ಗ್ರಾಮಗಳಿಗೆ ಬಸ್‌ ಸೌಲಭ್ಯ ಕಲ್ಪಿಸಿ: ಪ್ರಿಯಾಂಕ್‌

Team Udayavani, Jun 24, 2022, 5:22 PM IST

16bus

ಚಿತ್ತಾಪುರ: ತಾಲೂಕಿನ ಎಲ್ಲ ಗ್ರಾಮಗಳಿಗೆ ಬಸ್‌ ಸೌಲಭ್ಯ ಕಲ್ಪಿಸುವ ವ್ಯವಸ್ಥೆ ಮಾಡಬೇಕು ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪಟ್ಟಣದ ಶಾಸಕರ ಕಚೇರಿಯಲ್ಲಿ ಎನ್‌ಈಕೆಆರ್‌ ಟಿಸಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ 28ರೂಟ್‌ಗಳಲ್ಲಿ 90 ಗ್ರಾಮಗಳಿಗೆ ಸಮಯಕ್ಕೆ ಅನುಸಾರವಾಗಿ ಸಮರ್ಪಕ ಸಾರಿಗೆ ಬಸ್‌ ವ್ಯವಸ್ಥೆ ಕಲ್ಪಿಸಬೇಕು ಎಂದರು.

ಕೆಲ ಗ್ರಾಮಗಳಿಗೆ ಸರಿಯಾದ ಸಮಯಕ್ಕೆ ಬಸ್‌ಗಳು ಹೋಗುತ್ತಿಲ್ಲ. ಸಾತನೂರ ಸೇರಿದಂತೆ ಕೆಲ ಗ್ರಾಮಗಳಿಗೆ ಬಸ್‌ಗಳು ಹೋಗದೇ ಕ್ರಾಸ್‌ವರೆಗೆ ಹೋಗಿ ಗ್ರಾಮದೊಳಗೆ ಬರುತ್ತಿಲ್ಲ ಎನ್ನುವ ದೂರುಗಳಿವೆ. ಆದ್ದರಿಂದ ಗ್ರಾಮದೊಳಗೆ ಬಸ್‌ಗಳು ಹೋಗುವ ವ್ಯವಸ್ಥೆ ಮಾಡಬೇಕು. ಸಂಜೆ 5ಗಂಟೆಯಿಂದ 6:30ರ ವರೆಗೆ ಚಿತ್ತಾಪುರ-ಕಲಬುರಗಿ, ಕಲಬುರಗಿ-ಚಿತ್ತಾಪುರ ಬಸ್‌ ಸಂಚಾರ ಕೊರತೆಯಿದೆ. ಕೂಡಲೇ ಬಸ್‌ ಸಂಚಾರ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.

ನನೆಗುದಿಗೆ ಬಿದ್ದಿರುವ ಪಟ್ಟಣದ ಬಸ್‌ ನಿಲ್ದಾಣದ ಕಾಮಗಾರಿ ಶೀಘ್ರವೇ ಪ್ರಾರಂಭಿಸಬೇಕು. ಪಟ್ಟಣದ ಹೊರ ವಲಯದ ಬಳಿ ರಾಮಚೌಕ್‌ ಹತ್ತಿರ ಬಸ್‌ ನಿಲ್ದಾಣಕ್ಕಾಗಿ ಈಗಾಗಲೇ ಭೂಮಿ ವಶಪಡಿಸಿಕೊಂಡಿದ್ದೇವೆ. ಬಸ್‌ ನಿಲ್ದಾಣದ ಪಿಲ್ಲರ್‌ ಕಾಮಗಾರಿ ಮುಗಿದಿದೆ. ಯಾವುದೇ ಕಾರಣಕ್ಕೂ ಬಸ್‌ ನಿಲ್ದಾಣದ ಕಾಮಗಾರಿ ನಿಲ್ಲಬಾರದು ಎಂದರು.

ಕಲಬುರಗಿ-ಯಾದಗಿರಿಯಿಂದ ಸಂಚರಿಸುವ ಬಸ್‌ ಗಳನ್ನು ಕಡ್ಡಾಯವಾಗಿ ವಾಡಿ ಪಟ್ಟಣದ ಮಾರ್ಗವಾಗಿ ಸಂಚರಿಸುವಂತೆ ಕ್ರಮ ಕೈಗೊಳ್ಳಬೇಕು. ವಾಡಿ ಪಟ್ಟಣಕ್ಕೆ ಬಸ್‌ಗಳು ಹೊಗದೇ ಬಳಿರಾಮ ಚೌಕ್‌ ಮಾರ್ಗವಾಗಿ ಸಂಚರಿಸುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿವೆ. ಕಡ್ಡಾಯವಾಗಿ ಎಲ್ಲ ಬಸ್‌ಗಳು ವಾಡಿ ಪಟ್ಟಣದ ಮೂಲಕ ಸಂಚರಿಸುವಂತೆ ಕ್ರಮ ಕೈಗೊಳ್ಳಬೇಕೆಂದು ತಾಕೀತು ಮಾಡಿದರು. ಹೆಬ್ಟಾಳ ಬಸ್‌ ನಿಲ್ದಾಣ ಕೂಡಲೇ ನಿರ್ಮಿಸಬೇಕು ಎಂದರು.

ಕಲಬುರಗಿ ವಿಭಾಗೀಯ ನಿಯಂತ್ರಣ ಅಧಿಕಾರಿ ಸುನೀಲಕುಮಾರ ಚಂದರಗಿ, ಸಾರಿಗೆ ಇಲಾಖೆ ವಿಭಾಗೀಯ ಸಂಚಲನ ಅಧಿಕಾರಿ ಈಶ್ವರಪ್ಪ ಹೊಸಮನಿ, ಚಿತ್ತಾಪುರ ಘಟಕದ ವ್ಯವಸ್ಥಾಪಕ ಫಾರುಖ್‌ ಹುಸೇನ್‌, ಕಾಳಗಿ ಘಟಕದ ವ್ಯವಸ್ಥಾಪಕ ಯಶವಂತ ಯಾತನೂರ ಇದ್ದರು.

ಟಾಪ್ ನ್ಯೂಸ್

3arrest

ಮೂಡಿಗೆರೆ: ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ : ಆರು ಮಂದಿ ಬಂಧನ, ನಗದು ವಶ

ಈಜಲು ಹೋಗಿ ನಿರುಪಾಲಾದ ಎಂಜಿನಿಯರ್: ಎರಡನೇ ದಿನಕ್ಕೆ ಮುಂದುವರೆದ ಶೋಧ ಕಾರ್ಯ

ಈಜಲು ಹೋಗಿ ನಿರುಪಾಲಾದ ಇಂಜಿನಿಯರ್ : ಎರಡನೇ ದಿನಕ್ಕೆ ಮುಂದುವರೆದ ಶೋಧ ಕಾರ್ಯ

ರಾಯಚೂರನ್ನು ತೆಲಂಗಾಣದೊಳಕ್ಕೆ ವಿಲೀನಗೊಳಿಸಲು ಜನರು ಒತ್ತಾಯಿಸುತ್ತಿದ್ದಾರೆ: ಸಿಎಂ ಕೆಸಿಆರ್

ರಾಯಚೂರನ್ನು ತೆಲಂಗಾಣದೊಳಕ್ಕೆ ವಿಲೀನಗೊಳಿಸಲು ಜನರು ಒತ್ತಾಯಿಸುತ್ತಿದ್ದಾರೆ: ಸಿಎಂ ಕೆಸಿಆರ್

ಉಡುಪಿಯಲ್ಲಿ ನಾಳೆ ಕೃಷ್ಣಾಷ್ಟಮಿ, ನಾಡಿದ್ದು ವಿಟ್ಲ ಪಿಂಡಿ

ಉಡುಪಿಯಲ್ಲಿ ನಾಳೆ ಕೃಷ್ಣಾಷ್ಟಮಿ, ನಾಡಿದ್ದು ವಿಟ್ಲ ಪಿಂಡಿ

4CONGRESS

ಕಾಂಗ್ರೆಸ್ ನಾಯಕರ ಹೇಳಿಕೆ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ: ವಿಡಿಯೋ ವೈರಲ್‌

thumb military

ಮಡಿಕೇರಿ; ದೇಶ ಕಾಯುವವನ ಹೆತ್ತವರಿಗೇ ರಕ್ಷಣೆ ಇಲ್ಲ!

ಬಿಜೆಪಿಯಲ್ಲಿ ಮತ್ತೆ ಬಿಎಸ್‌ವೈ ಜಪ; ರಾಜಕಾರಣದ ಲೆಕ್ಕಾಚಾರ ಬದಲಾಗುವ ಸಾಧ್ಯತೆ

ಬಿಜೆಪಿಯಲ್ಲಿ ಮತ್ತೆ ಬಿಎಸ್‌ವೈ ಜಪ; ರಾಜಕಾರಣದ ಲೆಕ್ಕಾಚಾರ ಬದಲಾಗುವ ಸಾಧ್ಯತೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ತಾಪ ತಾಳದೆ ಕುಸಿದು ಬಿದ್ದ ವಿದ್ಯಾರ್ಥಿಗಳು: ಉತ್ತಮ ಶಿಕ್ಷಣ ಊಟಕ್ಕಾಗಿ ಮಕ್ಕಳ ಆಗ್ರಹ

ಬಿಸಿಲ ತಾಪ ತಾಳದೆ ಕುಸಿದು ಬಿದ್ದ ವಿದ್ಯಾರ್ಥಿಗಳು: ಉತ್ತಮ ಶಿಕ್ಷಣ ಊಟಕ್ಕಾಗಿ ಮಕ್ಕಳ ಆಗ್ರಹ

9

ಮಾನವೀಯತೆಯೇ ನಿಜ ಭಕ್ತಿ: ಪಾಳಾ ಶ್ರೀ

8math

ರಾಘವೇಂದ್ರ ಸ್ವಾಮಿ ಮಠದಲ್ಲಿ ಗಣ್ಯರ ಸನ್ಮಾನ

7temple

ದಂಡಗುಂಡ ದೇಗುಲ ನಿರ್ಮಾಣಕ್ಕೆ 4.60 ಕೋಟಿ

6arrest

ನಿವೃತ್ತನ ಮೇಲೆ ಹಲ್ಲೆಗೈದ ಅಧಿಕಾರಿ ಜೈಲಿಗೆ

MUST WATCH

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಆಳವಾದ ಕಂದಕಕ್ಕೆ ಬಸ್ ಉರುಳಿ ಬಿದ್ದು, ಐಟಿಬಿಪಿಯ 6 ಯೋಧರು ಸಾವು

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

ಹೊಸ ಸೇರ್ಪಡೆ

3arrest

ಮೂಡಿಗೆರೆ: ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ : ಆರು ಮಂದಿ ಬಂಧನ, ನಗದು ವಶ

ಈಜಲು ಹೋಗಿ ನಿರುಪಾಲಾದ ಎಂಜಿನಿಯರ್: ಎರಡನೇ ದಿನಕ್ಕೆ ಮುಂದುವರೆದ ಶೋಧ ಕಾರ್ಯ

ಈಜಲು ಹೋಗಿ ನಿರುಪಾಲಾದ ಇಂಜಿನಿಯರ್ : ಎರಡನೇ ದಿನಕ್ಕೆ ಮುಂದುವರೆದ ಶೋಧ ಕಾರ್ಯ

ರಾಯಚೂರನ್ನು ತೆಲಂಗಾಣದೊಳಕ್ಕೆ ವಿಲೀನಗೊಳಿಸಲು ಜನರು ಒತ್ತಾಯಿಸುತ್ತಿದ್ದಾರೆ: ಸಿಎಂ ಕೆಸಿಆರ್

ರಾಯಚೂರನ್ನು ತೆಲಂಗಾಣದೊಳಕ್ಕೆ ವಿಲೀನಗೊಳಿಸಲು ಜನರು ಒತ್ತಾಯಿಸುತ್ತಿದ್ದಾರೆ: ಸಿಎಂ ಕೆಸಿಆರ್

ಉಡುಪಿಯಲ್ಲಿ ನಾಳೆ ಕೃಷ್ಣಾಷ್ಟಮಿ, ನಾಡಿದ್ದು ವಿಟ್ಲ ಪಿಂಡಿ

ಉಡುಪಿಯಲ್ಲಿ ನಾಳೆ ಕೃಷ್ಣಾಷ್ಟಮಿ, ನಾಡಿದ್ದು ವಿಟ್ಲ ಪಿಂಡಿ

4CONGRESS

ಕಾಂಗ್ರೆಸ್ ನಾಯಕರ ಹೇಳಿಕೆ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ: ವಿಡಿಯೋ ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.