನೆ.
ಮೂವರು ಮಹಿಳೆಯರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ವ್ಯಕ್ತಿ ಆಸ್ಪತ್ರೆಗೆ ದಾಖಲಾದ ಕೆಲ ಹೊತ್ತಿನಲ್ಲಿ ಮೃತಪಟ್ಟಿದ್ದು, ಕೋವಿಡ್ ಪರೀಕ್ಷೆಗೆ ಮಾದರಿ ಸಂಗ್ರಹಿಸಿ, ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ನಾಲ್ವರು ಆರೋಗ್ಯದಲ್ಲಿ ಏರುಪೇರಾಗಿ ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ