ಆಲ್‌ ಇಂಡಿಯಾ ಇಮಾಮ್‌ ಕೌನ್ಸಿಲ್‌ನಿಂದ ಪ್ರತಿಭಟನೆ

Team Udayavani, May 26, 2022, 11:53 AM IST

6protest

ಅಫಜಲಪುರ: ಜ್ಞಾನವಾಪಿ ಮಸೀದಿ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ ಎಂದು ಆರೋಪಿಸಿ ಆಲ್‌ ಇಂಡಿಯಾ ಇಮಾಮ್‌ ಕೌನ್ಸಿಲ್‌ ವತಿಯಿಂದ ತಹಶೀಲ್ದಾರ್‌ ಕಚೇರಿ ಎದುರು ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಬರೆದ ಪತ್ರವನ್ನು ತಹಶೀಲ್ದಾರ್‌ ಸಂಜೀವಕುಮಾರ ದಾಸರ ಅವರಿಗೆ ನೀಡಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಆಲ್‌ ಇಂಡಿಯಾ ಇಮಾಮ್‌ ಕೌನ್ಸಿಲ್‌ ಅಧ್ಯಕ್ಷ ಮಕದೂಮ್‌ ಮುಹಿಯದ್ದೀನ್‌ ಮಾತನಾಡಿ, ಜ್ಞಾನವಾಪಿಯಲ್ಲಿ ದೊರೆತಿರುವುದು ಶಿವಲಿಂಗವಲ್ಲ ಅದು ಕಾರಂಜಿ. ಮುಸ್ಲಿಮರು ಪ್ರಾರ್ಥನೆಗೂ ಮೊದಲು ಕೈಕಾಲು ತೊಳೆದು ಕೊಳ್ಳುವ ಜಾಗವಾಗಿದೆ. ಈಗ ಅದನ್ನೇ ಶಿವಲಿಂಗ ಎಂದು ಬಿಂಬಿಸಲಾಗುತ್ತಿದೆ ಎಂದು ದೂರಿದರು.

1991ರ ಭಾರತದ ಆರಾಧನಾ ಕಾಯ್ದೆ ಪ್ರಕಾರ 1942ರಿಂದ ಯಾವ ಸ್ಥಳಗಳಲ್ಲಿ ಮಸೀದಿ, ಚರ್ಚ್‌, ದೇವಾಲಯಗಳು ಇರುತ್ತವೆಯೋ ಅವುಗಳನ್ನು ಯಥಾಸ್ಥಿತಿಯಲ್ಲಿ ಬಿಡಬೇಕು. ಅವುಗಳಿಗೆ ರಕ್ಷಣೆ ನೀಡಬೇಕು ಎಂದಿದೆ. ಆದರೆ ಕಾಯ್ದೆ ಮೀರಿ ಮುಸ್ಲಿಮರ ಪವಿತ್ರ ಸ್ಥಳಗಳಾದ ಮಸೀದಿಗಳನ್ನು ಧ್ವಂಸ ಮಾಡುವ ಹುನ್ನಾರ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ನ್ಯಾಯಾಲಯ ಕೂಡ 1991ರ ಆರಾಧನಾ ಕಾಯ್ದೆಯನ್ನು ಪರಿಶೀಲಿಸಲಿಲ್ಲ. ಕೇವಲ ಐವರು ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ ಎನ್ನುವ ಕಾರಣಕ್ಕೆ ಆ ಜಾಗ ಚಿತ್ರೀಕರಣ ಮಾಡಲು ಅನುಮತಿ ನೀಡಿದೆ. ಇದು ಸರಿಯಲ್ಲ ಎಂದು ದೂರಿದರು.

ಜೆಡಿಎಸ್‌ ತಾಲೂಕು ಅಧ್ಯಕ್ಷ ಜಮೀಲ್‌ ಗೌಂಡಿ ಮಾತನಾಡಿ, ಯಾವುದೇ ಧಾರ್ಮಿಕ ಪಂಥದ ಸ್ಥಳವನ್ನು ಇನ್ನೊಂದು ಪಂಥಕ್ಕೆ ಸೇರಿಸಬಾರದು. ಆರಾಧನಾ ಸ್ಥಳಗಳ ಸ್ವರೂಪವು ಸ್ವಾತಂತ್ರ್ಯಾ ನಂತರ ಹಾಗೆಯೇ ಮುಂದುವರಿಯಬೇಕು ಎಂದು ಕಾಯ್ದೆ ಹೇಳುತ್ತದೆ. ಆದರೆ, ಬಿಜೆಪಿ ಸರ್ಕಾರ ಮುಸ್ಲಿಂ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಮಸೀದಿಗಳ ತೆರವಿಗೆ ಕುತಂತ್ರ ನಡೆಸಿದೆ ಎಂದು ಆರೋಪಿಸಿದರು.

ಮುಖಂಡರಾದ ಮುಸಾಹಿಬ್‌ ಅಫಜಲ್‌, ಅನ್ವರ್‌ ಶೇಖ್‌, ಶಹಾಜಾನ್‌ ಜಹಾಗೀರದಾರ, ಮುಕೀತ್‌ ಅಫಜಲ್‌, ಶಬ್ಬೀರ್‌ ಅಹ್ಮದ್‌, ಖಮರುನ್‌ ಜಮಾ, ಅರಬಾಜ್‌ ಶೇಖ್‌, ಮುಪ್ತಿ ಶಬ್ಬೀರ್‌ ಪಟೇಲ್‌, ಫೈಸಲ್‌, ಅಸ್ಲಂ ಅಕ್ತರ್‌, ರಿಯಾಜ್‌ ಮೌಲಾಸಾಬ್‌ ಹಾಗೂ ಇನ್ನಿತರರು ಇದ್ದರು.

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.