ನೆರೆ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ

Team Udayavani, Jul 12, 2022, 2:51 PM IST

11flood

ಕಲಬುರಗಿ: ನೆರೆ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಮತ್ತು ಬೆಲೆ ಏರಿಕೆ ತಡೆಗಟ್ಟಬೇಕು ಎಂದು ಆಗ್ರಹಿಸಿ ಜಿಲ್ಲಾ ಜಾತ್ಯತೀತ ಜನತಾದಳ ಕಾರ್ಯಕತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.

ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಮರಾವ ಸೂರನ್‌ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಿ, ರಾಜ್ಯದಲ್ಲಿ ವಿಪರೀತ ಮಳೆಯಾಗಿದೆ. ಜನರು ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಅತಿಯಾದ ಮಳೆಯಿಂದ ಬೆಳೆ ಹಾನಿಯಾಗಿವೆ. ಮನೆಗಳು ಕುಸಿದು ಬಿದ್ದಿವೆ. ಜಾನುವಾರುಗಳು, ಜನರು ಸಂಕಷ್ಟ ಎದುರಿಸುವಂತಾಗಿದೆ.

ರಾಜ್ಯದಲ್ಲಿ ಇದುವರೆಗೆ ಮನೆಗಳ ಕುಸಿತದಿಂದ 13 ಜನ ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ 40 ಮನೆಗಳು ಕುಸಿದು ಬಿದ್ದಿವೆ. ಮನೆ ಕುಸಿತದಿಂದ ಹಾನಿಯಾದ ಕುಟುಂಬಕ್ಕೆ 10 ಸಾವಿರ ಪರಿಹಾರ ಘೋಷಣೆ ಮಾಡಿದ್ದು, ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದರು.

ಇನ್ನು ಸಾವನ್ನಪ್ಪಿದವರ ಬಗ್ಗೆ ಸರ್ಕಾರ ಮಾತೇ ಆಡುತ್ತಿಲ್ಲ. ರಾಜ್ಯದಲ್ಲಿ ಸರ್ಕಾರ ಇದೆಯೋ, ಇಲ್ಲವೋ ಎಂಬ ಅನುಮಾನ ಕಾಡುತ್ತಿದೆ. ಇದುವರೆಗೆ ಸಚಿವರು, ಸಂಸದರು ಮತ್ತು ಶಾಸಕರು ನೆರೆ ಸಂತ್ರಸ್ತರನ್ನು ಭೇಟಿಯಾಗಿ ಅವರ ಸಮಸ್ಯೆ ಆಲಿಸಿಲ್ಲ. ಮಳೆಯಿಂದ ಹಾನಿಯಾದ ಕುಟುಂಬಕ್ಕೆ 50 ಸಾವಿರ, ಬೆಳೆ ಹಾನಿಯಾದ ರೈತರಿಗೆ ಪ್ರತಿ ಎಕರೆಗೆ 50 ಸಾವಿರ,ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಬೇಕು, ದಿನದಿಂದ ದಿನಕ್ಕೆ ಬೆಲೆ ಏರಿಕೆಯಾಗುತ್ತಿರುವುದನ್ನು ತಡೆಗಟ್ಟಬೇಕು ಎಂದು ಜಿಲ್ಲಾಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿಪತ್ರದಲ್ಲಿ ಆಗ್ರಹಿಸಲಾಯಿತು.

ಪಕ್ಷದ ಮುಖಂಡರಾದ ಶ್ಯಾಮರಾವ್‌ ಸೂರನ್‌, ಬಸವರಾಜ ಬಿರಬಿಟ್ಟಿ, ಮನೋಹರ ಪೋದ್ದಾರ, ಅಲಿಮ ಇನಾಮದಾರ, ಶಿವಾನಂದ ದ್ಯಾಮಗೊಂಡ, , ಶಂಕರ ಕಟ್ಟಿಸಂಗಾವಿ, ಶ್ರೀನಿವಾಸ ಜಮಾದಾರ, ಮಲ್ಲಿಕಾರ್ಜುನ ಸಂಗಾಣಿ, ಬಸವರಾಜ ಸಿದ್ರಾಮಗೋಳ ಏಸು ಮಿತ್ರ, ಶರಣು ಹೊಸಮನಿ, ಸುನಿತಾ ಕೋರವಾರ, ಮಹಾದೇವ ಕೆಸರಟಗಿ, ಸಿದ್ರಾಮಪ್ಪ ಹೊದಲೂರ, ಅನಿಲ ಕಡಗಂಚಿ, ಆನಂದಕುಮಾರ ಬುಗಡಿ, ರಘು ಸುಕೆ, ಇತರರು ಇದ್ದರು.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.