ಶೆಡ್‌ ನಿರ್ಮಿಸಿ ಪ್ರಾಣ ರಕ್ಷಿಸಲು ಆಯುಕ್ತರಲ್ಲಿ ಮನವಿ

Team Udayavani, Oct 31, 2021, 9:23 AM IST

1shed

ಚಿಂಚೋಳಿ: ಕಳೆದ ಆರು ವರ್ಷದಿಂದ ಮೇಲಿಂದ ಮೇಲೆ ಭೂಮಿ ಕಂಪಿಸುತ್ತಿರುವುದರಿಂದ ನಾವೆಲ್ಲ ಭಯಗೊಂಡಿದ್ದು, ಸರ್ಕಾರದಿಂದ ಮನೆ ಎದುರು ಶೆಡ್‌ಗಳನ್ನು ನಿರ್ಮಿಸಿಕೊಟ್ಟರೆ ಪ್ರಾಣ ರಕ್ಷಣೆಗೆ ಅನುಕೂಲವಾಗುತ್ತದೆ ಎಂದು ಕಲಬುರಗಿ ಪ್ರಾದೇಶಿಕ ಆಯುಕ್ತ ಡಾ| ಎನ್‌.ವಿ. ಪ್ರಸಾದ ಎದುರು ಗಡಿಕೇಶ್ವಾರ ಗ್ರಾಮಸ್ಥರು ಅಳಲು ತೋಡಿಕೊಂಡರು.

ಶನಿವಾರ ಅವರು ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರಾದ ರೇವಣಸಿದ್ಧಪ್ಪ ಅಣಕಲ್‌, ಪ್ರಕಾಶ ರಂಗನೂರ, ವಿರೇಶ ರೆಮ್ಮಣಿ, ನಾಗರಾಜ ಚಕ್ರವರ್ತಿ ಮಾತನಾಡಿ, ಗಡಿಕೇಶ್ವಾರ ಗ್ರಾಮದಲ್ಲಿ ಕಳೆದ ಆರು ವರ್ಷಗಳಿಂದ ಭೂಮಿ ಕಂಪಿಸುತ್ತಿದೆ. ಇದರಿಂದ ಅನೇಕ ಮನೆಗಳು ಬಿರುಕುಬಿಟ್ಟಿವೆ. ಕೆಲವರ ಮನೆಗಳು ಬಿದ್ದಿವೆ. ಇನ್ನು ಕೆಲವರು ಗ್ರಾಮವನ್ನೇ ತೊರೆದಿದ್ದಾರೆ ಎಂದು ಹೇಳಿದರು.

ಕೆರೋಳಿ, ಬೆನಕನಳ್ಳಿ, ಕೊರವಿ, ಹಲಚೇರಾ, ತೇಗಲತಿಪ್ಪಿ, ಹೊಸಳ್ಳಿ, ರಾಮನಗರ ತಾಂಡಾ, ಕುಪನೂರ, ಬಂಟನಳ್ಳಿ, ರುದನೂರ, ರಾಯಕೋಡ, ಚಿಂತಪಳ್ಳಿ, ಭೂತಪುರ ಗ್ರಾಮಗಳಲ್ಲಿ ಅನೇಕ ಸಲ ಭಾರಿ ಶಬ್ದ ಕೇಳಿಬಂದಿದೆ. ಆದ್ದರಿಂದ ಕೂಡಲೇ ಈ ಗ್ರಾಮಗಳಲ್ಲಿ ಮನೆ ಎದುರು ಶೆಡ್‌ ನಿರ್ಮಿಸಿಕೊಡಿ ಎಂದು ಮನವಿ ಮಾಡಿದರು. ಗಡಿಕೇಶ್ವಾರದಲ್ಲಿ ಭೂಕಂಪದ ತೀವ್ರತೆ ಗುರುತಿಸಲು ಸಿಸ್ಮೋ ಮೀಟರ್‌ ಅಳವಡಿಸಲಾಗಿದೆ. ಆದರೆ ಭೂಕಂಪವಾದಾಗ ಅದರ ತೀವ್ರತೆ ಕುರಿತು ನಮಗೆ ಮಾಹಿತಿ ನೀಡುತ್ತಿಲ್ಲ. ಅಲ್ಲದೇ ಗಡಿಕೇಶ್ವಾರ, ಹೊಸಳ್ಳಿ, ರಾಮನಗರ ತಾಂಡಾದಲ್ಲಿ ಮಾತ್ರ ಕಾಳಜಿ ಕೇಂದ್ರ ಪ್ರಾರಂಭಿಸಲಾಗಿದೆ. ಇನ್ನುಳಿದ ಗ್ರಾಮಗಳನ್ನು ಪರಿಗಣಿಸಿ ಅಲ್ಲಿಯೂ ಕಾಳಜಿ ಕೇಖದ್ರ ಆರಂಭಿಸಬೇಕು ಎಂದು ಮುಖಂಡರಾದ ಸುರೇಶ ಪಾಟೀಲ ರಾಯಕೋಡ, ಕಾಶಿನಾಥ ಪೂಜಾರಿ, ವೀರೇಶ ರೆಮ್ಮಣಿ ಮತ್ತಿತರರು ಆಗ್ರಹಿಸಿದರು.

ಇದನ್ನೂ ಓದಿ:ಮಂಗಳವಾರ ಹಾಲು-ತುಪ್ಪ ಕಾರ್ಯ : ಕಂಠೀರವ ಸ್ಟುಡಿಯೋ ಸುತ್ತ ಸೆಕ್ಷನ್ 144

ಮನೆಬಿದ್ದ ಸ್ಥಳಕ್ಕೆ ಆಯುಕ್ತರ ಭೇಟಿ

ಭೂಕಂಪದಿಂದ ಮನೆಗಳು ಬಿದ್ದಿರುವ ಮತ್ತು ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿರುವ ಕುರಿತು ಆಯುಕ್ತರು ಪರಿಶೀಲಿಸಿದರು. ನಂತರ ತಾಲೂಕುಮಟ್ಟದ ಅಧಿಕಾರಿಗಳ ಸಭೆಯನ್ನು ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆಸಿ, ಭೂಕಂಪದ ಕುರಿತು ಮಾಹಿತಿ ಪಡೆದುಕೊಂಡರು. ಸಹಾಯಕ ಆಯುಕ್ತೆ ಅಶ್ವಿ‌ಜಾ, ತಹಶೀಲ್ದಾರ್‌ ಅಂಜುಮ ತಬುÕಮ್‌, ತಾಪಂ ಅಧಿಕಾರಿ ಅನಿಲಕುಮಾರ ರಾಠೊಡ, ಎಇಇ ಗುರುರಾಜ ಜೋಶಿ, ಎಇಇ ಸಿದ್ರಾಮ ದಂಡಗುಲಕರ, ಎಇಇ ಮಹ್ಮದ್‌ ಅಹೆಮದ್‌ ಹುಸೇನ, ಡಾ| ಜಗದೀಶ್ವರ ಬುಳ್ಳ, ಡಾ| ಅಜೀತ್‌ ಪಾಟೀಲ, ಸಿಡಿಪಿಒ ಗುರುಪ್ರಸಾದ ಕವಿತಾಳ, ಎಇಇ ವೀರೇಂದ್ರ ಚವ್ಹಾಣ ಇನ್ನಿತರರಿದ್ದರು.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.