ಮುಂಗಾರು ಬಿತ್ತನೆಗೆ ರೋಹಿಣಿ ಭರವಸೆ


Team Udayavani, Jun 9, 2021, 8:14 PM IST

ಗಹಜಹಗ್ದ್ಗಹಜ

ಕಲಬುರಗಿ: ಮುಂಗಾರು ಮೃಗಶಿರ ಮಂಗಳವಾರ ಆರಂಭವಾಗಿದ್ದು, ಕೃಷಿ ಕಾರ್ಯ ಚಟುವಟಿಕೆಗೆಳಿಗೆ ಹಸಿರು ನಿಶಾನೆ ತೋರಿಸಿದಂತಾಗಿದೆ. ರೋಹಿಣಿ ಕೊನೆ ಚರಣದಲ್ಲಿ ಮಳೆ ಸುರಿದಿದ್ದೇ ಇದಕ್ಕೆ ಕಾರಣವಾಗಿದೆ. ಹಿಂದಿನ ವರ್ಷಗಳಲ್ಲಿ ಮುಂಗಾರು ಆರಂಭವಾದ ಮೇಲೆ ಮಳೆ ಸುರಿಯುತ್ತಿತ್ತು. ಆದರೆ ಈ ಸಲ ರೋಹಿಣಿ ಮಳೆ ಬಿತ್ತನೆಗೆ ಯೋಗ್ಯ ಮಳೆ ಸುರಿದಿದ್ದರಿಂದ ಬಿತ್ತನೆ ಕಾರ್ಯ ಶುರುವಾಗಿದೆ. ಮುಂಗಾರು ಆರಂಭ ಮುಂಚೆಯೇ ಬಿತ್ತನೆ ಶುರುವಾಗಿದ್ದು ಇದೇ ವರ್ಷ ಎನ್ನಬಹುದಾಗಿದೆ.

ಜಿಲ್ಲೆಯಲ್ಲಿ ಪ್ರಸಕ್ತವಾಗಿ 7.50 ಲಕ್ಷ ಹೆಕ್ಟೇರ್‌ ಭೂಮಿಯಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಇದರಲ್ಲಿ 5.30 ಲಕ್ಷ ಹೆಕ್ಟೇರ್‌ ತೊಗರಿ ಬಿತ್ತನೆ ಗುರಿಯಿದೆ. ಅದೇ ರೀತಿ 40 ಸಾವಿರ ಹೆಕ್ಟೇರ್‌ ಹೆಸರು, 25 ಸಾವಿರ ಹೆಕ್ಟೇರ್‌ ಭೂಮಿಯಲ್ಲಿ ಹಾಗೂ 60 ಸಾವಿರ ಹೆಕ್ಟೇರ್‌ ಭೂಮಿಯಲ್ಲಿ ಹತ್ತಿ ಬಿತ್ತನೆ ಗುರಿ ಹೊಂದಲಾಗಿದೆ.

ಬೀಜ ಲಭ್ಯ-ಗೊಬ್ಬರ ಅಭಾವ: ಮುಂಗಾರು ಬಿತ್ತನೆಗೆ ಬೀಜಗಳು ಲಭ್ಯವಿದ್ದು, ಅಷ್ಟೇನು ಕೊರತೆ ಕಾಣುತ್ತಿಲ್ಲ. ತೊಗರಿ ಬೀಜ ವಂತೂ ರೈತರು ಖರೀದಿ ಮಾಡುವುದೇ ಅಪರೂಪ. ಏಕೆಂದರೆ ರಾಶಿ ಮಾಡಲಾಗಿದ್ದ ತೊಗರಿಯಲ್ಲೇ ಉತ್ತಮವಾಗಿದ್ದನ್ನು ತೆಗೆದಿರಿಸಿ ಅದನ್ನೇ ಬಿತ್ತನೆ ಮಾಡಲಾಗುತ್ತಿದೆ. ಆರ್‌ಎಸ್‌ಕೆ ಬೀಜವನ್ನು ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೆಚ್ಚಿಕೊಂಡಿಲ್ಲ. ಉಳಿದಂತೆ ಗೊಬ್ಬರ ಯೋಗ್ಯವಿದ್ದಂತೆ ಇದೆಯಾದರೂ ಮಾರುಕಟ್ಟೆಯಲ್ಲಿ ಭರಪೂರವಾಗಿ ಕಾಣುತ್ತಿಲ್ಲ.

ಎರಡು ದಿನ ಇಲ್ಲವೇ ನಾಲ್ಕು ದಿನಕ್ಕೊಮ್ಮೆ ಎರಡು ಸಾವಿರ ಮೆಟ್ರಿಕ್‌ ಟನ್‌ ಗೊಬ್ಬರ ಬರುತ್ತಿದೆ. ಇಲ್ಲಿಯವರೆಗೆ 13 ಸಾವಿರ ಮೆಟ್ರಿಕ್‌ ಟನ್‌ ಗೊಬ್ಬರ ವಿತರಣೆಯಾಗಿದೆ. ಪಿಡಿ ಖಾತೆಯಲ್ಲಿ 80 ಕೋಟಿ ರೂ.: ಮುಂಗಾರು ಹಂಗಾಮಿನಲ್ಲಿ ಜೋರಾದ ಮಳೆಯಾಗಿ ಅತಿವೃಷ್ಟಿಯಾದಲ್ಲಿ ಅದನ್ನು ಎದುರಿಸಲು ಜಿಲ್ಲಾಡಳಿತ ಸಿದ್ದತೆ ಮಾಡಿಕೊಂಡಿದೆ.

ಸೋಮವಾರ ಕಂದಾಯ ಇಲಾಖೆ ಕಾರ್ಯದರ್ಶಿಗಳು ಜಿಲ್ಲೆಯಲ್ಲಿ ಮುಂಗಾರು ಹವಾಮಾನ, ಕೃಷಿ ಚಟುವಟಿಕೆಗಳ ಕುರಿತಾಗಿ ಸಮಗ್ರವಾದ ಸಭೆಯೊಂದನ್ನು ನಡೆಸಿ ಅಗತ್ಯ ಸಿದ್ದತೆಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 80 ಕೋಟಿ ರೂ. ಇದೆ. ಜಿಲ್ಲಾ ವಿಪತ್ತು ಪ್ರಾಧಿಕಾರ ರಚನೆಗೆಯಾಗಿದೆ. ಕಳೆದ ವರ್ಷ ಮುಂಗಾರು ಪ್ರಾರಂಭ ದಲ್ಲೇ ಮಳೆಯಾಗಿದ್ದರಿಂದ ರೈತರು ಸರಾಸರಿ ಗಿಂತ 20 ಸಾವಿರ ಹೆಕ್ಟೇರ್‌ ಭೂಮಿಯಲ್ಲಿ ಬಿತ್ತನೆ ಹೆಚ್ಚಳವಾಗಿತ್ತು. ಈ ಸಲವೂ ಹೆಚ್ಚಳ ವಾಗಲಿದೆ. ಉತ್ತಮ ಮಳೆಯಾಗಿ ರೈತ ವರ್ಗ ಬಿತ್ತನೆ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಲ್ಲಿ ಗ್ರಾಮೀಣ ಭಾಗದಲ್ಲಿ ಕೊರೊನಾ ಹಾವಳಿ ಕಡಿಮೆ ಆಗುವುದೆಂದು ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.