2 ಲಕ್ಷ ರೂ. ಶುಲ್ಕ ವಸೂಲಿ

Team Udayavani, Aug 29, 2017, 10:59 AM IST

gul 8.jpg

ಚಿಂಚೋಳಿ: ಕೃಷಿ ಉತ್ಪನ್ನ ಮಾರುಕಟ್ಟೆಯ 2017-18ನೇ ಸಾಲಿನಲ್ಲಿ ಮಾರುಕಟ್ಟೆ ಶುಲ್ಕ 7 ಲಕ್ಷ ರೂ. ಗುರಿ ನೀಡಲಾಗಿದೆ. ಈಗಾಗಲೇ ವರ್ತಕರಿಂದ 2 ಲಕ್ಷ ರೂ. ವಸೂಲಿ ಮಾಡಲಾಗಿದೆ ಎಂದು ಎಪಿಎಂಸಿ ಕಾರ್ಯದರ್ಶಿ ಮಹಾದೇವಿ ಪಾಟೀಲ ಹೇಳಿದರು. ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ ಅಧ್ಯಕ್ಷ ಚಂದ್ರಶೇಖರಯ್ಯ ಸ್ವಾಮಿ ಕಂಬದ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ 2016-17ನೇ ಸಾಲಿನಲ್ಲಿ 7 ಲಕ್ಷ ರೂ. ಗುರಿ ನೀಡಲಾಗಿತ್ತು. ಅದರಲ್ಲಿ 5.42 ಲಕ್ಷ ರೂ. ವಸೂಲಿ ಮಾಡಿ. ಶೇ. 77ರಷ್ಟು ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು. ತಾಲೂಕಿನ ರೈತರಿಗೆ ಅನುಕೂಲವಾಗಲು ಹಾಗೂ ವರ್ತಕರು ಹೆಸರು ಖರೀದಿಸಲು ವಾರದಲ್ಲಿ ಸೋಮವಾರ ಮತ್ತು ಬುಧವಾರ ಬಹಿರಂಗ ಹರಾಜು(ಬೀಟ)ನಡೆಸಿದರೆ ಉತ್ತಮ. ಹೊರಗಿನ ವ್ಯಾಪಾರಿ ಮತ್ತು ದಲ್ಲಾಳಿಗಳು ಬಂದು ಹೆಸರು, ಉದ್ದು ಖರೀದಿಸುತ್ತಾರೆ. ಇದರಿಂದ ಸ್ವಲ್ಪಮಟ್ಟಿಗೆ ಖರ್ಚು ಕಡಿಮೆ ಆಗಲಿದೆ. ಎಲ್ಲ ವರ್ತಕರು ಒಪ್ಪಿಗೆ ನೀಡಿದರೆ ಸೆಪ್ಟೆಂಬರ್‌ ಮೊದಲ ವಾರದಲ್ಲಿ ಹೆಸರು ವಹಿವಾಟಿನ ಉದ್ಘಾಟನೆಯಾಗಲಿದೆ ಎಂದು ಅಧ್ಯಕ್ಷ ಚಂದ್ರಶೇಖರಯ್ಯ ಸ್ವಾಮಿ ಕಂಬದ ಹೇಳಿದರು. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿರುವ ವ್ಯಾಪಾರಿಗಳು ಸರಿಯಾಗಿ ತೆರಿಗೆ ನೀಡುವುದಿಲ್ಲ. 36 ವರ್ತಕರಿದ್ದಾರೆ. ಅವರಿಗೆ ತಿಳಿಸಿದರೂ ಗಮನ ಹರಿಸುತ್ತಿಲ್ಲ. ಎಲ್ಲ ವ್ಯಾಪಾರಿಗಳು ತಮ್ಮ ವ್ಯಾಪಾರಿ ಕೇಂದ್ರಗಳಲ್ಲಿಯೇ ವ್ಯಾಪಾರ ವಹಿವಾಟು ನಡೆಸಬೇಕು.ಪಟ್ಟಣದಲ್ಲಿ ಕೆಲವು ವ್ಯಾಪಾರಿಗಳು ಪರವಾನಿಗೆ ಇಲ್ಲದೇ ಹೆಸರು, ಉದ್ದು ,ತೊಗರಿ ಖರೀದಿಸುತ್ತಾರೆ. ಅಂತಹವರ ಅಂಗಡಿಗಳಿಗೆ ಬೀಗ ಹಾಕಬೇಕು ಎಂದು ಉಪಾಧ್ಯಕ್ಷ ರೇವಣಸಿದ್ದಪ್ಪ ಪೂಜಾರಿ ಕಾರ್ಯದರ್ಶಿಗಳಿಗೆ ಸೂಚಿಸಿದರು. ಎಪಿಎಂಸಿ ಪ್ರಾಂಗಣದಲ್ಲಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್‌ ದೀಪಗಳಿಲ್ಲ ಎಂದು ಸಭೆಯಲ್ಲಿದ್ದ ವ್ಯಾಪಾರಸ್ಥರು ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆ ನಿರ್ದೇಶಕ ಮಧ್ವಚಾರ್ಯ ಕುಲಕರ್ಣಿ ಅವರಿಗೆ ತಿಳಿಸಿದರು. ಇನ್ನೆರಡು ದಿನಗಳಲ್ಲಿ ವಿದ್ಯುತ್‌ ದೀಪಗಳ ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಯದರ್ಶಿ ಮಹಾದೇವಿ ಪಾಟೀಲ ಭರವಸೆ ನೀಡಿದರು. ನಿರ್ದೇಶಕರಾದ ಅಣ್ಣಾರಾವ ಪೆದ್ದಿ, ಖಾಖಾಸಾಬ, ಗುಂಡಪ್ಪ ಸರಡಗಿ, ಚಂದ್ರು ಚಂಗು, ಅಶೋಕ ಐನಾಪುರ, ಸೋಮನಾಥರೆಡ್ಡಿ ಜಟ್ಟೂರ, ಜರಣಪ್ಪ ಚಿಕ್ಕನಿಂಗದಳ್ಳಿ, ಈಶ್ವರ ಸುಂಕದ, ಓಂಪ್ರಕಾಶ ಗುಜರಾತಿ ಇದ್ದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.