70ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಸಿದ್ಧತೆ


Team Udayavani, Jan 17, 2019, 5:38 AM IST

gul-1.jpg

ಕಲಬುರಗಿ: ನಗರದಲ್ಲಿ 70ನೇ ಗಣರಾಜ್ಯೋತ್ಸವ ದಿನವನ್ನು ಜ. 26ರಂದು ಅತ್ಯಂತ ಸಂಭ್ರಮ-ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯು ನಿರ್ಣಯ ಕೈಗೊಂಡಿತು.

ಗಣರಾಜ್ಯೋತ್ಸವದ ದಿನದಂದು ಬೆಳಗ್ಗೆ 7ರಿಂದ 8:30ರ ವರೆಗೆ ಎಲ್ಲ ಇಲಾಖೆಗಳ ಮುಖ್ಯಸ್ಥರು ತಮ್ಮ ಕಚೇರಿಗಳಲ್ಲಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಆಯಾ ಶಾಲಾ-ಕಾಲೇಜುಗಳ ಮುಖ್ಯಸ್ಥರು ರಾಷ್ಟ್ರ ಧ್ವಜಾರೋಹಣ ನೆರವೇರಿಸಬೇಕು.

ಬೆಳಗ್ಗೆ 9 ಗಂಟೆಗೆ ಜಿಲ್ಲಾ ಪೊಲೀಸ್‌ ಪರೇಡ್‌ ಮೈದಾನದಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಲು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಆಹ್ವಾನಿಸಲು ಹಾಗೂ ಸಮಾರಂಭಕ್ಕೆ ಜಿಲ್ಲೆಯ ಸಂಸದರು, ವಿಧಾನಸಭೆ, ವಿಧಾನ ಪರಿಷತ್‌ ಸದಸ್ಯರು ಹಾಗೂ ಮತ್ತಿತರ ಚುನಾಯಿತ ಪ್ರತಿನಿಧಿಗಳನ್ನು ಆಹ್ವಾನಿಸಲು ಸಭೆ ಸರ್ವಾನುಮತದ ನಿರ್ಣಯ ಕೈಗೊಂಡಿತು.

ಈ ಬಾರಿ ಗಣರಾಜ್ಯೋತ್ಸವ ಸಮಾರಂಭವನ್ನು ವಿನೂತನವಾಗಿ ಹಾಗೂ ಆಕರ್ಷಕವಾಗಿ ಆಚರಿಸಲು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ತಬ್ದ ಚಿತ್ರ ನಿರ್ಮಾಣ ಸಮಿತಿ ರಚಿಸುವ ಮೂಲಕ ವಿನೂತನ ಸ್ತಬ್ದ ಚಿತ್ರಗಳನ್ನು ಹಾಗೂ ವಿವಿಧ ಇಲಾಖೆಗಳ ವಸ್ತುಪ್ರದರ್ಶನ ಮಳಿಗೆಗಳನ್ನು ಸ್ಥಾಪಿಸಬೇಕು.

ಕಲಬುರಗಿ ಸಹಾಯಕ ಆಯುಕ್ತ ರಾಚಪ್ಪ ಅಧ್ಯಕ್ಷತೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಿತಿ ರಚಿಸಲಾಯಿತು. ಎಲ್ಲ ಅಭಿವೃದ್ಧಿ ಇಲಾಖೆಗಳು ಕಡ್ಡಾಯವಾಗಿ ಸ್ತಬ್ದ ಚಿತ್ರಗಳನ್ನು ಕವಾಯತ್‌ನಲ್ಲಿ ಪ್ರದರ್ಶಿಸಲು ಸಿದ್ಧತೆ ಮಾಡಿಕೊಳ್ಳಬೇಕು. ಸ್ತಬ್ದಚಿತ್ರಗಳು ಗಣರಾಜ್ಯೋತ್ಸವ ಕವಾಯತು ಮುಗಿದ ನಂತರ ನಗರದ ಮುಖ್ಯ ಬೀದಿಗಳಲ್ಲಿ ಸಂಚರಿಸಬೇಕೆಂದು ಸೂಚಿಸಲಾಯಿತು.

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಗ್ನಿಶಾಮಕ ದಳದವರಿಂದ ಬೆಂಕಿ ಆರಿಸುವ ಪ್ರಾಯೋಗಿಕ ಕಾರ್ಯಕ್ರಮ ಹಾಗೂ ಪೊಲೀಸ್‌ ಇಲಾಖೆಯಿಂದ ಶ್ವಾನದಳ ಕಲೆಗಳನ್ನು ಪ್ರದರ್ಶಿಸಬೇಕು. ಈ ಬಾರಿ ಸರ್ಕಾರಿ ನೌಕರರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲಾಗುತ್ತಿದ್ದು, ಆಯ್ಕೆಯಾದ ಆರು ಜನ ಅಧಿಕಾರಿ, ಸಿಬ್ಬಂದಿಗೆ ಸನ್ಮಾನಿಸಲಾಗುವುದು.

ಗಣರಾಜ್ಯೋತ್ಸವ ದಿನದಂದು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್‌ ಪಡೆ ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವದ ಮುಖ್ಯ ಸಮಾರಂಭಕ್ಕೆ ಹಾಗೂ ಸಂಜೆ ರಂಗಮಂದಿರದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು.

ಗಣರಾಜ್ಯೋತ್ಸವ ಅಂಗವಾಗಿ ನೆರವೇರಿಸಲಾಗುವ ಧ್ವಜಾರೋಹಣದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು ಹಾಗೂ ರಾಷ್ಟ್ರಧ್ವಜಕ್ಕೆ ಯಾವುದೇ ರೀತಿಯ ಅಗೌರವವಾಗದಂತೆ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಪಿ. ರಾಜಾ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಯಪ್ರಕಾಶ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ, ಸಹಾಯಕ ಆಯುಕ್ತ ರಾಚಪ್ಪ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ್‌ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.