ಬೆನ್ನಟ್ಟಿದ ಭೂಕಂಪ-ಎಚ್ಚೆತ್ತ ಜಿಲ್ಲಾಡಳಿತ


Team Udayavani, Oct 18, 2021, 9:47 AM IST

1

ಚಿಂಚೋಳಿ: ತಾಲೂಕಿನ ಗಡಿಕೇಶ್ವಾರ ಗ್ರಾಮದಲ್ಲಿ ಸಂಭವಿಸುತ್ತಿರುವ ಭೂ ಕಂಪನದಿಂದ ಭಯಭೀತರಾದ ಗ್ರಾಮಸ್ಥರಿಗೆ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಪುನರ್ವಸತಿ ಕೇಂದ್ರದ ವ್ಯವಸ್ಥೆ ಮತ್ತು ಅಗತ್ಯ ಪರಿಹಾರ ಒದಗಿಸಲು ಕ್ರಮ ಕೈಗೊಂಡಿದೆ.

ಗಡಿಕೇಶ್ವಾರ ಗ್ರಾಮದಲ್ಲಿ ಅ.8ರಂದು ರಾತ್ರಿ 12:44ಕ್ಕೆ 2.6, ಅ.9ರಂದು ಬೆಳಗಿನ ಜಾವ 5:37ಕ್ಕೆ 3.2, ಅ.10ರಂದು ಬೆಳಗ್ಗೆ 6:5ಕ್ಕೆ 3.0, ಅ.11ರಂದು ಬೆಳಗ್ಗೆ 6:31ಕ್ಕೆ 2.5, ಅ.11ರಂದು ರಾತ್ರಿ 9:55ಕ್ಕೆ 4.1, ಅ.11ರಂದು ಬೆಳಗ್ಗೆ 8:7ಕ್ಕೆ 3.5, ಅ.12ರಂದು ಬೆಳಗ್ಗೆ 6:15ಕ್ಕೆ 2.8 ತೀವ್ರತೆ ರಿಕ್ಟರ್‌ ಮಾಪನದಲ್ಲಿ ದಾಖಲಾಗಿದೆ. ಇದರಿಂದ ಈ ಗ್ರಾಮದ ಅನೇಕ ನಿವಾಸಿಗಳು ಭಯಗೊಂಡು ಗ್ರಾಮವನ್ನೇ ತೊರೆದಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಅಗತ್ಯ ಪರಿಹಾರ ಕ್ರಮ ಕೈಗೊಂಡಿದೆ.

ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅ.12ರಂದು ಗಡಿಕೇಶ್ವಾರ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಭೂಮಿ ಕಂಪಿಸಿದ ಅನುಭವ ಆಗಿತ್ತು. ಆಗ ಸಿದ್ದರಾಮಯ್ಯ ಸಭೆಯಲ್ಲೇ ಕಂದಾಯ ಸಚಿವ ಆರ್.ಅಶೋಕ ಅವರೊಂದಿಗೆ ಮಾತುಕತೆ ನಡೆಸಿ, ಭೂಕಂಪದ ಕುರಿತು ಮನವರಿಕೆ ಮಾಡಿಕೊಟ್ಟಿದ್ದರು. ಆಗ ಸಚಿವರು ನೀಡಿದ ಭರವಸೆಯಂತೆ ಪರಿಹಾರ ಕ್ರಮಗಳು ಆರಂಭವಾಗಿವೆ.

ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಪುನರ್ವಸತಿ ಕೇಂದ್ರಗಳನ್ನು ನಿರ್ಮಿಸಲಾಗಿದೆ. ಅ.17ರಂದು ನಿರಂತರ ಮಳೆ ಸುರಿದ್ದರಿಂದ ಜನರಿಗೆ ಮಲಗಲು ಸಾಧ್ಯವಾಗಲಿಲ್ಲ.

ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯದಲ್ಲಿ ಊಟದ ವ್ಯವಸ್ಥೆ

ಗ್ರಾಮಸ್ಥರಿಗೋಸ್ಕರ ಊಟದ ವ್ಯವಸ್ಥೆಯನ್ನು ತಹಶೀಲ್ದಾರ್‌ ಅಂಜುಮ್‌ ತಬ್ಸುಮ, ಸಿಡಿಪಿಒ ಗುರುಪ್ರಸಾದ ಮತ್ತು ಕಂದಾಯ ಸಿಬ್ಬಂದಿ ಅಚ್ಚುಕಟ್ಟಾಗಿ ಮಾಡಿದ್ದಾರೆ. ಬೆಳಗ್ಗೆ ಉಪಹಾರ ನಂತರ ಊಟಕ್ಕೆ ಚಪಾತಿ, ಅನ್ನ, ಸಾಂಬಾರು, ತರಕಾರಿ ಮತ್ತು ಮಧ್ಯಾಹ್ನ, ಸಂಜೆಯೂ ಊಟ, ಶುದ್ಧ ನೀರಿನ ವ್ಯವಸ್ಥೆ ಮಾಡಿದ್ದಾರೆ. ಪ್ರತಿನಿತ್ಯ ಎರಡು ಸಾವಿರ ಜನರು ಊಟ ಸೇವಿಸುತ್ತಿದ್ದಾರೆ. ಒಟ್ಟು 20 ಮಹಿಳೆಯರು ಬಿಸಿಯೂಟ ಸಹಾಯಕರು ಅಡುಗೆ ಮಾಡುತ್ತಿದ್ದಾರೆ. 15 ಪುರುಷರು ಅನ್ನ, ಸಾಂಬಾರು ಮಾಡುತ್ತಿದ್ದಾರೆ.

ಇದನ್ನೂ ಓದಿ:  ಅಂತರಿಕ್ಷ, ರಕ್ಷಣಾ ವಲಯದಲ್ಲಿ ಹೂಡಿಕೆಗೆ ಆಹ್ವಾನ

523 ಮನೆಗಳು ಭಾಗಶಃ ಬಿರುಕು

ಗಡಿಕೇಶ್ವಾರ ಗ್ರಾಮದಲ್ಲಿ ಒಟ್ಟು 7500 ಜನಸಂಖ್ಯೆ ಇದೆ. ಭೂಮಿ ಕಂಪಿಸಿದ್ದರಿಂದ ಒಟ್ಟು 523 ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಕಂದಾಯ ಸಿಬ್ಬಂದಿ ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ ಸರ್ವೇ ಕಾರ್ಯ ನಡೆಸಿದ್ದಾರೆ. ಕಲಬುರಗಿ ಸಂಸದ ಡಾ| ಉಮೇಶ ಜಾಧವ, ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ತಾಪಂ ಇಒ ಅನಿಲಕುಮಾರ ರಾಠೊಡ, ಆರೋಗ್ಯಾಧಿಕಾರಿ ಡಾ| ಮಹಮ್ಮದ್‌ ಗಫಾರ, ಡಾ| ಜಗದೀಶ್ವರ ಬುಳ್ಳ, ಎಇಇ ಅಹೆಮದ್‌ ಹುಸೇನ, ಎಇಇ ಶಿವಶರಣಪ್ಪ ಕೇಶ್ವಾರ, ಎಇಇ ಗುರುರಾಜ ಜೋಶಿ ಗಡಿಕೇಶ್ವಾರ ಗ್ರಾಮದಲ್ಲಿ ಪರಿಹಾರ ಕ್ರಮ ಕೈಗೊಳ್ಳುವಲ್ಲಿ ನಿರತರಾಗಿದ್ದಾರೆ.

ಸಚಿವ ಆರ್.ಅಶೋಕ ಇಂದು ಗಡಿಕೇಶ್ವಾರಕ್ಕೆ ಭೇಟಿ

ರಾಜ್ಯ ಕಂದಾಯ ಸಚಿವ ಆರ್.ಅಶೋಕ ಅ.18ರಂದು ಸೋಮವಾರ ಮಧ್ಯಾಹ್ನ 3ಗಂಟೆಗೆ ಗಡಿಕೇಶ್ವಾರ ಗ್ರಾಮಕ್ಕೆ ಭೇಟಿ ನೀಡಲಿರುವುದರಿಂದ ಅಗತ್ಯ ಪರಿಹಾರ ಕಾರ್ಯ ಚುರುಕಿನಿಂದ ನಡೆಯುತ್ತಿವೆ.

-ಶಾಮರಾವ ಚಿಂಚೋಳಿ

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.