ದಲಿತ ವಿದ್ಯಾರ್ಥಿನಿ ಅತ್ಯಾಚಾರ-ಕೊಲೆ ಖಂಡಿಸಿ ಪ್ರತಿಭಟನೆ

Team Udayavani, Dec 21, 2017, 9:51 AM IST

ಕಲಬುರಗಿ: ವಿಜಯಪುರದ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಘಟನೆ ಖಂಡಿಸಿ ಮಹಿಳಾ ಸಂಘಟನೆಗಳು ಹಾಗೂ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ದಲಿತ ವಿದ್ಯಾರ್ಥಿನಿಯನ್ನು ಕೊಂದ ಆರೋಪಿಗಳನ್ನು ಕೂಡಲೇ ಬಂಧಿಸಿ, ಮರಣದಂಡನೆ ಶಿಕ್ಷೆ ನೀಡಬೇಕು ಹಾಗೂ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಬೇಕು. ಸರ್ಕಾರ ವಿದ್ಯಾರ್ಥಿನಿಯ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು ಮತ್ತು ಕುಟುಂಬಕ್ಕೆ ಸರ್ಕಾರಿ ಉದ್ಯೋಗ ಮತ್ತು ಭೂಮಿ ಹಂಚಿಕೆ ಮಾಡುವುದರೊಂದಿಗೆ ದಾನಮ್ಮಳ ಕುಟುಂಬದ ಸಂಪೂರ್ಣ ಹೊಣೆಯನ್ನು ಸರ್ಕಾರ ಹೊರಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಡಾ.ವಿಠಲ ದೊಡ್ಮನಿ, ಮಿಲಿಂದ ಸನಗುಂದಿ, ಲಕ್ಷ್ಮೀಕಾಂತ ಹುಬಳಿ, ಹಣಮಂತ ಇಟಗಿ, ಸಂತೋಷ ಮೇಲ್ಮನಿ, ನಾಗೇಂದ್ರ ಜವಳಿ, ಮಲ್ಲಪ್ಪ ಹೊಸ್ಮನಿ ಹಾಗೂ ಎಐಎಂಎಸ್‌ಎಸ್‌ ಜಿಲ್ಲಾಧ್ಯಕ್ಷೆ ಡಾ| ಸೀಮಾ ದೇಶಪಾಂಡೆ, ಮಲ್ಲಿನಾಥ ಸಿಂಗೆ, ಎಸ್‌.ಎಂ.ಶರ್ಮಾ, ವಿ.ಜಿ.ದೇಸಾಯಿ ಸೇರಿದಂತೆ ಎಐಡಿಎಸ್‌ಒ, ಎಐಡಿವಾಯ್‌ಒ ಸಂಘಟನೆಗಳ ಕಾರ್ಯಕರ್ತರು ಈ ಸಂದರ್ಭದಲ್ಲಿದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ