ಕಾರು ಅಪಘಾತ: ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಗೆ ಗಾಯ
Team Udayavani, Apr 15, 2023, 10:08 AM IST
ಕಲಬುರಗಿ: ನೆರೆಯ ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಅವರ ಕಾರು ಶುಕ್ರವಾರ ರಾತ್ರಿ ನಗರದ ಆಕಾಶವಾಣಿ ಕೇಂದ್ರದ ಬಳಿ ಅವರ ಕಾರು ಅಪಘಾತಕ್ಕೀಡಾಗಿದೆ.
ಕಾರಿನಲ್ಲಿದ್ದ ಚಿಂಚನಸೂರ್ ಅವರ ತಲೆ, ಮುಖ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ನಗರದ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿದರು.
ತಡರಾತ್ರಿ ಹನ್ನೆರಡುವರೆ ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. ಎಲುಬು ಹಾಗೂ ನರಗಳಿಗೆ ಏಟು ಬಿದ್ದಿದೆ. ಆಸ್ಪತ್ರೆಯ ತಜ್ಞ ವೈದ್ಯರು ನಿರಂತರ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಬಾಬುರಾವ್ ಅವರ ಮನೆ ಕಲಬುರಗಿಯ ಶಾಂತಿನಗರದಲ್ಲಿದೆ. ಕ್ಷೇತ್ರದಲ್ಲಿ ಪ್ರಚಾರ ಮುಗಿಸಿಕೊಂಡು ವಾಪಸ್ ಬರುವಾಗ ಘಟನೆ ನಡೆದಿದೆ ಎಂದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ