ಅನುದಾನ ಖರ್ಚಾಗದಿದ್ದರೆ ಲ್ಯಾಪ್ಸ್‌

Team Udayavani, Nov 22, 2020, 5:06 PM IST

ಅನುದಾನ ಖರ್ಚಾಗದಿದ್ದರೆ ಲ್ಯಾಪ್ಸ್‌

ಚಿಂಚೋಳಿ: ರಾಜ್ಯ ಸರಕಾರ ಯೋಜನೆಗಳ ಅನುಷ್ಠಾನಕ್ಕಾಗಿ ನೀಡಿದ ಅನುದಾನ ಸಕಾಲದಲ್ಲಿ ಖರ್ಚು ಮಾಡದಿದ್ದರೆ ಲ್ಯಾಪ್ಸ್‌ ಆಗುತ್ತದೆ ಎಂದು ತಾ.ಪಂ ಇಒ ಅನೀಲಕುಮಾರ ರಾಠೊಡ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ತಾ.ಪಂ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಎಸ್‌ಸಿಪಿಮತ್ತು ಟಿಎಸ್‌ಪಿ ಯೋಜನೆ ಅಡಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಸಮುದಾಯಕ್ಕೆ ನೀಡಿದ ಅನುದಾನವನ್ನು ಅದೇ ಸಮುದಾಯಪ್ರಯೋಜನ ಪಡೆದುಕೊಳ್ಳುವಹಾಗೆ ಅಧಿಕಾರಿಗಳು ಶ್ರಮಿಸಬೇಕು. ಸರಕಾರ ಸಮಾಜ ಕಲ್ಯಾಣ ಇಲಾಖೆಹಾಗೂ ಇತರೆ ಇಲಾಖೆಗಳಿಗೆ ಸಾಕಷ್ಟುಯೋಜನೆಗಳ ಅಡಿಯಲ್ಲಿ ಅನುದಾನ ನೀಡುತ್ತದೆ. ಎಲ್ಲವನ್ನು ಮಾರ್ಚ್‌ ಅಂತ್ಯದೊಳಗೆ ಖರ್ಚು ಮಾಡಬೇಕು ಎಂದು ಸೂಚಿಸಿದರು.

ಜಿ.ಪಂ (ಪಿಆರ್‌ಇ) ಎಇಇ ಮಹ್ಮದ್‌ ಅಹೆಮದ್‌ ಹುಸೇನ ಮಾತನಾಡಿ,ನಮ್ಮಇಲಾಖೆಯಿಂದ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆ ಅಡಿಯಲ್ಲಿ ಒಟ್ಟು 69.20 ಲಕ್ಷ ರೂ. ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.

ಲೋಕೋಪಯೋಗಿ ಎಇಇಗುರುರಾಜ ಜೋಶಿ ಮಾತನಾಡಿ, ಭೂಯಾರ(ಕೆ), ಧುತ್ತರಗಾ, ಚಂದನಕೇರಾ, ಮರಪಳ್ಳಿ ಗ್ರಾಮಗಳ ಪರಿಶಿಷ್ಟ ಕಾಲೋನಿಗಳಲ್ಲಿ ಸಮುದಾಯ ಭವನಗಳು ಮಂಜೂರಿಯಾಗಿವೆ. ಪ್ರತಿಯೊಂದಕ್ಕೆ 12 ಲಕ್ಷ ರೂ. ಇದೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಅನೀಲಕುಮಾರ ರಾಠೊಡ ಮಾತನಾಡಿ, ಕೃಷಿ ಇಲಾಖೆ ಸೂಕ್ಷ್ಮ ಹನಿ ನೀರಾವರಿಯೋಜನೆ ಅಡಿಯಲ್ಲಿ 45 ಲಕ್ಷ ರೂ. ಅನುದಾನ ಬಂದಿದೆ. ಈ ಯೋಜನೆ ಬಗ್ಗೆ ಜನರ ಬೇಡಿಕೆ ಇರುವುದರಿಂದ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ತಾ.ಪಂ 15ನೇ ಹಣಕಾಸು ಯೋಜನೆ ಅಡಿಯಲ್ಲಿ 29 ಗ್ರಾ.ಪಂಗಳಿಗೆ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆ ಅಡಿಯಲ್ಲಿ 6.94 ಕೋಟಿ ರೂ. ಅನುದಾನ ಬಂದಿದೆ. ತಾ.ಪಂಗೆ 1.67 ಕೋಟಿ ರೂ. ಅನುದಾನಬಂದಿದೆ. ಈ ಅನುಮೋದನೆಯನ್ನು ತಾ.ಪಂ ಸಾಮಾನ್ಯ ಸಭೆಯಲ್ಲಿ ಪಡೆಯಲಾಗಿದೆ ಎಂದು ವಿವರಿಸಿದರು.

ಸಮಾಜ ಕಲ್ಯಾಣ ಇಲಾಖೆ ಪ್ರಭುಲಿಂಗ ಬುಳ್ಳ ಅನುದಾನ ಕುರಿತು ವಿವರಿಸಿದರು. ಸಿಡಿಪಿಒ ಗುರುಪ್ರಸಾದ, ಪಶು ವೈದ್ಯಾಧಿಕಾರಿ ಡಾ| ಧನರಾಜ ಬೊಮ್ಮ, ಜೆಸ್ಕಾಂ ಎಇಇ ಉಮೇಶ ಗೋಳಾ, ಎಇಇ ಗುರುರಾಜ ಜೋಶಿ, ಎಇ ರಾಜೇಂದ್ರ, ರಮೇಶ ಚವ್ಹಾಣ ಭಾಗವಹಿಸಿದ್ದರು. ರಮೇಶ ದೇಗಲಮಡಿ ವಂದಿಸಿದರು.

ಟಾಪ್ ನ್ಯೂಸ್

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.