ಕಲಬುರಗಿ: ಬಸ್ ಡಿಪೋ- ಬಸ್ ನಿಲ್ದಾಣಗಳ ಬಳಿ ನಿಷೇಧಾಜ್ಞೆ ಜಾರಿ
Team Udayavani, Apr 7, 2021, 2:03 PM IST
ಕಲಬುರಗಿ: ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ತಾಲೂಕಿನ ಬಸ್ ನಿಲ್ದಾಣಗಳು ಮತ್ತು ಬಸ್ ಡಿಪೋಗಳ ಸುತ್ತಮುತ್ತ ಸಿಆರ್ ಪಿಸಿ ಕಾಯ್ದೆ 1973ರ ಕಲಂ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಬುಧವಾರ ಆದೇಶ ಹೊರಡಿಸಿದ್ದಾರೆ.
ಮುಷ್ಕರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಗೂ ಸರ್ಕಾರದ ಆಸ್ತಿ ರಕ್ಷಣೆ ಮತ್ತು ಕರ್ತವ್ಯನಿರತ ಸಿಬ್ಬಂದಿಯ ಭದ್ರತೆಗಾಗಿ ಆಳಂದ, ಅಫಜಲಪುರ, ಜೇವರ್ಗಿ, ಚಿತ್ತಾಪುರ, ಚಿಂಚೋಳಿ, ಸೇಡಂ ಹಾಗೂ ಕಾಳಗಿ ಬಸ್ ಡಿಪೋ ಮತ್ತು ಬಸ್ ನಿಲ್ದಾಣಗಳ ಸುತ್ತ-ಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಇರಲಿದೆ ಎಂದು ತಿಳಿಸಿದ್ದಾರೆ.
ಈ ಸ್ಥಳಗಳಲ್ಲಿ ಸರ್ಕಾರ ಮತ್ತು ಸಾರ್ವಜನಿಕರ ಆಸ್ತಿಗಳಿಗೆ ಹಾನಿ ಮಾಡುವಂತಹ ಮಾರಕಾಸ್ತ್ರಗಳು ಸೇರಿದಂತೆ ಮತ್ತಿತರ ವಸ್ತುಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಗುಂಪು-ಗುಂಪಾಗಿ ಚಲಿಸುವುದು, ಸರ್ಕಾರ ವಿರುದ್ಧ ಘೋಷಣೆ ಕೂಗುವುದು ಹಾಗೂ ಅನಾವಶ್ಯಕವಾಗಿ ಸಂಚರಿಸುವಂತಿಲ್ಲ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್