ಬಿಎಸ್ ವೈ ಸಂಪುಟ: ಹೈದರಾಬಾದ್ ಕರ್ನಾಟಕ ಭಾಗಕ್ಕೆ ಏಕೈಕ ಸಚಿವ ಸ್ಥಾನ

Team Udayavani, Aug 20, 2019, 2:04 PM IST

ಕಲಬುರಗಿ: ಕಾಂಗ್ರೆಸ್ ನ ಭದ್ರಕೋಟೆಯಾಗಿರುವ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಕನಿಷ್ಟ ಮೂರು ಸ್ಥಾನಗಳನ್ನು ಸಿಗಬೇಕಿತ್ತುಬೆಂಬ ಪಕ್ಷದ ಕಾರ್ಯಕರ್ತರ ಅಭಿಪ್ರಾಯವಾಗಿತ್ತು. ಈ ಭಾಗದ 15 ಬಿಜೆಪಿ ಶಾಸಕರ ಪೈಕಿ ಬೀದರ್ ಜಿಲ್ಲೆಯ ಔರಾದ ಕ್ಷೇತ್ರದ ಶಾಸಕ ಪ್ರಭು ಚವ್ಹಾಣಗೆ ಮಾತ್ರ ಸಚಿವ ಸ್ಥಾನ ಒಲಿದಿದೆ.

ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳಾದ ಬೀದರ್ 1 ಕಲಬುರಗಿ 05, ಯಾದಗಿರಿ 02 ರಾಯಚೂರು 02, ಕೊಪ್ಪಳ 03 ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ 02 ಬಿಜೆಪಿ ಶಾಸಕರಿದ್ದಾರೆ.

ಕೊನೆಯ ಕ್ಷಣದಲ್ಲಿ ರೇವೂರ ಹೆಸರು ಪಟ್ಟಿಯಿಂದ ಹೊರಗೆ
ಕಲಬುರಗಿ ಜಿಲ್ಲೆಯಲ್ಲಿ ಎರಡು ಸಲ ಶಾಸಕರಾಗಿರುವ ದತ್ತಾತ್ರೇಯ ಪಾಟೀಲ್ ರೇವೂರ ಅವರು ಈ ಬಾರಿ ಸಚಿವರಾಗುತ್ತಾರೆಂದು ಹೇಳಲಾಗಿತ್ತು. ಪಟ್ಟಿಯಲ್ಲಿದ್ದ ಅವರ ಹೆಸರು ಕೊನೆಯ ಕ್ಷಣದಲ್ಲಿ ಕೈ ಬಿಡಲಾಗಿದೆ ಎಂದು ಮಾತುಗಳು ಕೇಳಿ ಬರುತ್ತಿದೆ. ಈ ಹಿಂದೆ ಜೆಡಿಎಸ್- ಬಿಜೆಪಿ ಹಾಗೂ ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲೂ ದತ್ತಾತ್ರೇಯ ಪಾಟೀಲ್ ಅವರ ತಂದೆ ದಿ. ಚಂದ್ರಶೇಖರ ಪಾಟೀಲ ರೇವೂರ ಅವರಿಗೂ ಸಚಿವ ಸ್ಥಾನ ಕೈ ತಪ್ಪಿತ್ತು. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್- ಬಿಜೆಪಿ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುವಲ್ಲಿ ಚಂದ್ರಶೇಖರ ಮಧ್ಯಸ್ಥಿಕೆಯಾಗಿ ಮಾತುಕತೆ ನಡೆಸಿದ್ದರು. ಈಗ ಅವರ ಮಗನಿಗೂ ಕೊನೆ ಘಳಿಗೆಯಲ್ಲಿ ಸಚಿವ ಸ್ಥಾನ ಕೈ ತಪ್ಪಿದೆ.

ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಗೆ ಹೈ.ಕ ಭಾಗದ ಸಚಿವರೇ ಅಧ್ಯಕ್ಷರಾಗಬೇಕೆಂಬ ನಿಯಮವಿರುವುದರಿಂದ ಮಂಡಳಿ ಅಧ್ಯಕ್ಷರಾಗಿ ಸಚಿವ ಪ್ರಭು ಚವ್ಹಾಣ ಅವರೇ ನೇಮಕವಾಗಲಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಕಲಬುರಗಿ ಜಿಲ್ಲೆಗೆ ಹೊರಗಿನವರೇ ಜಿಲ್ಲಾ ಉಸ್ತುವಾರಿ ಸಚಿವರು ಎಂಬುದು ಈಗ ಮತ್ತೆ ಮುಂದುವರೆಯುವಂತಾಗಿದೆ.  ಜೆಡಿಎಸ್- ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಹಾಗೂ ನಂತರದ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಲಕ್ಷ್ಮಣ ಸವದಿ, ನಂತರ ಬಸವರಾಜ ಬೊಮ್ಮಾಯಿ ಉಸ್ತುವಾರಿ ಸಚಿವರಾಗಿದ್ದರು. ಕೊನೆ ಒಂದು ವರ್ಷ ಮಾತ್ರ ಜಿಲ್ಲೆಯ ರೇವು ನಾಯಕ‌ ಬೆಳಮಗಿ ಉಸ್ತುವಾರಿ ಸಚಿವರಾಗಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ