ಸಂಘ-ಸಂಸ್ಥೆ ಮಾಹಿತಿ ಹಕ್ಕು ಅರ್ಜಿಗಿಲ್ಲಾ ಮಾನ್ಯತೆ


Team Udayavani, Jul 17, 2018, 4:03 PM IST

gul-1.jpg

ಕಲಬುರಗಿ: ಸಂಘ-ಸಂಸ್ಥೆ ಹೆಸರಿನಡಿ ಮಾಹಿತಿ ಕೋರಿ ಮಾಹಿತಿ ಹಕ್ಕು ಅಡಿ ಅರ್ಜಿ ಸಲ್ಲಿಸಿದರೆ ಮಾಹಿತಿ ನೀಡುವಂತಿಲ್ಲ. ಜತೆಗೆ ಅರ್ಜಿಯನ್ನು ಅಧಿಕಾರಿಗಳು ಸಾರಾಸಗಟವಾಗಿ ತಿರಸ್ಕೃರಿಸಬಹುದಾಗಿದೆ ಎಂದು ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಡಾ| ಸುಚೇತನ ಸ್ವರೂಪ ಹೇಳಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಹಿತಿ ಹಕ್ಕು ಮೇಲ್ಮನವಿ ಪ್ರಾಧಿಕಾರದಲ್ಲಿ ಬಾಕಿಯಿರುವ ಪ್ರಕರಣಗಳ ವಿಚಾರಣೆ ನಡೆಸಿದ ಅವರು, ಸಂಘ-ಸಂಸ್ಥೆಯಡಿ ಇಲ್ಲದೇ ನಾಗರಿಕರು ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿ ಹಕ್ಕುಕಾಯ್ದೆ ಅಡಿ ಅರ್ಜಿ ಸಲ್ಲಿಸುವರು ಪ್ರಮುಖವಾಗಿ ಸಾರ್ವಜನಿಕ ಹಿತಾಸಕ್ತಿ ಹೊಂದಿರಬೇಕು. ಬೇರೆ ಯಾವುದೇ ದೃಷ್ಟಿ ಹೊಂದಿರಬಾರದು. ಯಾವುದೇ ವ್ಯಕ್ತಿಯನ್ನು ಗುರಿಯಾಗಿಸಬಾರದು. ಜತೆಗೆ ಅಧಿಕಾರಿಯ ವೈಯಕ್ತಿಕ ಮಾಹಿತಿ, ಜಾತಿ ಹಾಗೂ ಶೈಕ್ಷಣಿಕ ಅರ್ಹತೆ ಕೇಳುವುದನ್ನು ಹೊಂದಿರಬಾರದು ಎಂದರು.

ಮಾಹಿತಿ ಹಕ್ಕು ಕಾಯ್ದೆಯನ್ನು ಕೆಲವರು ದುರ್ಬಳಕೆ ಹಾಗೂ ಯಾವುದೇ ಬಲವಾದ ಉದ್ದೇಶವಿಟ್ಟುಕೊಂಡು ಕೇಳುತ್ತಿರುವುದರಿಂದ ಅಧಿಕಾರಿಗಳು ಮೊದಲಿನ ಹಾಗೆ ಮಾಹಿತಿ ಕೊಡಲು ಮುಂದಾಗದೇ ದಂಡ ತುಂಬುತ್ತಿದ್ದಾರೆ. ಹೀಗಾಗಬಾರದು. ಮಾಹಿತಿ ಹಕ್ಕು ಕಾಯ್ದೆ ಸಮರ್ಪಕವಾಗಿ ಬಳಕೆಯಾಗಬೇಕು ಎಂದರು.

ಮಾಹಿತಿ ಹಕ್ಕು ಕಾಯ್ದೆಯನ್ನು ಅಧಿಕಾರಿಗಳು ಗಂಭೀರ ರೀತಿಯಲ್ಲಿ ಪರಿಗಣಿಸಿ ಮಾಹಿತಿ ನೀಡುವುದು ತಮ್ಮ ಕರ್ತವ್ಯ ಎಂದು ಭಾವಿಸಬೇಕು. ಮಾಹಿತಿ ಹಕ್ಕಿನಡಿ ಒದಗಿಸುವ ಮಾಹಿತಿಯನ್ನು ಬೇರೆ ಸ್ಥಳಗಳಿಗೆ ರವಾನಿಸಬೇಕಾದಲ್ಲಿ ಕಡ್ಡಾಯವಾಗಿ ನೋಂದಾಯಿತ ಅಂಚೆ ಮೂಲಕ ರವಾನಿಸಿ ಇಟ್ಟುಕೊಳ್ಳಬೇಕು. ಮುಖ್ಯವಾಗಿ ಅರ್ಜಿಯನ್ನು 150 ಪದಗಳಲ್ಲಿ ಮಾತ್ರ ಸಲ್ಲಿಸಬೇಕು. ಕೇಂದ್ರ ಸರ್ಕಾರ ರೂಪಿಸಿರುವ ಮಾಹಿತಿ ಹಕ್ಕು ಕಾಯ್ದೆಯನ್ನು ತಿದ್ದುಪಡಿ ಮಾಡಲು ಬರುವುದಿಲ್ಲ. ಒಂದು ಅರ್ಜಿಯಲ್ಲಿ ಹಲವು ಮಾಹಿತಿಗಳನ್ನು ಕೇಳಬಾರದು ಎಂದು ಹೇಳಿದರು.

ಎರಡು ವರ್ಷಗಳ ಹಿಂದೆ ರಾಜ್ಯ ಮಾಹಿತಿ ಆಯೋಗದಲ್ಲಿ 40 ಸಾವಿರ ಪ್ರಕರಣಗಳು ಬಾಕಿ ಇದ್ದವು. ಮಾಹಿತಿ ಆಯುಕ್ತರೆಲ್ಲರೂ ಏಕಕಾಲದಲ್ಲಿ ವಿಚಾರಣೆ ನಡೆಸಿ ಶೇ. 90ರಷ್ಟು ಇತ್ಯರ್ಥಪಡಿಸಲಾಗಿದೆ. ಮಾಹಿತಿ ಹಕ್ಕು ದುರುಪಯೋಗಪಡಿಸಿಕೊಂಡವರು ಹಾಗೂ ಅನ್ಯಾಯವಾಗಿ ನಡೆದುಕೊಂಡವರು ಸಲ್ಲಿಸಿರುವ ಅರ್ಜಿಗಳನ್ನು ಸುಮಾರು 5 ನ್ಯಾಯಾಧೀಶರ ಪೂರ್ಣ ಪೀಠಕ್ಕೆ ಒಳಪಡಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಬೆಂಗಳೂರು ಮಹಾನಗರಪಾಲಿಕೆ, ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಹೆಚ್ಚಿನ ನಿಟ್ಟಿನಲ್ಲಿ ಮಾಹಿತಿ ಹಕ್ಕು ಕಾಯ್ದೆ ಅಡಿ ಅರ್ಜಿಗಳು ಸಲ್ಲಿಕೆಯಾದರೆ ನಂತರ ಶೇ. 50ರಷ್ಟು ಮಾಹಿತಿಗಳು ಕಂದಾಯ ಇಲಾಖೆಗೆ  ಬಂಧಿಸಿದ್ದಾಗಿರುತ್ತವೆ. ಬೆಂಗಳೂರು ಬಿಟ್ಟರೆ ಬೆಳಗಾವಿ, ರಾಯಚೂರು ಹಾಗೂ ಕಲಬುರಗಿಯಲ್ಲಿ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ವಿವರಿಸಿದರು.

ಕಲಬುರಗಿಯಲ್ಲಿ ಸೋಮವಾರ ನಡೆದ ವಿಚಾರಣೆಯಲ್ಲಿ 102 ಅರ್ಜಿಗಳ ಅರ್ಜಿಗಳ ಪೈಕಿ 60ಅರ್ಜಿಗಳನ್ನುಇತ್ಯರ್ಥಪಡಿಸಲಾಯಿತು. ತಹಶೀಲ್ದಾರ್‌ ದಯಾನಂದ ಪಾಟೀಲ, ಆಯೋಗದ ತೀರ್ಪು ಬರಹಗಾರ ಅಪ್ಪಾಜಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ದೂರುದಾರರು ಹಾಜರಿದ್ದರು.

ಮಾಹಿತಿ ಹಕ್ಕು ಕಾಯ್ದೆ ಉತ್ತಮವಾಗಿದೆ. ಇದು ದುರ್ಬಳಕೆ ಆಗಬಾರದು ಎನ್ನುವುದು ಆಯೋಗದ ಆಶಯ. ಅಧಿಕಾರಿಗಳು ಅರ್ಜಿಗೆ ಸಕಾಲದಲ್ಲಿ ಸಮರ್ಪಕ ಮಾಹಿತಿ ನೀಡಬೇಕು. ಕೆಲವು ಅರ್ಜಿಗಳು ಕ್ರಮಬದ್ಧವಾಗಿರದ ಕಾರಣ ಸಮರ್ಪಕ ಉತ್ತರ ಸಿಗುತ್ತಿಲ್ಲ. ದುರ್ಬಳಕೆ ಹಿನ್ನೆಲೆಯಲ್ಲಿ ಕೆಲ ಅಧಿಕಾರಿಗಳು ಮಾಹಿತಿ ನೀಡದೇ ದಂಡ ತುಂಬುತ್ತಿದ್ದಾರೆ. ಹೀಗಾಗಬಾರದು.  ಡಾ| ಸುಚೇತನ ಸ್ವರೂಪ, ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮುಖ್ಯ ಮಾಹಿತಿ ಆಯುಕ್ತ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.