ಒಳಚರಂಡಿ ಒಡೆದು ರಸ್ತೆಯೆಲ್ಲ ಕೊಳಚೆ


Team Udayavani, Jul 6, 2017, 3:24 PM IST

GUB-5.jpg

ಕಲಬುರಗಿ: ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನ ರಸ್ತೆಯ ಆನಂದ ಹೊಟೇಲ್‌ ಬಳಿ ಬುಧವಾರ ಒಳಚರಂಡಿ ಒಡೆದು ಕೊಳಚೆ ನೀರು ಮುಖ್ಯ ರಸ್ತೆಯಲ್ಲಿ ಪ್ರವಾಹೋಪಾದಿಯಲ್ಲಿ ಹರಿದ ಪರಿಣಾಮ ವಾಹನ ಸವಾರರು ತೀವ್ರ
ಸಂಕಷ್ಟಕ್ಕೆ ಒಳಗಾದರು.

ನಗರದಲ್ಲಿ ಆನಂದ ಹೋಟೆಲ್‌ ಅತ್ಯಂತ ಪ್ರಮುಖ ಮಾರ್ಗವಾಗಿದೆ. ಸರ್ದಾರ್‌ ವಲ್ಲಭಬಾಯಿ ಪಟೇಲ್‌ ವೃತ್ತ, ಜಿಲ್ಲಾ ನ್ಯಾಯಾಲಯ, ಜಿಲ್ಲಾಧಿಕಾರಿ ಕಚೇರಿ ಹಾಗೂ ಶ್ರೀ ಶರಣಬಸವೇಶ್ವರ ಕಾಲೇಜು, ಸಾರ್ವಜನಿಕ ಉದ್ಯಾನವನ,
ನೂತನ ವಿದ್ಯಾಲಯ ಮುಂತಾದ ಶಾಲೆ, ಕಾಲೇಜುಗಳು, ಕಚೇರಿಗಳು ಇದ್ದುದರಿಂದ ಕೊಳಚೆ ಪ್ರವಾಹದಲ್ಲಿಯೇ
ಜನರು, ವಿದ್ಯಾರ್ಥಿಗಳು, ವರ್ತಕರು ಹಾಗೂ ಸಾರ್ವಜನಿಕರು ಸಂಚರಿಸುವಂತಾಗಿತ್ತು. ನಗರ ಸಾರಿಗೆ ಬಸ್‌ಗಳು, ಆಟೋಗಳು ಕೊಳಚೆ ಹರಿಯುವ ಪ್ರವಾಹದಲ್ಲಿಯೇ ನಿಲುಗಡೆ ಆಗಿದ್ದರಿಂದ ಕೆಟ್ಟ ವಾಸನೆಯಿಂದಾಗಿ ಪ್ರಯಾಣಿಕರು ಕೆಲ
ಹೊತ್ತಿನವರಿಗೆ ಪರದಾಡಿದರು. ವಿಧಾನ ಪರಿಷತ್‌ ಮಾಜಿ ಸದಸ್ಯ ಶಶೀಲ್‌ ಜಿ. ನಮೋಶಿ ಅವರ ನಿವಾಸದ ಬಲಬದಿಯ ಮೂಲೆಯಲ್ಲಿಯೇ ಒಳಚರಂಡಿ ಒಡೆದು, ಅದರ ಕೊಳಚೆ ನೀರು ಕಾರಂಜಿಯಂತೆ ಚಿಮ್ಮಿ ಆನಂದ ಹೊಟೇಲ್‌ ಮಾರ್ಗವನ್ನು ಪ್ರವಾಹಪೀಡಿತವನ್ನಾಗಿ ಮಾಡಿತು. ಸುದ್ದಿ ತಿಳಿದು ಸುಮಾರು ಒಂದು ತಾಸಿನ ನಂತರ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಒಳಚರಂಡಿ ದುರಸ್ತಿಗೊಳಿಸಿದರು.

ಟಾಪ್ ನ್ಯೂಸ್

1ra

ಗೋವಾದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ

Covid test

ಇಂದೂ ರಾಜ್ಯದಲ್ಲಿ 50  ಸಾವಿರದ ಸನಿಹದಲ್ಲಿ ಕೋವಿಡ್ ಕೇಸ್ : 22 ಸಾವು

1-fdsfsdf

35 ಯೂ ಟ್ಯೂಬ್ ಚಾನಲ್‌ಗಳನ್ನು ಬ್ಲಾಕ್ ಮಾಡಿದ ಭಾರತ ಸರಕಾರ

1-asfsd

ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ : ನಾಚಿಕೆಗೇಡು ಎಂದ ಉತ್ಪಲ್

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ: ಸಚಿವ ಭಗವಂತ್ ಖೂಬಾ

congress

ವೀಕೆಂಡ್ ಕರ್ಫ್ಯೂ ವಾಪಸ್ : ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ

nirani

ಹೌದು,ನಾನು ಸೂಟ್ ಹೊಲಿಸಿಕೊಂಡಿದ್ದೇನೆ:ಯತ್ನಾಳ್ ಗೆ ನಿರಾಣಿ ತಿರುಗೇಟುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14electricity

ಸಿಂಗಲ್‌ ಫೇಸ್‌ ವಿದ್ಯುತ್‌ಗಾಗಿ ಪಾದಯಾತ್ರೆ

13childrens-killed

ಮಕ್ಕಳನ್ನು ಬಾವಿಗೆ ನೂಕಿ ಹತ್ಯೆಗೈದ ಹೆತ್ತ ತಾಯಿ

12street

ಬೀದಿ ವ್ಯಾಪಾರಿಗಳು ಸಂಘಟಿತರಾಗಲಿ: ಜಗನ್ನಾಥ

11govt

ಸರ್ಕಾರಿ ಯೋಜನೆ ಸದುಪಯೋಗ ಮಾಡಿಕೊಳ್ಳಿ: ಪಾಟೀಲ

10goal

ಕೆಕೆಆರ್‌ಡಿಬಿ ನಿಗದಿತ ಗುರಿ ಸಾಧಿಸದ್ದಕ್ಕೆ ಅಸಮಾಧಾನ

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

eಟತಯುಯರಹ

ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

1ra

ಗೋವಾದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ

ದ್ತಯುಇ9ಇಯತಗ್ಸದಷ

ಮೆಕ್ಕೆಜೋಳ ಇ-ಟೆಂಡರ್‌ಗೆ ಭರಪೂರ ಸ್ಪಂದನೆ

1-asasd

ಸುಲೇಮಾನ್ ಸ್ಟೋನ್ ಹೆಸರಿನಲ್ಲಿ ವಂಚನೆ :ಬಾಗಲಕೋಟೆಯಲ್ಲಿ 5 ಲಕ್ಷ ಜಪ್ತಿ

Covid test

ಇಂದೂ ರಾಜ್ಯದಲ್ಲಿ 50  ಸಾವಿರದ ಸನಿಹದಲ್ಲಿ ಕೋವಿಡ್ ಕೇಸ್ : 22 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.