Udayavni Special

ಮೆಡಿಕಲ್‌ ಶಾಪ್‌ ಸೇರ್ತಿವೆ ರೆಮ್‌ ಡೆಸಿವಿಯರ್‌


Team Udayavani, May 3, 2021, 3:18 PM IST

ಜನಹಗ್ದಸ಻

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಸಂಕಷ್ಟದ ನಡುವೆಯೂ ರೆಮ್‌ಡೆಸಿವಿಯರ್‌ ಇಂಜೆಕ್ಷನ್‌ಗಳು ವ್ಯಾಪಕವಾಗಿ ದುರುಪಯೋಗವಾಗುತ್ತಿವೆ. ಜನಪ್ರತಿನಿಧಿಗಳಿಂದಲೇ ಕಾಳ ಸಂತೆಗೆ ಮಾರಾಟ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಗಂಭೀರ ಆರೋಪ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕಿತರಿಗೆ ರೆಮ್‌ಡೆಸಿವಿಯರ್‌ ಇಂಜೆಕ್ಷನ್‌ ಅಭಾವ ಎನ್ನುವ ಕಾರಣಕ್ಕೆ ಬೆಂಗಳೂರಿನಿಂದ ತರಿಸಿಕೊಳ್ಳಲಾಗುತ್ತಿದೆ. ಆದರೆ, ಈ ಇಂಜೆಕ್ಷನ್‌ಗಳು ಕೆಲ ಜನಪ್ರತಿನಿಧಿಗಳ ಮೆಡಿಕಲ್‌ ಶಾಪ್‌ ಗಳ ಪಾಲಾಗುತ್ತಿವೆ. ಅವುಗಳನ್ನೇ ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ. ಜನರಿಗೆ ಕಡಿಮೆ ದರದಲ್ಲಿ ಇಂಜೆಕ್ಷನ್‌ ಕಲ್ಪಿಸುವುದನ್ನು ಬಿಟ್ಟು ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಯಾವ ನ್ಯಾಯ? ಮನುಷ್ಯತ್ವವೇ ಇಲ್ಲದವರು ಜನಪ್ರತಿನಿಧಿಯಾಗಲು ಅರ್ಹರೇ ಅಲ್ಲ ಎಂದು ವಾಗ್ಧಾಳಿ ನಡೆಸಿದರು.

ಬೆಂಗಳೂರಿನಿಂದ ಜಿಲ್ಲೆಗೆ ಅಗತ್ಯವಾದಷ್ಟು ಇಂಜೆಕ್ಷನ್‌ ಪೂರೈಕೆ ಆಗುತ್ತಿದ್ದರೂ, ಇನ್ನೂ ಕೊರತೆ ಯಾಕೆ ಉದ್ಭವವಾಗುತ್ತಿದೆ. ಇಂಜೆಕ್ಷನ್‌ಗಳು ಯಾರ ಮೆಡಿಕಲ್‌, ಯಾವ ಔಷಧ ವಿತರಕರ ಅಂಗಡಿಗೆ ಸೇರುತ್ತಿವೆ ಎನ್ನುವುದನ್ನು ಜಿಲ್ಲಾಧಿಕಾರಿ ಹಾಗೂ ಔಷಧ ಸಹಾಯಕ ನಿಯಂತ್ರಕರು, ರೆಮ್‌ಡೆಸಿವಿಯರ್‌ ಉಸ್ತುವಾರಿ ವಹಿಸಿಕೊಂಡಿರುವ ಜೆಸ್ಕಾಂ ಎಂಡಿ ರಾಹುಲ್‌ ಪಾಂಡ್ವೆ ಜನರಿಗೆ ತಿಳಿಸಬೇಕೆಂದು ಆಗ್ರಹಿಸಿದರು. ಜಿಲ್ಲೆಯ ಪೂರೈಕೆ ಆಗುತ್ತಿರುವ ರೆಮ್‌ಡೆಸಿವಿಯರ್‌ ಇಂಜೆಕ್ಷನ್‌ ಗಳ ನಿಖರ ಮಾಹಿತಿಯನ್ನು ಜಿಲ್ಲಾಡಳಿತ ಒದಗಿಸಬೇಕು. ಖಾಸಗಿ ಆಸ್ಪತ್ರೆಯಲ್ಲಿನ ಕೊರೊನಾ ಸೋಂಕಿತರ ಹೆಸರಿನಲ್ಲಿ ಯಾವ ಆಸ್ಪತ್ರೆಗೆ ಎಷ್ಟೊಂದು ವಯಲ್ಸ್‌ಗಳನ್ನು ವಿತರಣೆ ಮಾಡಲಾಗುತ್ತಿದೆ.

ಬಳಕೆಯಾಗಿರುವ ಇಂಜೆಕ್ಷನ್‌ಗಳ ವಿವರ ಮತ್ತು ಆಸ್ಪತ್ರೆಗಳಲ್ಲಿ ಲಭ್ಯವಿರುವ ಐಸಿಯು ಬೆಡ್‌, ಔಷಧಿಗಳು ಮಾಹಿತಿಯನ್ವಯ ಆಸ್ಪತ್ರೆಯ ಸೂಚನಾ ಫಲಕದಲ್ಲಿ ಬಹಿರಂಗವಾಗಿ ಪ್ರಕಟಿಸಬೇಕೆಂದು ಒತ್ತಾಯಿಸಿದರು. ಭೇಟಿಗೆ ಸಮಯ ನೀಡದ ಸುಧಾಕರ: ಶುಕ್ರವಾರ ರಾತ್ರಿಯೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ ಜಿಲ್ಲೆಗೆ ಬಂದಿದ್ದರು. ಶನಿವಾರ ಭೇಟಿಯಾಗಲು ಸಮಯ ನೀಡುವಂತೆ ದೂರವಾಣಿ ಕರೆ ಮಾಡಿದ್ದೆ. ಆದರೆ, ಸಮಯ ಸಾಕಾಗಲ್ಲ. ಮರಳಿ ಹೋಗಬೇಕಿದೆ ಎಂಬ ಸಬೂಬು ಹೇಳಿ ಭೇಟಿಗೆ ಸಮಯವೇ ನೀಡಲಿಲ್ಲ ಎಂದು ಡಾ| ಶರಣಪ್ರಕಾಶ ಆಕ್ರೋಶ ವ್ಯಕ್ತಪಡಿಸಿದರು.

ನಾನು ವೈದ್ಯಕೀಯ ಶಿಕ್ಷಣ ಸಚಿವನಾಗಿ ಐದು ವರ್ಷ ಸೇವೆ ಸಲ್ಲಿದ್ದೇನೆ. ಕೊರೊನಾ ಕುರಿತು ಚರ್ಚೆ ನಡೆಸಿ, ನಿಯಂತ್ರಣಕ್ಕೆ ಕೆಲವೊಂದು ಸಲಹೆ ನೀಡಬೇಕು ಎಂದುಕೊಂಡಿದ್ದೆ. ಆದರೆ, ಭೇಟಿಗೆ ಸಮಯವೇ ನೀಡದಂತೆ ಸಚಿವರಿಂದ ಏನು ನಿರೀಕ್ಷೆ ಮಾಡಲು ಸಾಧ್ಯ? ಎಲ್ಲ ಸಚಿವರು ಯಾವುದರಲ್ಲಿ ತಮಗೆ ಲಾಭ ಎಷ್ಟು ಸಿಗುತ್ತದೆ ಎಂದು ನೋಡುವವರೇ ಆಗಿದ್ದಾರೆ ಎಂದು ಕಿಡಿಕಾರಿದರು.

ಟಾಪ್ ನ್ಯೂಸ್

Teenage Cell Phone Addiction: Are You Worried About Your Child?

ನಿಮ್ಮ ಮಕ್ಕಳು ಫೋನ್ ಚಟಕ್ಕೆ ಒಳಗಾಗಿದ್ದಾರೆ ಎಂದು ಹೇಗೆ ತಿಳಿಯಬಹುದು..? ಇಲ್ಲಿದೆ ಮಾಹಿತಿ

asfgnbvcxsdfg

ನೇಣು ಬಿಗಿದುಕೊಂಡು ಕೋವಿಡ್ ಸೋಂಕಿತ ಆತ್ಮಹತ್ಯೆ

covid Task Force Committee Meeting

ಮೂಡುಬಿದಿರೆ: ಕೋವಿಡ್ ಟಾಸ್ಕ್ ಫೊರ್ಸ್ ಸಮಿತಿ ಸಭೆ

ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

Parul Yadav Positive Talk

ಪಾರುಲ್‌ ಯಾದವ್‌ ಪಾಸಿಟಿವ್‌ ಟಾಕ್‌

m

ಕೋವಿಡ್ ರೋಗಿಯ ಮೇಲೆ ಅತ್ಯಾಚಾರ-ಸಂತ್ರಸ್ತೆ ಸಾವು : ತಿಂಗಳ ನಂತರ ಪ್ರಕರಣ ಬೆಳಕಿಗೆ

ಒಂದೇ ಕುಟುಂಬದ 11 ಮಂದಿ ಮನೆಯಲ್ಲೇ ಇದ್ದು ಕೋವಿಡ್ -19 ಗೆದ್ದರು!

ಒಂದೇ ಕುಟುಂಬದ 11 ಮಂದಿ ಮನೆಯಲ್ಲೇ ಇದ್ದು ಕೋವಿಡ್ -19 ಗೆದ್ದರು!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪತಿ – ಮಗನಿಗೆ ಕೋವಿಡ್ ಪಾಸಿಟಿವ್ : ಮನನೊಂದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

ಪತಿ – ಮಗನಿಗೆ ಕೋವಿಡ್ ಪಾಸಿಟಿವ್ : ಮನನೊಂದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ್ ಕೊವಿಡ್ ಗೆ ಬಲಿ

ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ್ ಕೋವಿಡ್ ಗೆ ಬಲಿ

ಶಹಾಬಾದ್ ಇಎಸ್ ಐ ಆಸ್ಪತ್ರೆ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ: ಮುರುಗೇಶ್ ನಿರಾಣಿ

ಶಹಾಬಾದ್ ಇಎಸ್ ಐ ಆಸ್ಪತ್ರೆ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ: ಮುರುಗೇಶ್ ನಿರಾಣಿ

9-8

ಕಾಂಗ್ರೆಸ್‌ನಿಂದ ಉಚಿತ ಆಂಬ್ಯುಲೆನ್ಸ್‌ ಸೇವೆ

9-7

ಜಿಲ್ಲೆಗೆ 250 ಆಕ್ಸಿಜನ್‌ ಬೆಡ್‌ ಆಸ್ಪತ್ರೆ ಮಂಜೂರು

MUST WATCH

udayavani youtube

ರಾಬರ್ಟ್ ಚಿತ್ರ Tonic ಆಯ್ತು

udayavani youtube

ತನ್ನ ಮದುವೆಗೆ ತಾನೇ ಬ್ಯಾಂಡ್ ಬಾರಿಸಿದ ಮದುಮಗ

udayavani youtube

ಸರ್ವಾಧಿಕಾರಿ ಧೋರಣೆಗೆ ಆಕ್ರೋಶ : ಉನ್ನಾವ್ನಲ್ಲಿ ವೈದ್ಯರಿಂದ ಸಾಮೂಹಿಕ ರಾಜೀನಾಮೆ

udayavani youtube

ಬೆಂಗಳೂರು: ಮನೆ ಬಾಗಿಲಿಗೆ ಬರಲಿದೆ ಆಕ್ಸಿಜನ್‌ ಬಸ್‌

udayavani youtube

18 ರಿಂದ 44 ವರ್ಷ ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ

ಹೊಸ ಸೇರ್ಪಡೆ

asfgnbvcxsdfg

ನೇಣು ಬಿಗಿದುಕೊಂಡು ಕೋವಿಡ್ ಸೋಂಕಿತ ಆತ್ಮಹತ್ಯೆ

Teenage Cell Phone Addiction: Are You Worried About Your Child?

ನಿಮ್ಮ ಮಕ್ಕಳು ಫೋನ್ ಚಟಕ್ಕೆ ಒಳಗಾಗಿದ್ದಾರೆ ಎಂದು ಹೇಗೆ ತಿಳಿಯಬಹುದು..? ಇಲ್ಲಿದೆ ಮಾಹಿತಿ

Berkeley Mass Teaser

ಬರ್ಕ್ಲಿ ಮಾಸ್‌ ಟೀಸರ್‌

covid Task Force Committee Meeting

ಮೂಡುಬಿದಿರೆ: ಕೋವಿಡ್ ಟಾಸ್ಕ್ ಫೊರ್ಸ್ ಸಮಿತಿ ಸಭೆ

The only hope is light

ಭರವಸೆಯೊಂದೇ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.