ಮೋದಿಗೆ ಭಯ ಹುಟ್ಟಿಸಿದ ಪ್ರಿಯಾಂಕಾ

Team Udayavani, Jan 27, 2019, 12:30 AM IST

dr-mallikarjun-kharge-modi.jpg

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯಿಂದ ದೇಶದ ಜನತೆ ದೂರ ಸರಿಯುತ್ತಿದ್ದು, ಇದೀಗ ಪ್ರಿಯಾಂಕಾ ಗಾಂಧಿ ರಾಜಕೀಯ ಪ್ರವೇಶದಿಂದ ಬಿಜೆಪಿಯವರಿಗೆ ಭಯ ಶುರುವಾಗಿದೆ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ನವರ ಸ್ವಾತಂತ್ರÂ ಹೋರಾಟ, 56 ವರ್ಷಗಳ ಆಡಳಿತ ಮತ್ತು ಈಗಿನ ಬಿಜೆಪಿಯ ನಾಲ್ಕೂವರೆ ವರ್ಷಗಳ ಆಡಳಿತವನ್ನು ಜನ ನೋಡಿದ್ದಾರೆ.

ಜಗತ್ತಿಗೆ ಮಾದರಿಯಾದ ಸಂವಿಧಾನಕ್ಕೆ ಚ್ಯುತಿ ಬರುವ ಕೆಲಸ ಮೋದಿ ಸರ್ಕಾರದಲ್ಲಿ ಆಗುತ್ತಿದೆ. ಸಂವಿಧಾನದಲ್ಲಿರುವ ಅಂಶಗಳನ್ನು ತೆಗೆದು ಕಾನೂನು ಜಾರಿಗೊಳಿಸುವ ಯತ್ನ ನಡೆಯುತ್ತಿದೆ. ಆರ್‌ಎಸ್‌ಎಸ್‌ ತನ್ನ ತತ್ವಗಳನ್ನು ಮೋದಿ ಮೂಲಕ ದೇಶದಲ್ಲಿ ಜಾರಿಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂದರು.

ಮಾರ್ಕೆಟಿಂಗ್‌ ಮಾಡಿ ನರೇಂದ್ರ ಮೋದಿ ಅವರನ್ನು ಗದ್ದುಗೆ ಮೇಲೆ ಕೂರಿಸಿದ ಪರಿಣಾಮ ದೇಶದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಹೀಗಾಗಿ ಬಿಜೆಪಿಯನ್ನು ದೇಶದ ಜನತೆ ತಿರಸ್ಕರಿಸುತ್ತಿದ್ದಾರೆ. ಇತ್ತೀಚೆಗೆ ನಡೆದ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಡ ಚುನಾವಣೆಯಲ್ಲಿ ಬಿಜೆಪಿ ಸೋತಿದೆ. ಇದೀಗ ಮೋದಿ ಅವರ ಗ್ರಾಫ್‌ ಕಡಿಮೆಯಾಗಿದೆ.ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಸೋಲುವುದು ಖಚಿತ ಎಂದರು.

ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕೀಯಕ್ಕೆ ಬಂದಿರುವುದರಿಂದ ಯುವ ಜನತೆ ಹೊಸ ಉತ್ಸಾಹ ಹೊರ ಹಾಕುತ್ತಿದ್ದಾರೆ. ಹೀಗಾಗಿಯೇ ಬಿಜೆಪಿಯವರಿಗೆ ಭಯ ಶುರುವಾಗಿದೆ. ಪ್ರಧಾನಿ ಮೋದಿಯಿಂದ ಹಿಡಿದು ಎಲ್ಲರೂ ಪ್ರಿಯಾಂಕಾ ಬಗ್ಗೆ ಮಾತನಾಡುತ್ತಿದ್ದಾರೆ. ಹೆಣ್ಣು ಮಗಳೊಬ್ಬಳು ರಾಜಕೀಯಕ್ಕೆ ಬರುವುದು ತಪ್ಪಾ? ಮುಂದೆ ಲೋಕ ತಂತ್ರ, ಜನ ತಂತ್ರದಿಂದ ಎಲ್ಲವೂ ಗೊತ್ತಾಗಲಿದೆ ಎಂದರು.

ಉಮೇಶ ಟೀಕೆಗೆ ಸ್ವಾಗತ: ಸಚಿವ ಸ್ಥಾನ ತಪ್ಪಿರುವುದರಿಂದ ಅತೃಪ್ತಿಗೊಂಡಿರುವ ಚಿಂಚೋಳಿ ಕ್ಷೇತ್ರದ ಶಾಸಕ ಡಾ| ಉಮೇಶ ಜಾಧವ್‌ ಅವರ ಬಹಿರಂಗ ಟೀಕೆ ಸ್ವಾಗತಾರ್ಹ. ಆರೋಪ ಮಾಡುವವರು ಮಾಡಲಿ. ನನ್ನ ಬಗ್ಗೆ ಮಾತನಾಡುವವರು ಮಾತನಾಡಲಿ. ನಾನು 50 ವರ್ಷಗಳಿಂದ ಜನಪ್ರತಿನಿಧಿಯಾಗಿ ಕೆಲಸ ಮಾಡಿದ್ದೇನೆ. ಬೇರೆಯವರ ಟೀಕೆಗೆ ಸ್ವಾಗತ ಎಂದು ಖರ್ಗೆ ಹೇಳಿದರು.

ರಾಜ್ಯದಲ್ಲಿ ನಡೆಸಬೇಕೆಂದಿರುವ ಆಪರೇಷನ್‌ ಕಮಲದ ಹಿಂದೆ ಕೇಂದ್ರದ ನಾಯಕರು, ಸಚಿವರಿದ್ದಾರೆ. ಲೋಕಸಭೆ ಚುನಾವಣೆ ಹೊತ್ತಿಗೆ ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಿ ರಾಜ್ಯಪಾಲರ ಆಡಳಿತ ಜಾರಿಗೆ ತರುವ ಹುನ್ನಾರ ಅಡಗಿದೆ.ಆದರೆ, ಆಪರೇಷನ್‌ ಕಮಲ ಫಲಿಸದು, ನಮ್ಮ ಕಡೆಯಿಂದ ಒಬ್ಬರನ್ನು ಸೆಳೆದುಕೊಂಡರೆ, ಆ ಕಡೆಯಿಂದ ಹತ್ತು ಜನ ಶಾಸಕರು ಬರುವ ಸಾಧ್ಯತೆಗಳಿವೆ.
– ಮಲ್ಲಿಕಾರ್ಜುನ ಖರ್ಗೆ,
ಕಾಂಗ್ರೆಸ್‌ ಸಂಸದೀಯ ನಾಯಕ

ಟಾಪ್ ನ್ಯೂಸ್

ಕೆಂಪು ಟೊಪ್ಪಿ ಸರ್ಕಾರ ರಚಿಸಲು ಬಯಸುತ್ತಿರುವುದು ಯಾಕೆ ಗೊತ್ತಾ?ಸಮಾಜವಾದಿ ಪಕ್ಷಕ್ಕೆ ಪ್ರಧಾನಿ

24chikkodi

ವಿಧಾನ ಪರಿಷತ್ ಚುನಾವಣೆ: ಮತಗಟ್ಟೆಯೊಳಗೆ ಮೊಬೈಲ್ ನಿಷೇಧಿಸುವಂತೆ ಐವಾನ ಡಿಸೋಜಾ ಒತ್ತಾಯ

ಪರಿಷತ್ ನಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ: ಮಾಜಿ ಸಿಎಂ ಬಿಎಸ್ ವೈ

23jds

ಕಾಂಗ್ರೆಸ್, ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ಎಫೆಕ್ಟ್ ಆಗುವುದಿಲ್ಲ: ಸಚಿವ ಹಾಲಪ್ಪ ಆಚಾರ್

ಅಕ್ರಮ ಆಸ್ತಿ ಪ್ರಕರಣವನ್ನು ಮರೆಮಾಚಲು ಡಿಕೆಶಿ ಏನೇನೋ ಮಾತಾನಾಡುತ್ತಿದ್ದಾರೆ:  ಸಿ.ಟಿ. ರವಿ

ತನ್ನಿಷ್ಟದಂತೆ ಬ್ಲೌಸ್ ಯಾಕೆ ಹೊಲಿದಿಲ್ಲ ಎಂದು ಪತಿ ಬೈದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ!

ಪರಿಷತ್ ನಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲವಿಲ್ಲ: ಹೆಚ್ ಡಿಕೆ ಮಾತಿಗೆ ನೋ ಕಮೆಂಟ್ ಎಂದ ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಷತ್ ನಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ: ಮಾಜಿ ಸಿಎಂ ಬಿಎಸ್ ವೈ

ಪರಿಷತ್ ನಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ: ಮಾಜಿ ಸಿಎಂ ಬಿಎಸ್ ವೈ

ಅಕ್ರಮ ಆಸ್ತಿ ಪ್ರಕರಣವನ್ನು ಮರೆಮಾಚಲು ಡಿಕೆಶಿ ಏನೇನೋ ಮಾತಾನಾಡುತ್ತಿದ್ದಾರೆ:  ಸಿ.ಟಿ. ರವಿ

ಅಕ್ರಮ ಆಸ್ತಿ ಪ್ರಕರಣವನ್ನು ಮರೆಮಾಚಲು ಡಿಕೆಶಿ ಏನೇನೋ ಮಾತಾನಾಡುತ್ತಿದ್ದಾರೆ: ಸಿ.ಟಿ. ರವಿ

ಪರಿಷತ್ ನಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲವಿಲ್ಲ: ಹೆಚ್ ಡಿಕೆ ಮಾತಿಗೆ ನೋ ಕಮೆಂಟ್ ಎಂದ ಸಿಎಂ

ಪರಿಷತ್ ನಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲವಿಲ್ಲ: ಹೆಚ್ ಡಿಕೆ ಮಾತಿಗೆ ನೋ ಕಮೆಂಟ್ ಎಂದ ಸಿಎಂ

ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲವಿಲ್ಲ:  ಹೆಚ್ ಡಿಕೆ ಸ್ಪಷ್ಟನೆ

ಒಂದು ಮತಕ್ಕೆ 50 ಸಾವಿರ ಆಮಿಷ: ಪರಿಷತ್ ಕಣದಲ್ಲಿ ಕಾಂಚಾಣದ ಕಾರುಬಾರು ಜೋರು; ವಿಡಿಯೋ ವೈರಲ್

MUST WATCH

udayavani youtube

ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು !

udayavani youtube

JDS ಜೊತೆ BJP ಹೊಂದಾಣಿಕೆ ಮಾಡಲು ಹೊರಟಿದೆ ಎಂದಾದರೆ… ನೀವೇ ಯೋಚಿಸಿ : ಡಿಕೆಶಿ ವ್ಯಂಗ್ಯ

udayavani youtube

ಬೆಳೆಗಳಿಗೆ ಬಸವನ ಹುಳುಗಳ ಕಾಟ : ನೀರಾವರಿ ಸೌಲಭ್ಯವಿದ್ದರೂ ರೈತನಿಗಿಲ್ಲ ಮುಕ್ತಿ

udayavani youtube

ದಾಂಡೇಲಿ : ಅರಣ್ಯ ಇಲಾಖೆಯಿಂದ ಏಕಾಏಕಿ ಬ್ರಿಟಿಷ್ ರಸ್ತೆ ಬಂದ್, ವ್ಯಾಪಕ ಆಕ್ರೋಶ

udayavani youtube

‘ಮರದ ಅರಶಿನ’ದ ವಿಶೇಷತೆ !

ಹೊಸ ಸೇರ್ಪಡೆ

ಕಲಾವಿದನೊಬ್ಬನಿಂದ ಕಲೆ-ಕಲಾವಿದರ ಸೇವೆ ಶ್ಲಾಘನೀಯ: ಕಡಂದಲೆ ಸುರೇಶ್‌ ಭಂಡಾರಿ

ಕಲಾವಿದನೊಬ್ಬನಿಂದ ಕಲೆ-ಕಲಾವಿದರ ಸೇವೆ ಶ್ಲಾಘನೀಯ: ಕಡಂದಲೆ ಸುರೇಶ್‌ ಭಂಡಾರಿ

ಕೆಂಪು ಟೊಪ್ಪಿ ಸರ್ಕಾರ ರಚಿಸಲು ಬಯಸುತ್ತಿರುವುದು ಯಾಕೆ ಗೊತ್ತಾ?ಸಮಾಜವಾದಿ ಪಕ್ಷಕ್ಕೆ ಪ್ರಧಾನಿ

ಕೆಂಪು ಟೊಪ್ಪಿ ಸರ್ಕಾರ ರಚಿಸಲು ಬಯಸುತ್ತಿರುವುದು ಯಾಕೆ ಗೊತ್ತಾ?ಸಮಾಜವಾದಿ ಪಕ್ಷಕ್ಕೆ ಪ್ರಧಾನಿ

24chikkodi

ವಿಧಾನ ಪರಿಷತ್ ಚುನಾವಣೆ: ಮತಗಟ್ಟೆಯೊಳಗೆ ಮೊಬೈಲ್ ನಿಷೇಧಿಸುವಂತೆ ಐವಾನ ಡಿಸೋಜಾ ಒತ್ತಾಯ

ಪರಿಷತ್ ನಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ: ಮಾಜಿ ಸಿಎಂ ಬಿಎಸ್ ವೈ

ಪರಿಷತ್ ನಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ: ಮಾಜಿ ಸಿಎಂ ಬಿಎಸ್ ವೈ

23jds

ಕಾಂಗ್ರೆಸ್, ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ಎಫೆಕ್ಟ್ ಆಗುವುದಿಲ್ಲ: ಸಚಿವ ಹಾಲಪ್ಪ ಆಚಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.