ಕಟೀಲ್‌ ಹೇಳಿಕೆಗೆ ಶಾಸಕ ಪ್ರಿಯಾಂಕ್‌ ತಿರುಗೇಟು

Team Udayavani, Apr 5, 2021, 7:45 PM IST

kjkjkjn

ಕಲಬುರಗಿ : ವಿಷಕಾರಿ ಆಗಿದ್ದರಿಂದಲೇ ಮಲ್ಲಿಕಾರ್ಜುನ ಖರ್ಗೆ ಅವರನ್ನು ಜನ ಸೋಲಿಸಿದ್ದಾರೆಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯ ಅಧ್ಯಕ್ಷ ನಳೀನ್‌ಕುಮಾರ ಕಟೀಲ್‌ ಅವರಿಗೆ ಖರ್ಗೆ ಅವರು ವಿಷಕಾರಿಯಾಗಿದ್ದರಿಂದಲೇ ನಮ್ಮ ಭಾಗಕ್ಕೆ 371ನೇ (ಜೆ) ಕಲಂ, ರೈಲ್ವೆ ಡಿವಿಜನ್‌, ಇಎಸ್‌ಐಸಿ ಆಸ್ಪತ್ರೆ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳು ಜಾರಿಯಾಗಿವೆ ಎಂದು ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್‌ ಖರ್ಗೆ ವ್ಯಂಗ್ಯವಾಗಿ ಕುಟುಕಿದ್ದಾರೆ.

ಟ್ವಿಟ್‌ ಮಾಡಿರುವ ಪ್ರಿಯಾಂಕ್‌ ಖರ್ಗೆ ವಿಷಕಾರಿಯಾಗಿ ದ್ದರಿಂದಲೇ, 371(ಜೆ), ರೈಲ್ವೆ ಡಿವಿಜನ್‌, ಇಎಸ್‌ ಐಸಿ ಆಸ್ಪತ್ರೆ, ಕೇಂದ್ರೀಯ ವಿಶ್ವವಿದ್ಯಾಲಯ, ನಿಮ್‌ l, ವಿಮಾನ ನಿಲ್ದಾಣ, ಜವಳಿ ಪಾರ್ಕ್‌, ರಾಷ್ಟ್ರೀಯ ಹೆದ್ದಾರಿ, ನೀರಾವರಿ ಯಂತಹ ಪ್ರಮುಖ ಯೋಜನೆಗಳು ಈ ಭಾಗಕ್ಕೆ ಬಂದಿವೆ ಎಂದು ತಿರುಗೇಟು ನೀಡಿದ್ದಾರೆ.

ಪ್ರಸ್ತುತ ಸರ್ಕಾರದಲ್ಲಿ ಜಿಲ್ಲೆಯಿಂದ ಒಬ್ಬ ಶಾಸಕರೂ ಸಚಿವರನ್ನಾಗಿ ಮಾಡಲಿಲ್ಲ. ಮಕರಂದ ಸೂಸುವ ಬಿಜೆಪಿಯಿಂದ ಜಿಲ್ಲೆಗೆ ಒಂದು ಸಚಿವ ಸ್ಥಾನವೂ ಸಿಗಲಿಲ್ಲ ಎಂದು ಲೇವಡಿ ಮಾಡಿದ್ದಾರೆ. ಬಿಜೆಪಿಯಿಂದ ಅನುದಾನ ಹಾಗೂ ಪ್ರತ್ಯೇಕ ರೈಲ್ವೆ ವಿಭಾಗ ಬಿಡಿ, ಒಂದೂ ರೈಲನ್ನು ನಿಲ್ಲಿಸಲು ನಿಮ್ಮಿಂದ ಆಗಲಿಲ್ಲ.

ಬಿಜೆಪಿಯವರ ಮಕರಂದದ ಸುವಾಸನೆಗೆ ಹಿಂದಿನ ಸರ್ಕಾರದ ಯೋಜನೆಗಳೆಲ್ಲ ರದ್ದಾಗಿವೆ. ಸಚಿವರಾದ ಕೆ.ಎಸ್‌. ಈಶ್ವರಪ್ಪ, ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕ್ರಮ ಕೈಗೊಳ್ಳಲಾಗದಂತ ದುರ್ಬಲ ಅಧ್ಯಕ್ಷ ಎಂದು ಕಟೀಲ್‌ ಅವರನ್ನು ಪ್ರಿಯಾಂಕ್‌ ಟೀಕಿಸಿದ್ದಾರೆ.

ಕಾಂಗ್ರೆಸ್‌ ಟೀಕೆ: ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿಷಕಾರಿ ಎನ್ನುವ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನಕುಮಾರ ಕಟೀಲ್‌ ಹೇಳಿಕೆಯನ್ನು ಜಿಲ್ಲಾ ಕಾಂಗ್ರೆಸ್‌ ಸಮಿತಿ ತೀವ್ರವಾಗಿ ಖಂಡಿಸಿದೆ. ಖರ್ಗೆ ಅವರು ವಿಷಕಾರಿಯಾಗಿದ್ದರೆ ಈ ಭಾಗದಲ್ಲಿ 11 ಬಾರಿ ಚುನಾವಣೆಯಲ್ಲಿ ಗೆಲುವು ಕಾಣುತ್ತಿರಲಿಲ್ಲ. ಅದೇ ರೀತಿ ಖರ್ಗೆ ಈ ಭಾಗಕ್ಕೆ ಇಎಸ್‌ಐ ಆಸ್ಪತ್ರೆ, ಕೇಂದ್ರಿಯ ವಿಶ್ವವಿದ್ಯಾಲಯ, ಕಲಂ 371 (ಜೆ), ವಿಮಾನ ನಿಲ್ದಾಣ, ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು, ಪೊಲೀಸ್‌ ತರಬೇತಿ ಕೇಂದ್ರ, ಜಿಲ್ಲಾ  ಧಿಕಾರಿ ಕಚೇರಿ ಮೇಲಾಗಿ ರೈಲ್ವೆ ಸಚಿವರಾಗಿರುವ ಸಂದರ್ಭದಲ್ಲಿ ಜಿಲ್ಲೆಯಿಂದ ರಾಜ್ಯ ಕೇಂದ್ರ ಸ್ಥಾನಕ್ಕೆ ಬೀದರ-ಯಶವಂತಪುರ, ಕಲಬುರಗಿ ಮಾರ್ಗವಾಗಿ ಸೊಲ್ಲಾಪುರ-ಯಶವಂತಪುರ, ಸಿಕಿಂದ್ರಾಬಾದ-ಹುಬ್ಬಳ್ಳಿ ಮತ್ತು ಅನೇಕ ಹೊಸ ರೈಲುಗಳ ಓಡಾಟ ಹಾಗೂ ಕಲಬುರಗಿ ಹಾಗೂ ಇತರೆ ಭಾಗದ ರೈಲ್ವೆ ನಿಲ್ದಾಣಗಳ ನವೀಕರಣ, ಯಾದಗಿರಿ ಜಿಲ್ಲೆಯ ಕಡೇಚೂರದಲ್ಲಿ ರೈಲ್ವೆ ಕೋಚ್‌ ಕಾರ್ಖಾನೆ ಮತ್ತು ಬೆಂಗಳೂರಿನಿಂದ ವಾರಣಾಸಿಗೆ ರೈಲ್ವೆ ಹೀಗೆ ಇನ್ನೂ ಅನೇಕ ಕೆಲಸಗಳು ಆಗುತ್ತಿದ್ದವೇ? ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಗದೇವ ಗುತ್ತೇದಾರ ಪ್ರಶ್ನಿಸಿದ್ದಾರೆ.

ಈ ಭಾಗಕ್ಕೆ ಮಂಜೂರಿ ಮಾಡಿಸಿದಂತಹ ಅನೇಕ ಯೋಜನೆಗಳು ಮತ್ತು ಕಚೇರಿಗಳು ಈಗ ಬಿಜೆಪಿ ಸರಕಾರ ರದ್ದುಗೊಳಿಸುವುದು, ಬೇರೆ ಕಡೆ ಸ್ಥಳಾಂತಗೊಳಿಸುವದನ್ನು ಮಾಡಿದೆ. ಬಿಜೆಪಿ ಸರಕಾರ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾಡುತ್ತಿರುವ ತಾರತಮ್ಯ ಧೋರಣೆ ಮತ್ತು ವಿಷಕಾರಿ ಕೆಲಸವನ್ನು ಎತ್ತಿ ತೋರಿಸುತ್ತಿದೆ. ಮುಖ್ಯವಾಗಿ ಕಟೀಲು ಅವರಿಗೆ ರಾಜಕೀಯ ಅನುಭವ ಹಾಗೂ ತಿಳಿವಳಿಕೆ ಕಡಿಮೆ ಇದೆ ಎಂದು ಎತ್ತಿ ತೋರಿಸುತ್ತದೆ ಎಂದು ಟೀಕಿಸಿದ್ದಾರೆ.

ಟಾಪ್ ನ್ಯೂಸ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.