ಕಲಬುರ್ಗಿ ಜಿಲ್ಲಾ ಆಸ್ಪತ್ರೆಯಿಂದ ವಿಚಾರಣಾಧೀನ ಕೈದಿ ಪರಾರಿ

Team Udayavani, Feb 17, 2020, 10:40 AM IST

ಕಲಬುರ್ಗಿ: ಇಲ್ಲಿನ ಜಿಲ್ಲಾಸ್ಪತ್ರೆಯಿಂದ ವಿಚಾರಣಾಧೀನ ಕೈದಿಯೋರ್ವ ಪರಾರಿಯಾದ ಘಟನೆ ರವಿವಾರ ರಾತ್ರಿ ನಡೆದಿದೆ. ಕುಖ್ಯಾತ ಅಂತರರಾಜ್ಯ ಕಳ್ಳ ಮುಜೀಬ್ (25) ಪರಾರಿಯಾದ ವಿಚಾರಣಾಧೀನ ಕೈದಿ.

ಮುಜೀಬ್ ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣ ನಿವಾಸಿಯಾಗಿದ್ದು, ತೆಲಂಗಾಣ ಪರ್ಗಿ, ರೋಜಾ ಠಾಣೆ ಸೇರಿದಂತೆ ರಾಜ್ಯ ಹೊರ ರಾಜ್ಯಗಳಲ್ಲಿ ಈತನ ಮೇಲೆ ಕಳ್ಳತನ ಪ್ರಕರಣ ದಾಖಲಾಗಿದ್ದವು.

ಅನಾರೋಗ್ಯ ಕಾರಣದಿಂದಾಗಿ ಎರಡು ದಿನಗಳ ಹಿಂದೆ ಈತನನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ಬಂದೋಬಸ್ತನಲ್ಲಿದ್ದ ಪೊಲೀಸರ ಕಣ್ತಪ್ಪಿಸಿ ಈತ ಪರಾರಿಯಾಗಿದ್ದ ಎನ್ನಲಾಗಿದೆ.

ಪೊಲೀಸರು ಈತನ ಪತ್ತೆಗಾಗಿ ಬಲೆ ಬೀಸಿದ್ದು, ಕಲಬುರ್ಗಿಯ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ