ರೈತರ ಧರಣಿಗೆ ಸೀತಾರಾಮ ಯೆಚೂರಿ ಬೆಂಬಲ

Team Udayavani, Jan 22, 2020, 11:29 AM IST

ಕಲಬುರಗಿ: ತೊಗರಿ ಖರೀದಿ ವಿಳಂಬ ಖಂಡಿಸಿ ನಗರದ ಮಿನಿ ವಿಧಾನಸೌಧದ ಆವರಣದಲ್ಲಿರುವ ಸಂಸದ ಡಾ| ಉಮೇಶ್‌ ಜಾಧವ ಕಚೇರಿ ಎದುರು ರೈತ ಸಂಘಗಳ ಮುಖಂಡರು ನಡೆಸುತ್ತಿರುವ ಧರಣಿ ಸ್ಥಳಕ್ಕೆ ಸಿಪಿಐಎಂ ಪಕ್ಷದ ರಾಷ್ಟ್ರೀಯಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಭೇಟಿ ನೀಡಿ, ಬೆಂಬಲ ಸೂಚಿಸಿದರು.

ತೊಗರಿ ನೋಂದಣಿ ಮತ್ತು ತೊಗರಿ ಖರೀದಿ ಪ್ರಾರಂಭಿಸಲು ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಒತ್ತಾಯಿಸಿ ಜ.16ರಿಂದ ಕರ್ನಾಟಕ ಪ್ರಾಂತ ರೈತ ಸಂಘ, ಅಖೀಲ ಭಾರತ ಕಿಸಾನ್‌ ಸಭಾ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಪಾಲ್ಗೊಳ್ಳುವ ಮುನ್ನ ಧರಣಿ ಸ್ಥಳಕ್ಕೆ ಭೇಟಿದ ಸೀತಾರಾಮ ಯೆಚೂರಿ, ಕಲಬುರಗಿ ಮಾತ್ರವಲ್ಲ ದೇಶಾದ್ಯಂತ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ವಿರುದ್ಧ ಕಿಡಿಕಾರಿದರು.

ರೈತರ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಬೆಳೆಗಳಿಗೆ ಸಿಗಬೇಕಾದ ನ್ಯಾಯಯುತ ಬೆಲೆ ಸಿಗುತ್ತಿಲ್ಲ. ತೊಗರಿ ಖರೀದಿಯಲ್ಲಿ ಆಗುತ್ತಿರುವ ಅನ್ಯಾಯ ಹಾಗೂ ಬೇಳೆ-ಕಾಳುಗಳ ಬೆಳೆಗಾರರ ಸಂಕಷ್ಟದ ಬಗ್ಗೆ ಸಂಸತ್‌ನಲ್ಲಿ ಪ್ರಸ್ತಾಪಿಸಲಾಗುವುದು ಎಂದರು.

ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೇಂಥಿಲ್‌, ಹಿರಿಯ ರೈತ ಮುಖಂಡ ಮಾರುತಿ ಮಾನ್ಪಡೆ, ಶರಣಬಸಪ್ಪ ಮಮಶೆಟ್ಟಿ, ಭೀಮಾಶಂಕರ್‌ ಮಾಡಿಯಾಳ, ಮೌಲಾ ಮುಲ್ಲಾ ಅಲ್ತಾಫ್‌ ಇನಾಂದಾರ್‌, ಅಶೋಕ್‌ ಮ್ಯಾಗೇರಿ, ಮಲ್ಲಣ್ಣಗೌಡ ಬನ್ನೂರ, ಗಂಗಮ್ಮ, ಗೌರಮ್ಮ ಮತ್ತಿತರರು ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  •  ಆಗ್ನೇಯ, ಪಶ್ಚಿಮ, ಕೇಂದ್ರ, ದಕ್ಷಿಣ ಭಾರತದ ಕೆಲವೆಡೆ ಅತಿ ಬಿಸಿ  ಪ್ರತೀ ವರ್ಷಕ್ಕಿಂತ ಹೆಚ್ಚು ತಾಪ ಇರಲಿದೆ ಎಂದ ಇಲಾಖೆ  ತೆಲಂಗಾಣ, ಆಂಧ್ರ ಕರಾವಳಿಗಳಲ್ಲಿ ಬಿಸಿಗಾಳಿ...

  • ನಾನೇ ನನಗೆ ಗೌರವ/ಮೌಲ್ಯ ಕೊಟ್ಟುಕೊಳ್ಳುವುದಿಲ್ಲ ಎಂದರೆ, ನನ್ನನ್ನು ನಾನೇ ಪ್ರೀತಿಸುವುದಿಲ್ಲ ಎಂದರೆ, ಬೇರೆಯವರ್ಯಾಕೆ ನನ್ನನ್ನು ಗೌರವಿಸುತ್ತಾರೆ? ಪ್ರೀತಿಸುತ್ತಾರೆ?...

  • ಬೀಜಿಂಗ್‌/ಹೊಸದಿಲ್ಲಿ: ಚೀನದಲ್ಲಿ ಉದ್ಭವಿಸಿದ ಕೊರೊನಾ ವೈರಸ್‌ ಸೋಂಕಿನ ಪರಿಣಾಮ ಈಗ ಜಾಗತಿಕವಾಗಿ ಗೋಚರಿಸಲಾರಂಭಿಸಿದೆ. ಆರು ದಿನಗಳಿಂದ ಜಗತ್ತಿನ ನಾನಾ ಷೇರು...

  • ಇಂದ್ರಾಣಿ ನದಿಯ ಇಂದಿನ ಕುರೂಪಕ್ಕೆ ನಗರಸಭೆಯನ್ನು ಎಷ್ಟು ದೂರಿದರೂ ಸಾಲದು ಎನ್ನುತ್ತವೆ ದಾಖಲೆಗಳು. ಸುದಿನ ಅಧ್ಯಯನ ತಂಡ ಸಂಗ್ರಹಿಸಿದ ಹಲವು ದಾಖಲೆಗಳು ಸಾಬೀತು...

  • ಕಾಸರಗೋಡು: ರಾಜ್ಯ ಸರಕಾರ ಮುಂಗಡಪತ್ರದಲ್ಲಿ ಘೋಷಿಸಿರುವ "ಹಸಿವು ರಹಿತ ರಾಜ್ಯ ಯೋಜನೆ'ಯ ಅಂಗವಾಗಿ ಇನ್ನು ಮುಂದೆ ಕಾಸರಗೋಡಿನಲ್ಲೂ 25 ರೂ.ಗೆ ಮಧ್ಯಾಹ್ನ ಭೋಜನ ಲಭಿಸಲಿದೆ. ಜಿಲ್ಲಾಧಿಕಾರಿ...