ಗ್ರಾಪಂ ಮಟ್ಟದಲ್ಲೇ ಪರಿಹಾರ ಅರ್ಜಿ ಸಲ್ಲಿಕೆಗೆ ಅವಕಾಶ : ಡಿಸಿ ಜೋತ್ಸ್ನಾ 

Team Udayavani, Jun 17, 2021, 5:24 PM IST

zsdfghn zxcvbvcxz

ಕಲಬುರಗಿ: ಕೊರೊನಾ ಎರಡನೇ ಅಲೆಯ ಲಾಕ್‌ಡೌನ್‌ ಪರಿಣಾಮ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ರಾಜ್ಯ ಸರ್ಕಾರ ಎರಡು ಸಾವಿರ ರೂ. ಆರ್ಥಿಕ ನೆರವು ಘೋಷಿಸಿರುವ ಕಾರಣ ಜಿಲ್ಲೆಯ ಅರ್ಹ ಫಲಾನುಭವಿಗಳು ಇದರ ಲಾಭ ಪಡೆದುಕೊಳ್ಳಲು ಗ್ರಾಮ ಪಂಚಾಯಿತಿ ಹಂತದಲ್ಲೇ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿ  ಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅಧಿಕಾರಿಗಳಿಗೆ ಸೂಚಿಸಿದರು.

ಝೂಮ್‌ ಮೀಟ್‌ ಮೂಲಕ ಕಾರ್ಮಿಕ ಇಲಾಖೆ ಸೇರಿದಂತೆ ಭಾಗಿದಾರರ ಇಲಾಖೆ ಅ ಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಈ ಸಂಬಂಧ ಗ್ರಾಮ ಪಂಚಾಯಿತಿ ಕಚೇರಿಯಲ್ಲಿರುವ ಡಾಟಾ ಎಂಟ್ರಿ ಆಪರೇಟರ್‌ ಸೇವೆ ಪಡೆಯಬೇಕು. ಸಾಮಾನ್ಯ ಸೇವಾ ಕೇಂದ್ರದ ಮೂಲಕವೇ ಅರ್ಜಿ ಸಲ್ಲಿಕೆ ಇರುವುದರಿಂದ ಈ ಸೇವೆಯನ್ನು ಪಂಚಾಯಿತಿಯಲ್ಲೇ ಒದಗಿಸಬೇಕೆಂದು ಸೂಚಿಸಿದರು. ಲಾಕ್‌ಡೌನ್‌ ಪರಿಹಾರ ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ದೊರಕುವಂತೆ ಅ ಧಿಕಾರಿಗಳು ಸಮರ್ಪಕವಾಗಿ ನೋಡಿಕೊಳ್ಳ ಬೇಕು. ಈ ಕುರಿತು ಟ್ರೇಡ್‌ ಯೂನಿಯನ್‌, ಕಾರ್ಮಿಕ ಸಂಘಟನೆಗಳ ಸಹಕಾರ ಪಡೆದು ಜಿಲ್ಲಾದ್ಯಂತ ಜಾಗೃತಿ ಮೂಡಿಸಬೇಕು. ಕಾರ್ಮಿಕ ವರ್ಗ ಹೆಚ್ಚಿರುವ ಪ್ರದೇಶದಲ್ಲಿ ಕ್ಯಾಂಪ್‌ ಆಯೋಜಿಸಿ, ಸ್ಥಳದಲ್ಲೇ ಅರ್ಜಿ ಪಡೆಯಬೇಕು. ನಗರ-ಪಟ್ಟಣ ಪ್ರದೇಶದಲ್ಲಿ ಕಾರ್ಮಿಕರು ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಸ್ಥಳೀಯ ಸಂಸ್ಥೆಗಳು ಕಾರ್ಯೋನ್ಮುಖವಾಗಬೇಕು ಎಂದು ನಿರ್ದೇ ಶನ ಮಾಡಿದರು.

ಕಾರ್ಮಿಕರಿಗೆ ವೃತ್ತಿ ಪ್ರಮಾಣ ಪತ್ರ ನೀಡಲು ಪಾಲಿಕೆ, ಸ್ಥಳೀಯ ಪೌರ ಸಂಸ್ಥೆ, ತಹಶೀಲ್ದಾರ್‌-ಉಪ ತಹಶೀಲ್ದಾರ್‌, ಪಿಡಿಒ, ಕಾರ್ಯದರ್ಶಿ, ಪರಿಸರ ಮಾಲಿನ್ಯ, ಕಾರ್ಮಿಕ ಇಲಾಖೆಯ ವಿವಿಧ ಹಂತದ ಅ ಧಿಕಾರಿಗಳಲ್ಲದೇ ಪತ್ರಾಂಕಿತ ಅಧಿ  ಕಾರಿಗಳಿಗೂ ಅಧಿ ಕಾರ ನೀಡಲಾಗಿದೆ. ಕಾರ್ಮಿಕರು ಪ್ರಮಾಣ ಪತ್ರ ಕೇಳಿಬಂದಲ್ಲಿ ಆದ್ಯತೆ ಮೇಲೆ ಪ್ರಮಾಣ ಪತ್ರ ನೀಡಬೇಕು ಎಂದು ಅಧಿ ಕಾರಿಗಳಿಗೆ ಸೂಚಿಸಿದರು.

ಕಲಬುರಗಿ ಪ್ರಾದೇಶಿಕ ವಿಭಾಗದ ಕಾರ್ಮಿಕ ಉಪ ಆಯುಕ್ತ ಡಿ.ಜಿ. ನಾಗೇಶ ಮಾತನಾಡಿ, ರಾಜ್ಯ ಅಸಂಘಟಿತ ಕಾರ್ಮಿಕರ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಅಂಬೇಡ್ಕರ್‌ ಕಾರ್ಮಿಕ ಸಹಾಯ ಹಸ್ತ ಯೋಜನೆ ಯಡಿ ನೋಂದಣಿಯಾದ 7000 ಫಲಾನುಭವಿ ಗಳನ್ನು ಹೊರತುಪಡಿಸಿ, ಜಿಲ್ಲೆಯಲ್ಲಿ ಪರಿ ಹಾರಕ್ಕೆ ಇದುವರೆಗೆ 13,323 ಅರ್ಜಿಗಳು ಬಂದಿವೆ. ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಿದ ಕೂಡಲೇ ಕಾರ್ಮಿಕ ಅ ಧಿಕಾರಿಗಳ ಲಾಗಿನ್‌ಗೆ ಬಂದು ಅಲ್ಲಿಂದ ವಿಲೇವಾರಿ ಮಾಡಲಾಗುತ್ತದೆ ಎಂದು ವಿವರಿಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಡಾ| ದಿಲೀಷ್‌ ಸಸಿ, ಡಿಯುಡಿಸಿ ಯೋಜನಾ ನಿರ್ದೇಶಕ ಶಿವಶರಣಪ್ಪ ನಂದಗಿರಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿ ಕಾರಿ ರಮೇಶ ಸಂಗಾ, ಸಹಾಯಕ ಕಾರ್ಮಿಕ ಆಯುಕ್ತೆ ಆರತಿ, ಜಿಲ್ಲಾ ಕಾರ್ಮಿಕ ಅ ಧಿಕಾರಿ ಶ್ರೀಹರಿ ದೇಶಪಾಂಡೆ ಹಾಗೂ ಜಿಲ್ಲಾ ಮಟ್ಟದ ಅಧಿ ಕಾರಿಗಳು, ಕಾರ್ಮಿಕ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.