ಶಾಲೆಗಳಲ್ಲಿ ಚಿಣ್ಣರ ಚಿಲಿಪಿಲಿ ಆರಂಭ


Team Udayavani, Oct 26, 2021, 9:42 AM IST

2school

ಕಲಬುರಗಿ: ಕೊರೊನಾ ಹಾವಳಿಯಿಂದ ಕಳೆಗುಂದಿದ್ದ ಶಾಲೆಗಳಿಗೆ ಮತ್ತೆ ಜೀವಕಳೆ ಬಂದಿದೆ. ಸೋಮವಾರ ಚಿಣ್ಣರ ಆಗಮನದಿಂದ ವಿದ್ಯಾ ಕೇಂದ್ರಗಳಲ್ಲಿ ಕಲರವ ಕಂಡು ಬಂತು. ಮಕ್ಕಳಿಗೆ ಶಿಕ್ಷಕರ ವೃಂದ ಅದ್ಧೂರಿ ಸ್ವಾಗತ ನೀಡಿ ಬರ ಮಾಡಿಕೊಂಡಿತು.

ಸರ್ಕಾರದ ಆದೇಶದಂತೆ ಈಗಾಗಲೇ ಜಿಲ್ಲಾದ್ಯಂತ ಹಿರಿಯ ಮತ್ತು ಪ್ರೌಢ ಶಾಲೆಗಳು ಆರಂಭವಾಗಿದೆ. ಸೋಮವಾರದಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಸೇರಿ 780 ಶಾಲೆಗಳಲ್ಲೂ ಕಿರಿಯ ಪ್ರಾಥಮಿಕ ಹಂತದ 1ರಿಂದ 5ನೇ ತರಗತಿಗಳು ಕೂಡ ಪ್ರಾರಂಭವಾದವು. ಇದರೊಂದಿಗೆ ಹಿರಿಯ ಮಕ್ಕಳೊಂದಿಗೆ ಕಿರಿಯರು ಕೂಡಿಕೊಂಡು ಶಾಲಾ ಆವರಣಗಳಲ್ಲಿ ಚಿಲಿಪಿಲಿ ವಾತಾವರಣ ಮೂಡಿತ್ತು.

ಶಾಲೆಗಳ ಆರಂಭ ಹಿನ್ನೆಲೆಯಲ್ಲಿ ಬೆಳಗ್ಗೆ 9ರ ಹೊತ್ತಿಗೆ ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳತ್ತ ಕರೆದುಕೊಂಡು ಬಂದರು. ಹಲವು ಕಡೆ ಶಾಲೆಗಳಿಗೆ ತಳಿರು ತೋರಣಗಳಿಂದ ಅಲಂಕಾರ ಮಾಡಲಾಗಿತ್ತು. ಶಾಲೆಗಳಿಗೆ ಬಂದ ಮಕ್ಕಳಿಗೆ ಶಿಕ್ಷಕರು ಹೂವು ಮತ್ತು ಚಾಕಲೋಟ್‌ ನೀಡಿ ಸ್ವಾಗತಿಸಿದರು. ಮತ್ತೆ ಕೆಲ ಖಾಸಗಿ ಶಾಲೆಗಳಲ್ಲಿ ಪುಟಾಣಿಗಳಿಗೆ ಪುಷ್ಪಾರ್ಚನೆ ಮಾಡಿ ಬರಮಾಡಿಕೊಂಡರು.

ಬಹುದಿನಗಳ ನಂತರ ಮುಖಾ-ಮುಖೀಯಾದ ಶಿಕ್ಷಕ ಮತ್ತು ವಿದ್ಯಾರ್ಥಿ ಸಮೂಹದಲ್ಲಿ ಸಂತಸವೂ ಹೆಚ್ಚಾಗಿತ್ತು. ಆರಂಭದಲ್ಲೇ ಮಕ್ಕಳಿಗೆ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಲು ಶಿಕ್ಷಕರು ಸಲಹೆ ನೀಡಿದರು. ಶಾಲಾ ಕೊಠಡಿಗಳಿಗೆ ಮಕ್ಕಳು ಪ್ರವೇಶ ಪಡೆಯುವ ಮುನ್ನ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಹಾಗೂ ಹ್ಯಾಂಡ್‌ ಸ್ಯಾನಿಟೈಸರ್‌ ಮತ್ತು ಥರ್ಮಲ್‌ ಸ್ಕ್ಯಾನಿಂಗ್‌ ಮಾಡಲಾಯಿತು. ಮಾಸ್ಕ್ ಧರಿಸುವಿಕೆ ಕಡ್ಡಾಯವಾಗಿ ಪಾಲನೆ ಮಾಡಲು ಸೂಚಿಸಲಾಯಿತು.

ಇದನ್ನೂ ಓದಿ: ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್: ಅಮಾನತು

ನಗರ ಪ್ರದೇಶದಲ್ಲಿ ಉತ್ಸಾಹ

ಮೊದಲ ದಿನವೇ ಚಿಣ್ಣರು ಸಂಭ್ರಮದಿಂದಲೇ ಶಾಲೆಗಳಿಗೆ ಬಂದರು. ಪ್ರಸಕ್ತ ವರ್ಷದಲ್ಲಿ 1ರಿಂದ 5ನೇ ತರಗತಿಗಳಿಗೆ ಒಟ್ಟಾರೆ 2.79 ಮಕ್ಕಳು ನೋಂದಾಣಿ ಮಾಡಿಕೊಂಡಿದ್ದು, ಸೋಮವಾರ ಜಿಲ್ಲಾದ್ಯಂತ ಉತ್ತಮ ಹಾಜರಾತಿ ಇತ್ತು. ಇದರಲ್ಲಿ ನಗರ ಪ್ರದೇಶದ ಮಕ್ಕಳಲ್ಲಿ ಹೆಚ್ಚಿನ ಉತ್ಸಾಹ ಕಂಡು ಬಂತು. ಕಲಬುರಗಿ ನಗರದಲ್ಲಿ ಒಟ್ಟಾರೆ ಮಕ್ಕಳು ಹಾಜರಾತಿ ಶೇ.44ರಷ್ಟು ಇದ್ದರೆ, ಜಿಲ್ಲಾದ್ಯಂತ ಶೇ.25ರಷ್ಟು ಮಕ್ಕಳು ತರಗತಿಗಳಿಗೆ ಹಾಜರಾದರು. ಹಿರಿಯ ಪ್ರಾಥಮಿಕ ಶಾಲೆಗಳು ಆರಂಭವಾದ ನಂತರ ಕಿರಿಯ ಪ್ರಾಥಮಿಕ ತರಗತಿಗಳ ಪ್ರಾರಂಭದ ಬಗ್ಗೆ ಪೋಷಕರು ವಿಚಾರಿಸುತ್ತಿದ್ದರು. ಸೋಮವಾರ ಈ ತರಗತಿಗಳು ಆರಂಭವಾದ ಕಾರಣ ಉತ್ತಮ ಪ್ರಕ್ರಿಯೆ ದೊರೆತಿದೆ.

ನಮ್ಮ ಶಾಲೆಯಲ್ಲಿ 1ರಿಂದ 5ನೇ ತರಗತಿಗಳಿಗೆ ಒಟ್ಟು 204 ಮಕ್ಕಳು ನೋಂದಣಿ ಮಾಡಿಕೊಂಡಿದ್ದು, ಮೊದಲ ದಿನವೇ 114 ಮಕ್ಕಳು ಶಾಲೆಗೆ ಹಾಜರಾಗಿದ್ದಾರೆ ಎಂದು ಆದರ್ಶ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಮಡಿವಾಳಮ್ಮ ಪಾಟೀಲ ತಿಳಿಸಿದರು.

ಶಾಲೆಗಳು ಆರಂಭವಾಗದ ಕಾರಣ ಇಷ್ಟು ದಿನ ಮಕ್ಕಳಿಗೆ ಆನ್‌ಲೈನ್‌ ತರಗತಿ ನಡೆಸಲಾಗುತ್ತಿತ್ತು. ಚಿಕ್ಕವರು ಆಗಿದ್ದರಿಂದ ಮನನ ಮಾಡಿಕೊಳ್ಳಲು ಸಮಸ್ಯೆ ಎದುರಿಸುತ್ತಿದ್ದರು. ಭೌತಿಕ ತರಗತಿಗಳು ಪ್ರಾರಂಭವಾದ ಹಿನ್ನೆಲೆ ಮಕ್ಕಳ ಕಲಿಕೆ ಅನುಕೂಲವಾಗಲಿದೆ. ಶಾಲೆಗೆ ಬಾರದ ಮಕ್ಕಳಿಗೆ ಆನ್‌ಲೈನ್‌ ತರಗತಿ ಸಹ ಮುಂದುವರೆಸಲಾಗುತ್ತದೆ ಎಂದು ಮಾತೋಶ್ರಿ ರಮಾಬಾಯಿ ಅಂಬೇಡ್ಕರ್‌ ಸರ್ಕಾರಿ ಅನುದಾನಿತ ಶಾಲೆಯ ಮುಖ್ಯ ಶಿಕ್ಷಕ ಬಸವರಾಜ ಗಡೇದ್‌ ಹೇಳಿದರು.

ನ.2 ರಿಂದ ಬಿಸಿಯೂಟ ನ.2 ರವೆರೆಗೆ ಐದೂ ತರಗತಿ ವಿದ್ಯಾರ್ಥಿಗಳಿಗೆ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಅರ್ಧ ದಿನ ಮಾತ್ರ ತರಗತಿಗಳು ನಡೆಯಲಿವೆ. ಆದ್ದರಿಂದ ಬಿಸಿಯೂಟ ಕೂಡ ನ.2ರ ನಂತರವೇ ಆರಂಭವಾಗಲಿದೆ. ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನಿತ್ಯವೂ ಬಿಸಿಯೂಟ ಇರಲಿದೆ. ಶಾಲೆಗೆ ಮಕ್ಕಳನ್ನು ಕಳುಹಿಸುವ ಪೋಷಕರು ಸ್ವಯಂ ದೃಢೀಕರಣ ಪತ್ರ ನೀಡುವುದು ಕಡ್ಡಾಯ ಮಾಡಲಾಗಿದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.