ಬೈಕ್‌‌ಗೆ ಲಾರಿ ಡಿಕ್ಕಿ: ಜಾತ್ರೆಯಿಂದ ಬರುತ್ತಿದ್ದ ಮೂವರ ದುರ್ಮರಣ

Team Udayavani, Jan 30, 2020, 1:39 PM IST

ಕಲಬುರಗಿ: ಬೈಕ್‌‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ರೇವೂರ್ ಗ್ರಾಮದ ಬಳಿ ಗುರುವಾರ ನಡೆದಿದೆ.

ರಾಜಕುಮಾರ್ ಖಂಡೇಕರ್ (24), ಗುಂಡಪ್ಪಾ ಮಾನೆ (20), ಮಹದೇವಪ್ಪಾ ಸಾಲೆಗಾಂವ್ (30) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು.‌

ಮೃತರು ಜಾತ್ರಾ‌ ಮಹೋತ್ಸವದಲ್ಲಿ ಪಾಲ್ಗೊಂಡು ಒಂದೇ ಬೈಕ್‌ನಲ್ಲಿ ಮೂವರು ತೆರಳುತ್ತಿದ್ದರು.‌ ಈ ವೇಳೆ ಲಾರಿ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಮೃತರೆಲ್ಲರೂ ಆಳಂದ ತಾಲೂಕಿನ ಮಾಡಿಯಾಳ ಗ್ರಾಮದವರು ಎನ್ನಲಾಗಿದೆ.

ಸ್ಥಳಕ್ಕೆ ಸ್ಥಳೀಯ ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರೇವೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ