ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ಸಂಘಟನೆ ಅವಶ್ಯ

Team Udayavani, Dec 12, 2021, 10:53 AM IST

9congress

ಚಿಂಚೋಳಿ: ಮೀಸಲು ಮತಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಯುವ ಕಾರ್ಯಕರ್ತರು, ಹಿರಿಯರು ಪಕ್ಷದ ಸಂಘಟನೆಯಲ್ಲಿ ತೊಡಗಬೇಕು ಎಂದು ಕಾಂಗ್ರೆಸ್‌ ಮುಖಂಡ ಸುಭಾಷ ರಾಠೊಡ ಹೇಳಿದರು.

ತಾಲೂಕಿನ ಸೇರಿ ಬಡಾ ತಾಂಡಾದಲ್ಲಿ ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು,ದೇಶದಲ್ಲಿ ಕಾಂಗ್ರೆಸ್‌ ಇತಿಹಾಸ ಹೊಂದಿರುವ ಪಕ್ಷವಾಗಿದೆ. ಅನೇಕರು ತ್ಯಾಗ, ಬಲಿದಾನ ಮಾಡಿದ ಪಕ್ಷವಾಗಿರುವುದರಿಂದ ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಶಕ್ತಿ ತುಂಬಬೇಕಾಗಿದೆ. ಯುವಕರು, ದಲಿತರು, ಮಹಿಳೆಯರು, ಅಲ್ಪಸಂಖ್ಯಾತರು, ಹಿರಿಯರ ನವೀಕರಣ ಮಾಡಲಾಗುತ್ತಿದೆ ಎಂದರು.

ತಾಲೂಕಿನಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ. ಜನರಿಗೆ ಕಿರುಕುಳ ಹೆಚ್ಚಾಗಿದೆ. ಪೊಲೀಸರ ದಂಡ ವಸೂಲಿಯಿಂದ ಜನರು ವಾಹನ ತೆಗೆದುಕೊಂಡು ರಸ್ತೆ ಮೇಲೆ ತಿರುಗಾಡುವುದೇ ಕಷ್ಟದಾಯಕವಾಗಿದೆ. ಶಾಸಕರ ಕಾರ್ಯವೈಖರಿಗೆ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೀಸಲು ಚಿಂಚೋಳಿ ಮತಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷವನ್ನು ಭದ್ರಕೋಟೆಯನ್ನಾಗಿ ಮಾಡಬೇಕಾಗಿದೆ. ಕಲಬುರಗಿ-ಯಾದಗಿರಿ ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶಿವಾನಂದ ಪಾಟೀಲ ಅವರಿಗೆ ಚಿಂಚೋಳಿ ಮತಕ್ಷೇತ್ರದಿಂದ ಹೆಚ್ಚು ಲೀಡ್‌ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದರು.

ಸೇರಿಬಡಾ ತಾಂಡಾ, ಕಾಳಗಿ, ಸಾಲಹಳ್ಳಿ, ಕೊಡದೂರ, ಹಲಚೇರಾ, ಚಿಂಚೋಳಿ ತಾಲೂಕಿನಲ್ಲಿ ಐನೋಳಿ, ಚಂದಾಪುರ, ಮಿರಿಯಾಣ, ಹಸರಗುಂಡಗಿಯಲ್ಲಿ ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಚಾಲನೆ ಕಾರ್ಯಕ್ರಮ ನಡೆದವು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಸವರಾಜ ಮಲಿಗೋಪಾಲರಾವ್‌ ಕಟ್ಟಿಮನಿ, ಶಬ್ಬೀರ ಅಹೆಮದ್‌, ಅಬ್ದುಲ್‌ ಬಾಸಿತ್‌, ನಾಗೇಶ ಗುಣಾಜಿ, ಅಬ್ದುಲ್‌ ರವೂಫ್‌ ಮಿರಿಯಾಣ, ದೇವಲಾ ನಾಯಕ, ಶಬ್ಬೀರಮಿಯಾ, ಬಸವರಾಜ ಕೋಲಕುಂದಿ, ಅನಂತರೆಡ್ಡಿ ದೇಶಮುಖ, ಹಣಮಯ್ಯ ಗುತ್ತೇದಾರ, ಆನಂದ ಜಾಧವ, ರೇವಣಸಿದ್ಧಪ್ಪ, ಕೃಷ್ಣ, ಪ್ರಕಾಶ, ಬಸವರಾಜ, ಶಿವನಾಗಯ್ಯ ಸ್ವಾಮಿ, ಸಂಗಮೇಶರೆಡ್ಡಿ, ನೀಲಕಂಠರಾವ್‌ ಪಾಟೀಲ, ರಮೇಶ ಮೇಲಿನಕೇರಿ ಕಾಂಗ್ರೆಸ್‌ ಪಕ್ಷದ ಪುರಸಭೆ ಸದಸ್ಯರು ಇನ್ನಿತರರಿದ್ದರು.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.