ಪುನೀತ್‌ ಮತ್ತೆ ಕನ್ನಡ ನಾಡಲ್ಲಿ ಹುಟ್ಟಿ ಬರಲಿ ಎಂದು ದತ್ತನ ಹುಂಡಿಯಲ್ಲಿ ಚೀಟಿ ಹಾಕಿದ ಭಕ್ತ

ಹುಂಡಿ ಹಣ ಎಣಿಕೆ ಕಾರ್ಯ: 67 ಲಕ್ಷ ನಗದು-10 ಗ್ರಾಂ ಬಂಗಾರ

Team Udayavani, Mar 27, 2022, 10:50 AM IST

3counting

ಅಫಜಲಪುರ: ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳವಾಗಿರುವ ಸುಕ್ಷೇತ್ರ ದೇವಲ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದಲ್ಲಿ ಭಕ್ತರು ಅರ್ಪಿಸಿರುವ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು 67 ಲಕ್ಷ 43 ಸಾವಿರದ 900 ರೂ. ನಗದು, 10 ಗ್ರಾಂ ಬಂಗಾರ, 358 ಗ್ರಾಂ ಬೆಳ್ಳಿ ಆಭರಣ ಹಾಗೂ ಗಟ್ಟಿ ಕಾಣಿಕೆಯಾಗಿ ಬಂದಿದೆ ಎಂದು ತಹಶೀಲ್ದಾರ ಸಂಜೀವಕುಮಾರ ದಾಸರ್‌, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ನಾಮದೇವ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಹುಂಡಿ ಹಣ ಎಣಿಕೆ ಕಾರ್ಯದಲ್ಲಿ ಸ್ಥಳಿಯ ಎಸ್‌ಬಿಐ ಸಿಬ್ಬಂದಿ, ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ, ದೇವಸ್ಥಾನದ ಸಿಬ್ಬಂದಿ, ಪೊಲೀಸ್‌ ಇಲಾಖೆ ಸಿಬ್ಬಂದಿ ಸಹಕಾರ ನೀಡಿದ್ದಾರೆಂದು ತಿಳಿಸಿದ್ದಾರೆ.

ಇದನ್ನೂ ಓದಿ:ಬ್ಯಾಡರಹಳ್ಳಿ: ಪತ್ನಿ ಕೊಂದು ಹೃದಯಾಘಾತ ಸಾವು ಎಂದ ಪತಿ

ಪುನೀತ್‌ ಪುನರ್ಜನ್ಮಕ್ಕೆ ಚೀಟಿ ಹಾಕಿದ ಭಕ್ತ

ಚಿತ್ರನಟ ದಿ. ಪುನೀತ್‌ ರಾಜಕುಮಾರ ಮತ್ತೆ ಕನ್ನಡ ನಾಡಿನಲ್ಲಿ ಜನ್ಮವೆತ್ತಲಿ ಎಂದು ಹರಕೆ ಚೀಟಿ ಬರೆದು ಹುಂಡಿಗೆ ಹಾಕಿದ್ದು ವಿಶೇಷವಾಗಿತ್ತು. ಹುಂಡಿ ಹಣ ಎಣಿಕೆ ಮಾಡುತ್ತಿದ್ದ ಸಿಬ್ಬಂದಿ ಈ ಚೀಟಿ ಬರುತ್ತಿದ್ದಂತೆ ಭಾವುಕರಾಗಿ ದಿ. ಪುನೀತ್‌ ರಾಜಕುಮಾರ ಮತ್ತೆ ಹುಟ್ಟಿ ಬರಲಿ ಎಂದು ದತ್ತ ಮಹಾರಾಜರಲ್ಲಿ ಬೇಡಿಕೊಂಡರು.

ಜಿಲ್ಲಾಧಿಕಾರಿ ಕಚೇರಿ ಶಿರಸ್ತೇದಾರ ರಾದ ಶಿವಕಾಂತಮ್ಮ, ದೇವಮ್ಮ, ಗೀತಾ, ಗೌತಮ ಗಾಯಕವಾಡ, ಕಂದಾಯ ನಿರೀಕ್ಷಕರಾದ ಬಸವರಾಜ ಸಿಂಪಿ, ಸಂಜೀವಕುಮಾರ ಅತನುರ, ಚಂದ್ರಶೇಖರ, ದೇವಸ್ಥಾನದ ಸಿಬ್ಬಂದಿಗಳಾದ ದತ್ತು ನಿಂಬರ್ಗಿ, ರಮೇಶ, ಸತೀಶ, ಮಡಿವಾಳ, ಧನರಾಜ ಮತ್ತಿತರರು ಇದ್ದರು. ದೇವಲ ಗಾಣಗಾಪುರ ಠಾಣೆ ಪೊಲೀಸರು ಸೂಕ್ತ ಬಂದೋಬಸ್ತ್ ಒದಗಿಸಿದ್ದರು.

ಟಾಪ್ ನ್ಯೂಸ್

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.